ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಹತ್ಯೆಗೀಡಾದ ಭೂಮಾನಂದ ಅವರ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಒಟ್ಟು ₹8.25 ಲಕ್ಷ ಪರಿಹಾರ ನೀಡಲು ಸರ್ಕಾರದಿಂದ ಮಂಜೂರು ಮಾಡಲಾಗಿದೆ. ಈ ಪೈಕಿ ಮೊದಲ ಹಂತದ ₹4,12,500 ಹಣವನ್ನು ಈಗಾಗಲೇ ಕುಟುಂಬದ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ.
ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆಯಾದ ಬಳಿಕ ಉಳಿದ ₹4,12,500 ಪರಿಹಾರ ಧನವನ್ನು ಬಿಡುಗಡೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಜಕುಮಾರ್ ತಿಳಿಸಿದ್ದಾರೆ. ಸಂತ್ರಸ್ತ ಕುಟುಂಬದ ಪರಿಸ್ಥಿತಿ ಹಾಗೂ ಅಗತ್ಯತೆಗಳ ಕುರಿತು ಅಧಿಕಾರಿಗಳು ಈವರೆಗೆ ನಾಲ್ಕು ಬಾರಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಕ್ಕೆ ರೇಷನ್ ಸೇರಿದಂತೆ ಅಗತ್ಯ ನೆರವು ಮತ್ತು ಇಲಾಖೆಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ವರ್ಗಾವಣೆ: ಯಾದಗಿರಿ ಜಿಪಂ ಸಿಇಒ ಆಗಿ ನೇಮಕ
ಈ ವೇಳೆ ದಲಿತ ಮುಖಂಡರು, ಅಧಿಕಾರಿಗಳು ಇನ್ನಿತರರು ಇದ್ದರು.




