ನಗರ ವ್ಯಾಪ್ತಿಯ ಖಾಲಿ ನಿವೇಶನಗಳಲ್ಲಿ ಕಸದ ರಾಶಿ ಹಾಗೂ ಕಟ್ಟಡ ಭಗ್ನಾವಶೇಷಗಳನ್ನು ಹಾಕಿ ಶುಚಿತ್ವ ಕಾಪಾಡದ ನಿವೇಶನದಾರರಿಗೆ ₹5 ಸಾವಿರ ದಿಂದ ₹50 ಸಾವಿರ ವರೆಗೆ ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ.
7 ದಿನಗಳ ಗಡುವು
ಸಾರ್ವಜನಿಕ ಪ್ರಕಟಣೆ ಹೊರಡಿಸಿದ ಏಳು ದಿನಗಳೊಳಗೆ ನಿವೇಶನದಾರರು ತಮ್ಮ ಖಾಲಿ ಜಾಗಗಳನ್ನು ಸ್ವಚ್ಛಗೊಳಿಸಬೇಕು. ತಪ್ಪಿದಲ್ಲಿ ಪಾಲಿಕೆಯೇ ಯಂತ್ರೋಪಕರಣ ಹಾಗೂ ಸಿಬ್ಬಂದಿಯ ಮೂಲಕ ಸ್ವಚ್ಛಗೊಳಿಸಿ, ನಿವೇಶನದ ವಿಸ್ತೀರ್ಣ ಹಾಗೂ ತ್ಯಾಜ್ಯದ ಪ್ರಮಾಣಕ್ಕೆ ಅನುಗುಣವಾಗಿ ವೆಚ್ಚವನ್ನು ಲೆಕ್ಕಹಾಕಲಿದೆ ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ನ್ಯಾಯಾಲಯದ ಆದೇಶದಂತೆ ಪರಿಹಾರ ಪಾವತಿಸದ ಕೆಕೆಆರ್‌ಟಿಸಿ ಬಸ್ ಜಪ್ತಿ





