ಮೋದಿಯವರನ್ನು ಎದುರಿಸಬಲ್ಲ ಸಮರ್ಥ ನಾಯಕ ರಾಹುಲ್‌ ಗಾಂಧಿ: ಕೆಪಿಸಿಸಿ ಕಾರ್ಯದರ್ಶಿ ಮನೋಹರ್

Date:

Advertisements

ದೇಶದ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅತ್ಯಂತ ಸಮರ್ಥ/ಜವಾಬ್ದಾರಿಯುತವಾಗಿ ಎದುರಿಸಬಲ್ಲ ನಾಯಕ ರಾಹುಲ್‌ ಗಾಂಧಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಹೇಳಿದರು.

ಇಂದು ಬೆಂಗಳೂರಿನ ಶೇಷಾದ್ರಿಪುರದ ಕರ್ನಾಟಕ ಅಂಧ ಮಕ್ಕಳ ಶಾಲೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರ 55ನೇ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ರಾಹುಲ್‌ ಗಾಂಧಿ ಅವರ ಹೇಳಿಕೆಗಳನ್ನು ಬಿಜೆಪಿ ನಾಯಕರು ಹಾಗೂ ಕೇಂದ್ರದ ಅನೇಕ ಸಚಿವರು ಅಪಹಾಸ್ಯ ಮಾಡುತ್ತಿದ್ದರು. ಆದರೆ, ಇಂದು ದೇಶದ ಜನ ರಾಹುಲ್ ಅವರ ಹೇಳಿಕೆಗಳನ್ನು ಸ್ವಾಗತಿಸಿ ಅವರ ಬೆಂಬಲಕ್ಕೆ ನಿಂತು ಕೇಂದ್ರ ಸರ್ಕಾರದ ಇಬ್ಭಗೆ ನೀತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಜಾತಿಗಣತಿ ಪ್ರಸ್ತಾವನೆಯನ್ನು ಇಂದು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ರಾಹುಲ್ ಗಾಂಧಿ ಅವರ ದೂರದೃಷ್ಟಿ ಯೋಜನೆಗಳನ್ನ ಕಾರ್ಯಗತಗೊಳಿಸುವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ. ಅವರ ಸಲಹೆಯನ್ನು ತಿರಸ್ಕರಿಸುವ ಕೇಂದ್ರ ಸರ್ಕಾರಕ್ಕೆ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಹಾದಿಯಲ್ಲಿ ಹಿನ್ನಡೆಯಾಗಿರುವುದು ಸಾಬೀತಾಗಿದೆ.
ದೇಶದ ರಕ್ಷಣೆ ವಿಷಯದಲ್ಲಿ ಯುವ ಪೀಳಿಗೆಗೆ ಹಾಗೂ ಬಡವರ ಬಗ್ಗೆ ಹೆಚ್ಚು ಕಾಳಜಿ ಹೊಂದಿರುವ ನಾಯಕ ರಾಹುಲ್‌ ಗಾಂಧಿ. ಅವರ ಬಡವರ ಪರ ಕಾಳಜಿ ಕಾರ್ಯಗಳು ಮತ್ತಷ್ಟು ಮುಂದುವರೆಯಲಿ” ಎಂದು ಶುಭಾಷಯ ತಿಳಿಸಿದರು.

WhatsApp Image 2025 06 19 at 11.42.44 AM

ಕಾರ್ಯಕ್ರಮದಲ್ಲಿ ಕುಶಾಲ್ ಹರುವೇಗೌಡ, ಪುಟ್ಟರಾಜು, ಓಬಳೇಶ್, ಉಮೇಶ್, ನವೀನ್ ಸಾಯಿ, ಆನಂದ್ ಕುಮಾರ್, ಪ್ರವೀಣ್, ಸಂಜಯ್ ಸಶಿಮಠ ಸೇರಿದಂತೆ ಹಲವಾರು ಕಾರ್ಯಕರ್ತರು, ಅಂಧ ಮಕ್ಕಳು ಉಪಸ್ಥಿತರಿದ್ದರು.

Advertisements

ಇದನ್ನೂ ಓದಿ: ಬೆಂಗಳೂರು | ಅಲೆಮಾರಿ ಸಮುದಾಯ, ಲೈಂಗಿಕ ಕಾರ್ಯಕರ್ತೆಯರ ಕುಟುಂಬಕ್ಕೆ ಮನೆ ಹಕ್ಕುಪತ್ರ ವಿತರಣೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X