ಪುತ್ತೂರು | ತಿರಸ್ಕೃತಗೊಂಡ 8420 ಕಡತಗಳ ಮರುಪರಿಶೀಲನೆಗೆ ಶಾಸಕ ಅಶೋಕ್‌ ರೈ ಮನವಿ; ಕಂದಾಯ ಸಚಿವರಿಂದ ಭರವಸೆ

Date:

ಪುತ್ತೂರು ತಾಲೂಕಿನಲ್ಲಿ ತಿರಸ್ಕೃತಗೊಂಡ ಸುಮಾರು 8420 ’94 ಸಿ’ ಮತ್ತು ’94 ಸಿಸಿ’ ಕಡತಗಳನ್ನು ಮರುಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವಂತೆ ಶಾಸಕ ಅಶೋಕ್ ರೈ ಅವರು ಬುಧವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಅವರು, “ಹಿಂದಿನ ದಿನಗಳಲ್ಲಿ ಸರಿಯಾದ ಪರಿಶೀಲನೆ ಇಲ್ಲದೆ ಕಡತಗಳನ್ನು ತಿರಸ್ಕರಿಸಲಾಗಿದೆ. ಈಗ ಆ ಅರ್ಜಿದಾರರ ಬಹುತೇಕರು ಮನೆಗಳನ್ನು ನಿರ್ಮಿಸಿಕೊಂಡು ವಾಸವಿದ್ದು, ಎಲ್ಲ ದಾಖಲೆಗಳನ್ನೂ ಹೊಂದಿದ್ದಾರೆ. ಆದರೆ ಹಕ್ಕುಪತ್ರ ಇಲ್ಲದಿರುವುದರಿಂದ ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆನಡ್ಕ ಹಾಲು ಉತ್ಪಾದಕರ ಸಂಘಕ್ಕೆ ಜಮೀನು ಮಂಜೂರಾತಿ ಶಿಫಾರಸು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಂತಿಗೋಡು ಗ್ರಾಮದ ಆನಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಕಟ್ಟಡ ನಿರ್ಮಾಣಕ್ಕಾಗಿ 0.15 ಸೆಂಟ್ಸ್ ನಿವೇಶನ ಮಂಜೂರಾತಿ ನೀಡಬೇಕು. ಹಲವಾರು ವರ್ಷಗಳಿಂದ ಖಾಸಗಿ ಕಟ್ಟಡದಲ್ಲಿ ವ್ಯವಹಾರ ನಡೆಸುತ್ತಿರುವ ಈ ಸಂಘಕ್ಕೆ ಯಾವುದೇ ಸ್ಥಿರಾಸ್ತಿ ಇಲ್ಲ. ಪುತ್ತೂರು ತಾಲೂಕು ನರಿಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸ.ನಂ: 249/1ಪಿಯಲ್ಲಿನ ಭೂಮಿಯನ್ನು ಸಂಘಕ್ಕೆ ನೀಡಬೇಕೆಂದು ಶಾಸಕ ಅಶೋಕ್‌ ರೈ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Breaking News | ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು!

15 ದಿನಗಳಲ್ಲಿ ಭೂಮಾಪಕರ ಬಾಕಿ ವೇತನ ಪಾವತಿಗೆ ಸೂಚನೆ: ಪುತ್ತೂರು ತಾಲೂಕಿನಲ್ಲಿ ದರ್ಖಸ್ತು ಪ್ರಕರಣಗಳ ಸರ್ವೇ ಕಾರ್ಯಕ್ಕಾಗಿ ನಿಯೋಜಿಸಲಾದ ಸುಮಾರು 40 ಲೈಸೆನ್ಸ್‌ಡ್ ಸರ್ವೇಯರ್‌ಗಳಿಗೆ ಮಾರ್ಚ್ 2025ರಿಂದ ಬಾಕಿ ಉಳಿದ ವೇತನವನ್ನು 15 ದಿನಗಳಲ್ಲಿ ಪಾವತಿಸುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಇಲಾಖೆಗೆ ಸೂಚನೆ ನೀಡಿದ್ದಾರೆ. ಭೂಮಾಪಕರು ಈ ಬಗ್ಗೆ ಶಾಸಕ ಅಶೋಕ್ ರೈ ಅವರ ಗಮನಕ್ಕೆ ತಂದ ಬಳಿಕ ಅವರು ವಿಷಯವನ್ನು ಸಚಿವರ ಮುಂದಿಟ್ಟಿದ್ದರು. ಮುಖ್ಯಮಂತ್ರಿಗಳ ಮಂಗಳೂರು ಭೇಟಿಯ ವೇಳೆ ಸುಮಾರು 1500 ಆರ್‌ಟಿಸಿ ದಾಖಲೆಗಳ ದುರಸ್ತಿ ಕೆಲಸವನ್ನು 3 ತಿಂಗಳೊಳಗೆ ಪೂರ್ಣಗೊಳಿಸಿದ್ದರೂ, ಪ್ರತಿ ಪ್ರಕರಣಕ್ಕೆ ನಿಗದಿಪಡಿಸಲಾದ ₹1200 ವೇತನ ಪಾವತಿಯಾಗಿರಲಿಲ್ಲ. ಶಾಸಕರ ಮನವಿಗೆ ಸ್ಪಂದಿಸಿದ ಸಚಿವರು ವೇತನ ಪಾವತಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...