ಪುತ್ತೂರು | ಅಂಬೇಡ್ಕರ್ ಭವನಕ್ಕಾಗಿ 6 ಕೋಟಿ ಅನುದಾನ ಕೋರಿದ ಶಾಸಕ ಅಶೋಕ್‌ ರೈ

Date:

ಪುತ್ತೂರು ಹಾಗೂ ವಿಟ್ಲದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 6 ಕೋಟಿ ರೂ ಅನುದಾನ ನೀಡುವಂತೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ರಸ್ತೆ ಅಭಿವೃದ್ದಿಗೆ 5 ಕೋಟಿ ರೂ ಅನುದಾನ ನೀಡುವಂತೆ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದರು.

- Advertisement -

ಸಚಿವರನ್ನು ಭೇಟಿಯಾ ಮನವಿ ಸಲ್ಲಿಸಿದ ಅವರು, “ವಿಟ್ಲ ಹಾಗೂ ಪುತ್ತೂರಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾರ್ಯ ಅಗತ್ಯದ ಬೇಡಿಕೆಯಾಗಿದೆ. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಬೇಡಿಕೆ ಇದ್ದು, ಇನ್ನೂ ಅದು ಈಡೇರಿಲ್ಲ. ವಿಟ್ಲ ಹಾಗೂ ಪುತ್ತೂರು ಭಾಗದಲ್ಲಿ ಅಂಬೇಡ್ಕರ್ ನಿರ್ಮಾಣ ಮಾಡುವ ಮೂಲಕ ದಲಿತ ಸಮುದಾಯದ ಬೇಡಿಕೆಗೆ ಮನ್ನಣೆ ನೀಡಬೇಕಿದೆ. ಈ ಉದ್ದೇಶದಿಂದ ಸರಕಾರ ಎರಡೂ ಕಡೆಗಳಲ್ಲಿ ಭವನ ನಿರ್ಮಾಣಕ್ಕೆ ಪ್ರತ್ಯೇಕ ಅನುದಾನವನ್ನು ಒದಗಿಸಬೇಕು” ಎಂದು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮನವಿ ಸ್ವೀಕರಿಸಿದ‌ ಸಚಿವರು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಇಲಾಖೆಯಿಂದ ಅನುದಾನ ಒದಗಿಸುವ ಭರವಸೆಯನ್ನು ನೀಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯಿಂದ ಕಾಲನಿಗಳ ರಸ್ತೆ ಅಭಿವೃದ್ದಿಗೆ ಸಹಕಾರ ನೀಡಲು ಕನಿಷ್ಟ 5 ಕೋಟಿ ಅನುದಾನ ಒದಗಿಸುವಂತೆಯೂ ಶಾಸಕರು‌ ಮನವಿ ಸಲ್ಲಿಸಿದರು.

ಇದನ್ನೂ ಓದಿ: ಪುತ್ತೂರು | ಆಟೋ ಚಾಲಕನ ಮೇಲೆ ಸಂಚಾರಿ ಪೊಲೀಸರ ದರ್ಪ: ಆಟೋ ಚಾಲಕರ ಯೂನಿಯನ್ ಪ್ರತಿಭಟನೆ

“ಪುತ್ತೂರು ಮತ್ತು ವಿಟ್ಲದಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗಬೇಕೆಂಬುದು ನನ್ನ ಕನಸು. ಈಗಾಗಲೇ ದಲಿತ ಸಮುದಾಯದ ಮುಖಂಡರು ನನ್ನನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಅನುದಾನ ನೀಡುವಂತೆ ಸಚಿವರಿಗೆ ಮನವಿ ಮಾಡಿದ್ದೇನೆ. ಖಂಡಿತವಾಗಿಯೂ ಅನುದಾನ ಸಿಗುತ್ತದೆ ಎಂಬ ನಂಬಿಕೆ ಇದೆ. ದಲಿತ ಸಮುದಾಯದ ಅಭಿವೃದ್ದಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೂ ಸರಕಾರದ ಯೋಜನೆಗಳು ಅನುಷ್ಟಾನಗೊಂಡಿದೆ. ಅಂಬೇಡ್ಕರ್ ಭವನ ನಿರ್ಮಾಣದ ಕನಸು ಶೀಘ್ರದಲ್ಲೇ ನನಸಾಗಲಿದೆ. ಜೊತೆಗೆ ರಸ್ತೆ ಅಭಿವೃದ್ದಿಗೂ ಅನುದಾನ ಕೇಳಿದ್ದು ಅದನ್ನು ಕೊಡಿಸುವ ಭರವಸೆ ಸಿಕ್ಕಿದೆ” ಎಂದು ಶಾಸಕ ಅಶೋಕ್ ರೈ ವಿಶ್ವಾಸ ವ್ಯಕ್ತಪಡಿಸಿದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...