ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಹೈದರಾಬಾದ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವ ವಿಜ್ಞಾನಿಯೋರ್ವ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಮೃತರನ್ನು ಮಂಗಳೂರು ನಗರಕ್ಕೆ ಸಮೀಪದಲ್ಲಿರುವ ಪುತ್ತೂರು ಸಮೀಪದ ಕಲ್ಲರ್ಪೆ ಗ್ರಾಮದ ನಿವಾಸಿ ಭರತ್ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ.
ಬುಧವಾರ ತಡರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಭರತ್ ಎರಡು ತಿಂಗಳ ಹಿಂದೆ ಡಿಆರ್‌ಡಿಒ ಹೈದರಾಬಾದ್ ಘಟಕಕ್ಕೆ ತಾತ್ಕಾಲಿಕವಾಗಿ ಸೇರ್ಪಡೆಗೊಂಡಿದ್ದರು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.
ವಾರದ ಹಿಂದೆಯಷ್ಟೇ ಅವರು ಸ್ವಗ್ರಾಮಕ್ಕೆ ಮರಳಿದ್ದರು. ಕೆಲಸಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದರೂ ಅಂಗೀಕಾರವಾಗಿರಲಿಲ್ಲ. ಸಂತ್ರಸ್ತನಿಗೆ ಗುರುವಾರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಕರೆ ಬಂದಿದ್ದು, ಮರುದಿನ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆಂದು ವರದಿಯಾಗಿದೆ.
ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.