ಚುನಾವಣೆ 2023 | ಭಾರತ್ ಜೋಡೋ ಸಾಗಿದ ಕ್ಷೇತ್ರಗಳಲ್ಲಿ ಬಿಜೆಪಿ ಪರಾಜಯ; ಕಾಂಗ್ರೆಸ್‌ಗೆ ಗೆಲುವು

Date:

ಭಾರತ್ ಜೋಡೋ ಯಾತ್ರೆ ಸಾಗಿದ ದಾರಿಯಲ್ಲಿ ಬಿಜೆಪಿ ವಿರೋಧಿ ಭಾವನೆ ಆಕ್ರೋಶವಾಗಿ ಬದಲಾಗಿ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಲಾಭವಾಗಿ ಪರಿಣಮಿಸಿದರೆ, ಬಿಜೆಪಿಗೆ ಅತಿದೊಡ್ಡ ನಷ್ಟವನ್ನು ತಂದಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಸಾಗಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಿಂದ ಈ ಬಾರಿಯ ಚುನಾವಣೆ ಮೇಲೆ ಪ್ರಭಾವ ಕಂಡು ಬಂದಿದೆಯೇ ಎನ್ನುವ ಪ್ರಶ್ನೆ ರಾಷ್ಟ್ರೀಯ ಮತ್ತು ಕನ್ನಡ ಮಾಧ್ಯಮಗಳಲ್ಲಿ ಕೇಳಿ ಬಂದಿದೆ.

ಕೇಂದ್ರದ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರು ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ. ವಾಸ್ತವವೇನು? ಅಂಕಿ- ಅಂಶಗಳನ್ನು ನೋಡಿದರೆ, ಭಾರತ್ ಜೋಡೋ ಯಾತ್ರೆ ಸಾಗಿದ ದಾರಿಯಲ್ಲಿ ಬಿಜೆಪಿ ವಿರೋಧಿ ಭಾವನೆ ಆಕ್ರೋಶವಾಗಿ ಬದಲಾಗಿ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಲಾಭವಾಗಿ ಪರಿಣಮಿಸಿದರೆ, ಬಿಜೆಪಿಗೆ ಅತಿದೊಡ್ಡ ನಷ್ಟವನ್ನು ತಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕರ್ನಾಟಕದಲ್ಲಿ ಭಾರತ ಜೋಡೋ ಯಾತ್ರೆ ಒಟ್ಟು 21 ವಿಧಾನಸಭಾ ಕ್ಷೇತ್ರದಲ್ಲಿ ಸಾಗಿತ್ತು. ಅವುಗಳ ಪೈಕಿ ಈ ಬಾರಿಯ ಚುನಾವಣೆಯಲ್ಲಿ 16 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಜೆಡಿಎಸ್ ಮೂರು, ಎಸ್‌ಕೆಪಿಯ ದರ್ಶನ್ ಪುಟ್ಟಣ್ಣಯ್ಯ 1 ಮತ್ತು ಬಿಜೆಪಿ ಒಂದು ಕ್ಷೇತ್ರಗಳನ್ನು ಗೆದ್ದುಕೊಂಡಿದ್ದಾರೆ.

ಆದರೆ, 2018ರ ಚುನಾವಣೆಯಲ್ಲಿ ಇವುಗಳಲ್ಲಿ ಬಹುತೇಕ ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಯಲ್ಲಿ ಇರಲಿಲ್ಲ ಎನ್ನುವುದನ್ನು ಗಮನಿಸಬೇಕಾಗುತ್ತದೆ. ಈ 21 ಕ್ಷೇತ್ರಗಳ ಪೈಕಿ 12 ಬಿಜೆಪಿಯ ತೆಕ್ಕೆಯಲ್ಲಿದ್ದರೆ, ಜೆಡಿಎಸ್ ಬಳಿ 4 ಕ್ಷೇತ್ರಗಳಿದ್ದವು. ಕಾಂಗ್ರೆಸ್ ಬಳಿ 5 ಸ್ಥಾನಗಳಷ್ಟೇ ಇದ್ದವು. ಯಾತ್ರೆಯ ಮಾರ್ಗದಲ್ಲಿದ್ದ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 5 ಕ್ಷೇತ್ರಗಳಿಂದ 16 ಕ್ಷೇತ್ರಗಳಿಗೆ ಏರಿದೆ.

ಈ ಸುದ್ದಿ ಓದಿದ್ದೀರಾ?: ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

ಯಾವ ಯಾವ ಕ್ಷೇತ್ರಗಳು?

ಅಂಕಿ- ಅಂಶಗಳ ಪ್ರಕಾರ ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಒಟ್ಟು 21 ವಿಧಾನಸಭಾ ಕ್ಷೇತ್ರದಲ್ಲಿ ಸಾಗಿತ್ತು. ಈ ಕ್ಷೇತ್ರಗಳೆಂದರೆ, ಗುಂಡ್ಲುಪೇಟೆ, ನಂಜನಗೂಡು, ವರುಣ, ನರಸಿಂಹರಾಜ, ಶ್ರೀರಂಗಪಟ್ಟಣ, ಮೇಲುಕೋಟೆ, ನಾಗಮಂಗಲ,  ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ, ಹೊಸದುರ್ಗ, ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು, ಕೂಡ್ಲಿಗಿ, ಬಳ್ಳಾರಿ, ಬಳ್ಳಾರಿ ನಗರ, ಮಾನ್ವಿ, ರಾಯಚೂರು ಗ್ರಾಮೀಣ, ರಾಯಚೂರು, ದೇವದುರ್ಗ ಕ್ಷೇತ್ರಗಳಲ್ಲಿ ಸಾಗಿತ್ತು.

ಇವುಗಳಲ್ಲಿ ಗುಂಡ್ಲುಪೇಟೆ, ನಂಜನಗೂಡು, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ, ಹೊಸದುರ್ಗ, ಹಿರಿಯೂರು, ಮೊಳಕಾಲ್ಮೂರು, ಕೂಡ್ಲಿಗಿ, ಬಳ್ಳಾರಿ ನಗರ, ದೇವದುರ್ಗ ಮೊದಲಾಗಿ 11 ಕ್ಷೇತ್ರಗಳನ್ನು ಈ ಬಾರಿ ಬಿಜೆಪಿ ಕಳೆದುಕೊಂಡಿದೆ. ರಾಯಚೂರು ಕ್ಷೇತ್ರವನ್ನು ಮಾತ್ರವೇ ತೀವ್ರ ಸ್ಪರ್ಧೆಯ ನಡುವೆ ಉಳಿಸಿಕೊಂಡಿದೆ. ಡಾ ಶಿವರಾಜ್ ಪಾಟೀಲ್ ಅವರು 2018ರಲ್ಲೂ ಈ ಕ್ಷೇತ್ರವನ್ನು ಗೆದ್ದಿದ್ದು, ಈ ಬಾರಿಯೂ ಶಾಸಕ ಸ್ಥಾನ ಉಳಿಸಿಕೊಂಡಿದ್ದಾರೆ.

ಉಳಿದಂತೆ, ತುರುವೇಕೆರೆ, ಚಿಕ್ಕನಾಯಕನಹಳ್ಳಿ ಹಾಗೂ ದೇವದುರ್ಗಗಳನ್ನು ಬಿಜೆಪಿ ಜೆಡಿಎಸ್‌ಗೆ ಕಳೆದುಕೊಂಡಿದೆ. ಜೆಡಿಎಸ್ ತೆಕ್ಕೆಯಲ್ಲಿದ್ದ ಮಾನ್ವಿ, ನಾಗಮಂಗಲ ಹಾಗೂ ಶ್ರೀರಂಗಪಟ್ಟಣ ಕ್ಷೇತ್ರಗಳು ಕಾಂಗ್ರೆಸ್ ಕಡೆಗೆ ವಾಲಿವೆ. 2018ರಲ್ಲಿ ಜೆಡಿಎಸ್  ಗೆದ್ದಿದ್ದ ಮೇಲುಕೋಟೆಯನ್ನು ಈ ಬಾರಿ ಎಸ್‌ಕೆಪಿ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಗೆದ್ದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಮಸ್ಲಿಮರನ್ನು ಒಬಿಸಿಗೆ ಸೇರಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌: ಮೋದಿಗೆ ದ್ವಾರಕಾನಾಥ್ ಇತಿಹಾಸ ಪಾಠ

"ಒಬಿಸಿಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಸಂಚನ್ನು ಮೋದಿ ರೂಪಿಸಿದ್ದಾರೆ, ಮಂಡಲ್‌ ಆಯೋಗ...

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...