ಪಾವತಿಯಾಗದೇ ಉಳಿದಿರುವ ಬಾಕಿ ವೇತನವನ್ನು ಪಾವತಿ ಮಾಡಬೇಕು. ನಗರಸಭೆ ವ್ಯಾಪ್ತಿಯಲ್ಲಿರುವ 250ಕ್ಕೂ ಅಧಿಕ ದಿನಗೂಲಿ ಪೌರ ಕಾರ್ಮಿಕರನ್ನು ಖಾಯಂಗೊಳಿಸಿ, ಅವನ್ನು ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗೆ ನಿಯೋಜನೆ ಮಾಡಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ರಾಯಚೂರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ನಗರಸಭೆಯಲ್ಲಿ ಪೌರ ಕಾರ್ಮಿಕರ ಕೊರತೆ ಇದೆ. ಅದಕ್ಕಾಗಿ, ಹೆಚ್ಚುವರಿಯಾಗಿ ಪೌರಾಯುಕ್ತ ಗುರುಲಿಂಗಪ್ಪ ಅವರು 120 ಮಂದಿಯನ್ನು ದಿನಗೂಲಿ ಪೌರ ಕಾರ್ಮಿಕರನ್ನಾಗಿ ನೇಮಕ ಮಾಡಿಕೊಂಡಿದ್ದರು. ಪ್ರತಿ ತಿಂಗಳು ವೇತನ ಪಾವತಿಯಾಗುತ್ತಿತ್ತು. ಆದರೆ, ಈಗ ಕಳೆದ ಮೂರು ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ದೂರಿದರು.
ಮೂರು ತಿಂಗಳಿನಿಂದ ವೇತನ ನೀಡದೇ ಇರುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜೀವನ ದೂಡಲೂ ಸಂಕಷ್ಟ ಅನುಭವಿಸುವಂತಾಗಿದೆ. ಕೂಡಲೇ ಬಾಕಿ ಉಳಿದಿರುವ ವೇತನ ಪಾವತಿ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಸ್. ರಾಜು, ನರಸಿಂಹಲು, ನರಸಪ್ಪ, ಯಾಕೋಬ, ಹುಸೇನಪ್ಪ, ನರಸಮ್ಮ, ಪಾರ್ವತಿ, ಜಂಬಮ್ಮ, ಹನುಮಂತಿ, ರಾಜು, ರಾಜೇಂದ್ರ, ಶಿವು, ಸೇರಿದಂತೆ ಹಲವು ದಿನಗೂಲಿ ಪೌರ ಕಾರ್ಮಿಕರು ಭಾಗವಹಿಸಿದ್ದರು.