ಕೇರಳ ಸೇರಿದಂತೆ ಕರ್ನಾಟಕದ ಹಲವು ಪ್ರದೇಶದಲ್ಲಿ ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕೇರಳದ ತ್ರಿಶೂರ್ ಜಿಲ್ಲೆಯ ಇಲಿಯಾಸ್ ಪಿ.ಎ. ಎಂಬಾತನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯ ವಾರೆಂಟ್ ಕೂಡ ಹೊರಡಿಸಿತ್ತು.
ಇಲಿಯಾಸ್ ವಿರುದ್ಧ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ತೃಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪುತ್ತೂರು ಉಪವಿಭಾಗದ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ಕೌಶಿಕ್ ನೇತೃತ್ವದಲ್ಲಿ ರಚಿಸಿದ ವಿಶೇಷ ತಂಡವು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

https://shorturl.fm/YJJfH