ಬೀದರ್‌ | ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಇಂದಿನ ಅಗತ್ಯ : ಬಸವಲಿಂಗ ಪಟ್ಟದ್ದೇವರು

Date:

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.

- Advertisement -

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಆಡಿಟೋರಿಯಂ ಹಾಲ್‌ನಲ್ಲಿ ಶನಿವಾರ ಆಯೋಜಿಸಿದ್ದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಪಾಲಕರ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ಮಕ್ಕಳ ಸರ್ವತೋಮುಖ ಬೆಳವಣಿಗೆ ಶಿಕ್ಷಣದಲ್ಲಿ ಅಡಗಿದೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಪ್ರಸಾದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆ ಕಾರಣಕ್ಕಾಗಿಯೇ 40 ಮಕ್ಕಳಿಂದ ಶುರುವಾದ ಶಿಕ್ಷಣ ಸಂಸ್ಥೆಯಲ್ಲಿಂದು ಸಾವಿರಾರೂ ವಿದ್ಯಾರ್ಥಿಗಳು ಸುಸ್ಸಜಿತ ಕಟ್ಟಡಗಳಲ್ಲಿ ಅಗತ್ಯ ಸೌಲಭ್ಯಗಳೊಂದಿಗೆ ಉತ್ತಮ ಶಿಕ್ಷಣ ಪಡೆಯುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ರ‍್ಯಾಂಕ್ ಪಡೆಯುತ್ತಿರುವುದು ಇಲ್ಲಿಯ ಗುಣಾತ್ಮಕ ಶಿಕ್ಷಣಕ್ಕೆ ಹಿಡಿದ ಕೈಗನ್ನಡಿ. ಮುಂದಿನ ದಿನಗಳಲ್ಲಿ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ನಮ್ಮ ಸಂಸ್ಥೆಯಿಂದ ಟಾಪ್ 10 ಒಳಗೆ ರ‍್ಯಾಂಕ್ ತರುವ ಗುರಿ ಹೊಂದಲಾಗಿದೆ” ಎಂದು ತಿಳಿಸಿದರು.

ನೇತೃತ್ವ ವಹಿಸಿದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, “ಪಾಲಕರ ನಿರೀಕ್ಷೆಯಂತೆ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಪಾಲಕರು  ಕೋರ್ಸ್ ಆಯ್ಕೆಗೆ ಮಕ್ಕಳಿಗೆ ಮುಕ್ತ ಅವಕಾಶ ನೀಡಬೇಕು ಇದರಿಂದ ಮಕ್ಕಳು ಆಸಕ್ತಿಯಿಂದ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ. ಬಸವಣ್ಣನವರು ಆಚರವೇ ಸ್ವರ್ಗ ಎಂದಿದ್ದಾರೆ. ಅದರಂತೆ ವಿದ್ಯಾರ್ಥಿ ಜೀವನದಲ್ಲಿ ಮಕ್ಕಳು ನಡುವಳಿಕೆ, ಮನಸ್ಸು, ಶರೀರ ಉತ್ತಮವಾಗಿರಿಸಿಕೊಂಡರೇ ಸಾಧನೆಯ ಶಿಖರನೇರಲು ಸಾಧ್ಯವಾಗುತ್ತದೆ” ಎಂದು ಹೇಳಿದರು.

ಇದೇ ವೇಳೆ ಪಿಯುಸಿ, ಸಿಇಟಿ ಮತ್ತು ನೀಟ್‌ನಲ್ಲಿ ಉತ್ತಮ ರ‍್ಯಾಂಕ್ ಪಡೆದು ಕಾಲೇಜಿಗೆ ಟಾಪರ್ ಆಗಿ ಹೊರಹೊಮ್ಮಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನೀಟ್‌ನಲ್ಲಿ ರಾಷ್ಟ್ರ ಮಟ್ಟದಲ್ಲಿ 720ಕ್ಕೆ 691 ಅಂಕ ಪಡೆದ ಸಂಜನಾ ದಶವಂತ, ಸಿಇಟಿಯಲ್ಲಿ ರಾಜ್ಯಕ್ಕೆ 38ನೇ ರ‍್ಯಾಂಕ್ ಪಡೆದ ಮಹೇಶ ಚನ್ನಬಸವರಾಜ ಮತ್ತು ಪಿಯುಸಿಯಲ್ಲಿ 600ಕ್ಕೆ 593 ಅಂಕ ಪಡೆದ ರಕ್ಷಿತಾ ಸಂಜೀವಕುಮಾರ ಅವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.

ಹಿರಿಯ ಪತ್ರಕರ್ತ ದೇವಯ್ಯ ಗುತ್ತೇದಾರ ಮಾತನಾಡಿದರು. ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ

ಈ ಸಂದರ್ಭದಲ್ಲಿ ನಿವೃತ್ತ ಎಂಜಿನಿಯರ್ ವಿಲಾಸ ಮಾಶೆಟ್ಟೆ, ಉಪಪ್ರಾಚಾರ್ಯ ಸಿದ್ರಾಮ ಗೊಗ್ಗಾ, ರಾಜಕುಮಾರ ಸಿರ್ಗಾಪೂರೆ‌, ಕಚೇರಿ ಅಧೀಕ್ಷಕ ಗಣಪತಿ ಭೂರೆ, ಉಪನ್ಯಾಸಕರಾದ ಶ್ರೀನಿವಾಸ ರೆಡ್ಡಿ, ಗೋಪಿನಾಥ, ರಾಘವೇಂದ್ರ, ಅಜಿಮೋದ್ದಿನ್, ಆಂಜನೇಯವೇಲು, ನೀರಾ ಷರೀಫ್, ಸದಾ ವಿಜಯ, ನಿರಜ್ ಶ್ರೀಕಾಂತ, ಓಂಕಾರ, ಸೋಮನಾಥ ಅಕ್ಕಣ್ಣ, ಶಶಿಧರ ಕುಲಕರ್ಣಿ, ಪರೀಕ್ಷಾ ಕಾರ್ಯದರ್ಶಿ ಶಿವಪ್ರಕಾಶ ಕುಂಬಾರ, ವಸತಿ ನಿಲಯದ ಮೇಲ್ವಿಚಾರಕ ಮನೋಹರ ಕಾಡೋದೆ, ಪ್ರೇಮಾ ಸೇರಿದಂತೆ ಹಲವರು ಇದ್ದರು. ವಿದ್ಯಾರ್ಥಿನಿ ಸಮೀಕ್ಷಾ ಗುತ್ತೇದಾರ ಸಂಗಡಿಗರು ವಚನ ಪ್ರಾರ್ಥನೆ ನಡೆಸಿಕೊಟ್ಟರು. ಲಚಮ್ಮಾ ರೆಡ್ಡಿ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...