ಉಡುಪಿ | ಬಂಡವಾಳಶಾಹಿಗಳ ಬೆಂಬಲದಿಂದ ಪ್ಯಾಲೆಸ್ತೀನ್‌ನಲ್ಲಿ ನರಮೇಧ: ಸಾಹಿತಿ ರಘುನಂದನ

Date:

Advertisements

ಬಂಡವಾಳಶಾಹಿ ಪ್ರಪಂಚದ ಬೆಂಬಲದೊಂದಿಗೆ ಪ್ಯಾಲೆಸ್ತೀನ್ ಗಾಝಾದಲ್ಲಿ ಇಂದು ನಿರಂತರವಾಗಿ ನರಮೇಧ ಹಾಗೂ ಸಾಮೂಹಿಕ ಕಗ್ಗೊಲೆ ನಡೆಯುತ್ತಿದೆ. ಭಾರತ ಸ್ವಾತಂತ್ರ್ಯ ಪೂರ್ವದಿಂದಲೂ ಪ್ಯಾಲೆಸ್ತೀನ್‌ಗೆ ಬೆಂಬಲವಾಗಿ ನಿಂತು, ಅದಕ್ಕೆ ನ್ಯಾಯ ಸಿಗಬೇಕೆಂಬ ನಿಲುವನ್ನು ಹೊಂದಿದೆ. ಇಂದಿಗೂ ನಮ್ಮ ದೇಶದ ಅಧಿಕೃತ ನೀತಿ ಅದೇ ಆಗಿದೆ. ಆದರೆ ಅದನ್ನು ಈಗಿನ ಸರಕಾರ ಪಾಲಿಸುತ್ತಿಲ್ಲ. ಇಸ್ರೇಲ್‌ಗೆ ಸಶಸ್ತ್ರವನ್ನು ಕೂಡ ನಮ್ಮ ದೇಶ ನೀಡುತ್ತಿದೆ. ಉನ್ನತ ಮೌಲ್ಯವನ್ನು ಎತ್ತಿ ಹಿಡಿದಿದ್ದ ಭಾರತ ಇಂದು ಯಾವ ಸ್ಥಿತಿಗೆ ಬಂದಿದೆ ಎಂಬುದನ್ನು ಯೋಚಿಸಬೇಕಾಗಿದೆ ಎಂದು ಕವಿ, ಸಾಹಿತಿ ರಘುನಂದನ ಹೇಳಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ವತಿಯಿಂದ ಬುಧವಾರ ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಲಾದ ಮುದ್ದಣ ಸಾಹಿತ್ಯೋತ್ಸವದಲ್ಲಿ ಅವರು ‘ತುಯ್ತವೆಲ್ಲ ನವ್ಯದತ್ತ: ಅಂದತ್ತರ ಉಯ್ಯಾಲೆ ಮತ್ತು ಅದರ ಸುತ್ತ’ ಎಂಬ ಕೃತಿಗೆ ವಿ.ಎಂ.ಇನಾಂದರ್ ವಿಮರ್ಶಾ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದರು.

1005155443

ನಮ್ಮ ದೇಶದಲ್ಲಿ ಸಂವಿಧಾನಬದ್ಧವಾಗಿ ಹಾಗೂ ಶಾಂತಿಯುತವಾಗಿ ಪ್ರತಿಭಟಿಸಿದ ಅನೇಕ ಧೀಮಂತರನ್ನು ಜೈಲಿಗೆ ದೂಡಲಾಗಿದೆ. ಇವರೇ ಈ ದೇಶದ ನಿಜವಾದ ದೇಶಪ್ರೇಮಿಗಳು. 2020ರಲ್ಲಿ ದೆಹಲಿ ಗಲಭೆಯನ್ನು ಹುಟ್ಟುಹಾಕಿದ ಕೆಲವರನ್ನು ಜೈಲಿಗೆ ಹಾಕಲಾಗಿದೆ. ಅವರ ಮೇಲೂ ದೇಶದ್ರೋಹದ ಕೇಸುಗಳನ್ನು ದಾಖಲಿಸಲಾಗಿದೆ. ಅದೇ ರೀತಿ ಅನೇಕ ಆದಿವಾಸಿಗಳು ಬಡವರು ಇಂದು ಜೈಲಿನಲ್ಲಿದ್ದಾರೆ ಎಂದು ಅವರು ಖೇಧ ವ್ಯಕ್ತಪಡಿಸಿದರು.

Advertisements

ಇನ್ನೋರ್ವ ಮುಖ ಅತಿಥಿಯಾಗಿ ಆಗಮಿಸಿದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಹಾಗೂ ಸಾಹಿತಿ ನರೇಂದ್ರ ರೈ ದೇರ್ಲ ‘ಯುವಜನತೆ ಮತ್ತು ಪರಿಸರ ಕಾಳಜಿ’ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ವಹಿಸಿದ್ದರು. ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ ನಾಯಕ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ, ಕಾಲೇಜಿನ ಉಪ ಪ್ರಾಂಶುಪಾಲ ಡಾ.ವಿಶ್ವನಾಥ ಪೈ ಎಂ. ಉಪಸ್ಥಿತರಿದ್ದರು. ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ ಶೆಟ್ಟಿ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪುತ್ತಿ ವಸಂತ ಕುಮಾ‌ರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಅದಿತಿ ಪ್ರಶಸ್ತಿ ಪತ್ರ ವಾಚಿಸಿದರು. ಕನ್ನಡ ಉಪನ್ಯಾಸಕಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ವಂದಿಸಿದರು. ಕನ್ನಡ ಉಪನ್ಯಾಸಕ ರಾಘವೇಂದ್ರ ತುಂಗ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X