ಪುತ್ತೂರು | ಬಿಜೆಪಿ ಮುಖಂಡನ ಪುತ್ರನಿಂದ ವಿದ್ಯಾರ್ಥಿನಿ ಗರ್ಭವತಿ ಪ್ರಕರಣ; ಮಗಳಿಗೆ ನ್ಯಾಯ ಕೊಡಿಸಲು ತಾಯಿ ಆಗ್ರಹ

Date:

Advertisements

ಮದುವೆಯಾಗುವುದಾಗಿ ನಂಬಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಿಜೆಪಿ ಮುಖಂಡನ ಪುತ್ರನೋರ್ವ ಯುವತಿಯ ಜೊತೆ ದೈಹಿಕ ಸಂಪರ್ಕ ನಡೆಸಿ ಇದೀಗ ಕೈಕೊಟ್ಟು ನಾಪತ್ತೆಯಾಗಿರುವ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಮಗುವಿಗೆ ಜನ್ಮ ನೀಡಿದ್ದು, ಸಂತ್ರಸ್ತೆಯ ತಾಯಿ ಇದೀಗ ಮಗಳಿಗೆ ನ್ಯಾಯ ಕೊಡಿಸಲು ಮಾಧ್ಯಮಗಳ ಮುಂದೆ ಬಂದಿದ್ದಾರೆ.

ಪುತ್ತೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಂತ್ರಸ್ತೆಯ ತಾಯಿ, “ನನ್ನಮಗಳು ಮತ್ತು ಆರೋಪಿ ಕೃಷ್ಣ.ಜೆ.ರಾವ್ ಪ್ರೌಢ ಶಾಲೆಯಲ್ಲಿರುವಾಗಲೇ ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕದ ದಿನಗಳಲ್ಲಿಯೂ ಈ ಪ್ರೀತಿ ಮುಂದುವರಿದು ದೈಹಿಕ ಸಂಪರ್ಕದವರೆಗೂ ಸಾಗಿದೆ. ಆದರೆ ಮಗಳಿಗೆ ಗರ್ಭಿಣಿಯಾಗಿ ಏಳು ತಿಂಗಳ ಬಳಿಕ ನಮಗೆ ವಿಚಾರ ತಿಳಿದು ಬಂತು” ಎಂದರು.

“ಮಗಳು ಗರ್ಭಿಣಿಯಾದ ವಿಚಾರವನ್ನು ನಾನು ಯುವಕನ ತಂದೆ ಪಿ.ಜಿ.ಜಗನ್ನಿವಾಸ್ ರಾವ್ ಅವರ ಬಳಿ ಪ್ರಶ್ನಿಸಿದ್ದೇವೆ. ಅವರು ಅವತ್ತೇ ಇಬ್ಬರನ್ನೂ ಮದುವೆ ಮಾಡುವ ಭರವಸೆಯನ್ನು ನೀಡಿದ್ದರು. ಈ ವೇಳೆ ಆರೋಪಿ ಕೃಷ್ಣ.ಜೆ.ರಾವ್ ನನಗೆ ಕಾಲ್ ಮಾಡಿ ಮಗಳನ್ನು ಮದುವೆಯಾಗುವುದಿಲ್ಲ ಎಂದು ತಿಳಿಸಿದ್ದಾನೆ. ಒತ್ತಾಯ ಮಾಡಿದಲ್ಲಿ ನಾನು ಆತ್ಮಹತ್ಯೆ ಮಾಡುವುದಾಗಿಯೂ ಹೇಳಿ ಬೆದರಿಕೆ ಹಾಕಿದ್ದ. ಈ ಹಿನ್ನೆಲೆ ನಾವು ಆತನ ವಿರುದ್ಧ ದೂರು ನೀಡಲು ಪುತ್ತೂರು ಮಹಿಳಾ ಠಾಣೆಗೆ ಹೋಗಿದ್ದೆವು. ಆ ಸಂದರ್ಭದಲ್ಲಿ ಆರೋಪಿಯ ತಂದೆ ಪಿ‌.ಜಿ.ಜಗನ್ನಿವಾಸ್ ಕೂಡ ಠಾಣೆಗೆ ಬಂದಿದ್ದರು. ಆರೋಪಿಯ ತಂದೆ ಠಾಣೆಯಿಂದ ಶಾಸಕ ಅಶೋಕ್ ಕುಮಾರ್ ರೈ ಗೆ ಕಾಲ್ ಮಾಡಿದ್ದಾರೆ. ಬಳಿಕ ಶಾಸಕರು ನನ್ನ ಬಳಿ ಮಾತನಾಡಿದ್ದಾರೆ. ಕೇಸು ಹಿಂಪಡೆಯಿರಿ, ಹುಡುಗನ ಭವಿಷ್ಯದ ಪ್ರಶ್ನೆ ಎಂದು ಹೇಳಿದ್ದರು. ಇಬ್ಬರನ್ನೂ ಮದುವೆ ಮಾಡಿಸಿ ಕೊಡುವುದಕ್ಕೆ ಪ್ರಯತ್ನಿಸುವುದಾಗಿಯೂ ಹೇಳಿದ್ದರು” ಎಂದು ವಿವರಿಸಿದರು.

Advertisements

ಮದುವೆ ಮಾಡಿಕೊಡುವುದಾಗಿ ಠಾಣೆಯಲ್ಲಿ ಆರೋಪಿಯ ತಂದೆ ಜಗನ್ನಿವಾಸ್ ಮುಚ್ಚಳಿಕೆಯನ್ನೂ ಬರೆದು ಕೊಟ್ಟಿದ್ದಾರೆ. ಜೂನ್ 23ಕ್ಕೆ ಆರೋಪಿಗೆ 21 ವರ್ಷ ತುಂಬಿತ್ತು. ಜೂನ್ 22ರಂದು ಆರೋಪಿ ನನಗೆ ಕಾಲ್ ಮಾಡಿ ನಿಮ್ಮ ಮಗಳನ್ನು ನಾನು ಮದುವೆಯಾಗೋದಿಲ್ಲ ಎಂದು ತಿಳಿಸಿದ್ದಾನೆ. ಅಲ್ಲದೆ ಆತನ ತಾಯಿ ನಿಮ್ಮ ಮಗಳನ್ನು ಆತನಿಗೆ ಮದುವೆ ಮಾಡುವ ಸಾಧ್ಯತೆಯೂ ಇಲ್ಲ ಎಂದು ಹೇಳಿ ಮಗುವನ್ನು ಅಬೋರ್ಷನ್ ಮಾಡಿ ತೆಗಿಸಿ, ಅದಕ್ಕೆ ಬೇಕಾದ ಹಣವನ್ನು ಕೊಡುತ್ತೇವೆ ಎಂದು ಆರೋಪಿಯ ತಂದೆ ನಮಗೆ ಹೇಳಿದ್ದಾರೆ. ಆದರೆ ನಾವು ಅದಕ್ಕೆ ಒಪ್ಪಿಲ್ಲ. ಮಗು ಆರೋಪಿ ಕೃಷ್ಣ.ಜೆ.ರಾವ್ ನದ್ದೇ ಎನ್ನುವುದಕ್ಕೆ ಎಲ್ಲಾ ಪುರಾವೆಗಳೂ ಇವೆ. ನಾವು ಮೊದಲಿನಿಂದಲೇ ಮಗುವಿನ ಡಿ.ಎನ್.ಎ ಪರೀಕ್ಷೆ ಮಾಡಲು ಸಿದ್ಧರಿದ್ದೇವೆ. ಮಗುವಿಗೆ ಮೂರು ತಿಂಗಳು ಕಳೆದ ಬಳಿಕ ಡಿಎನ್ಎ ಪರೀಕ್ಷೆ ನಡೆಸಲಾಗುತ್ತದೆ ಎಂದರು.

ಮೊದಲು ಶಾಸಕ ಅಶೋಕ್ ಕುಮಾರ್ ರೈ ದೂರು ನೀಡಲು ಹೋದಾಗ ತಡೆದಿದ್ದರು. ಆದರೆ ಈಗ ನೀವು ದೂರು ನೀಡಿ ಎಂದು ಹೇಳಿದ್ದಾರೆ. ಇನ್ನು ಆರೋಪಿ ನಾಪತ್ತೆಯಾಗಿ 5 ದಿನ ಕಳೆದರೂ ಪೋಲೀಸರು ಆತನನ್ನು ಬಂಧಿಸಿಲ್ಲ. ಎಸ್‌ಪಿಯನ್ನೂ ಭೇಟಿ ಮಾಡಿ ನಮಗಾದ ಅನ್ಯಾಯದ ಬಗ್ಗೆ ತಿಳಿಸಿದ್ದೇವೆ. ಆದರೆ ಪೊಲೀಸ್ ಇಲಾಖೆ ಈ ಪ್ರಕರಣದಲ್ಲಿ ಸೈಲೆಂಟ್ ಆಗಿದೆ ಎಂದು ಅನಿಸುತ್ತಾ ಇದೆ ಎಂದರು.

ತಾಯಿ 1

ಹಿಂದೂ ಪರ ಸಂಘಟನೆಗಳ ಮೊರೆ ಹೋಗಿದ್ದೇವೆ, ಆದರೆ ಅವರು ಆದರೆ ಯಾರು ಕೂಡಾ ನಮಗೆ ಸರಿಯಾಗಿ ಸ್ಪಂದಿಸಿಲ್ಲ, ಬೇರೆ ಕೋಮಿನ ಯುವತಿಯಾಗಿದ್ದಿದ್ದರೆ ಇಷ್ಟು ಹೊತ್ತಿಗೆ ಮದುವೆ ಮಾಡಿಸುತ್ತಿದ್ದರು. ಆದರೆ ಈಗ ಅವರು ಸುಮ್ಮನಾಗಿದ್ದಾರೆ ಎಂದು ಸಂತ್ರಸ್ತ ಯುವತಿಯ ತಾಯಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ತಮ್ಮನ ಅಂತ್ಯ ಸಂಸ್ಕಾರಕ್ಕೆ ಬಂದು ಹೆಣವಾದ ಅಕ್ಕ

“ಮಗಳು ಕಳೆದ ಶುಕ್ರವಾರ ಮಗುವಿಗೆ ಜನ್ಮ ನೀಡಿದ್ದು, ಯಾರೂ ಕೂಡ ನ್ಯಾಯ ಕೊಡಿಸುವ ಭರವಸೆ ನೀಡುತ್ತಿಲ್ಲ. 10 ಲಕ್ಷ ಕೊಡ್ತೇವೆ. ಮಗುವನ್ನು ತೆಗೆಸ್ತೀರಾ ಅಂತ ಹಿಂದೂ ಮುಖಂಡರಲ್ಲಿ ಕೇಳಿಸಿದ್ದಾರೆ. 10 ಲಕ್ಷ ಅಲ್ಲ ಒಂದು ಕೋಟಿ ಕೊಟ್ಟರೂ ನನಗೆ ಬೇಡ. ನನ್ನ ಮಗಳಿಗೆ ನ್ಯಾಯ ಕೊಡಿಸಿ” ಎಂದು ಸಂತ್ರಸ್ತ ಯುವತಿಯ ತಾಯಿ ಮಾಧ್ಯಮಗಳ ಮುಂದೆ ಮನವಿ ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X