ರಾಯಚೂರು | ₹58 ಲಕ್ಷ ಸೈಬರ್ ವಂಚನೆ ಪ್ರಕರಣ; ₹18.29 ಲಕ್ಷ ರಿಕವರಿ

Date:

ಐದು ವರ್ಷಗಳ ಹಿಂದೆ 2020ರ ಏಪ್ರಿಲ್‌ನಲ್ಲಿ ನಡೆದ ಸೈಬರ್‌ ವಂಚನೆ ಪ್ರಕರಣವೊಂದನ್ನು ರಾಯಚೂರು ಜಿಲ್ಲಾ ಪೊಲೀಸರು ಭೇದಿಸಿದ್ದು, ಸುಮಾರು ₹18.29 ಲಕ್ಷ ನಗದನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಏನಿದು ಪ್ರಕರಣ: ರಾಯಚೂರಿನ ವಿದ್ಯಾನಗರದ ಲಕ್ಷ್ಮೀಕಾಂತ ಹಾಗೂ ಅವನ ಸಹೋದರ ಸಂಬಂಧಿ ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡ “Dread MDFS” ಎಂಬ ಲಿಂಕ್‌ ಮೂಲಕ ಹಣ ಹೂಡಿಕೆ ಮಾಡಿದರೆ ಲಾಭಾಂಶ ಸಿಗುತ್ತದೆ ಎಂಬ ಜಾಹೀರಾತಿಗೆ ಮರುಳಾಗಿ 2020ರ ಆಗಸ್ಟ್‌ 7ರಿಂದ 2021ರ ಏಪ್ರಿಲ್‌ 7ರ ವರೆಗೆ ಹಂತ ಹಂತವಾಗಿ ಒಟ್ಟು ₹58,57,450 ಹೂಡಿಕೆ ಮಾಡಿದರು. ಮೊದಲಿನ ದಿನಗಳಲ್ಲಿ ಲಾಭಾಂಶ ಸಿಗಬಹುದೆಂಬ ನಂಬಿಕೆಯಿಂದ ಹಣ ವರ್ಗಾವಣೆ ಮಾಡಿದ ಇವರಿಗೆ ಅನೇಕ ತಿಂಗಳುಗಳ ಕಾಲ ಯಾವುದೇ ಲಾಭಾಂಶ ಬಾರದಿದ್ದಾಗ ಸಂಶಯ ವ್ಯಕ್ತವಾಗಿ, ತಾವು ಮೋಸಕ್ಕೆ ಒಳಗಾಗಿರುವುದು ಅರಿವಿಗೆ ಬರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದರಿಂದ ಆಘಾತಕ್ಕೊಳಗಾದ ಲಕ್ಷ್ಮೀಕಾಂತ ಮತ್ತು ಸಂಬಂಧಿ 2021ರ ಅಕ್ಟೋಬರ್‌ 10ರಂದು ರಾಯಚೂರಿನ ಸೆನ್‌ ಠಾಣೆಯಲ್ಲಿ ದೂರು ದಾಖಲಿಸುತ್ತಾರೆ. ಐದು ವರ್ಷಗಳ ಕಾಲ ವಿಸ್ತೃತ ತನಿಖೆ ನಡೆಸಿದ ಬಳಿಕ, 2025ರ ಅಕ್ಟೋಬರ್‌ 10ರಂದು ಆರೋಪಿಗಳ ಪತ್ತೆ ಮಾಡಿ, ವಿವಿಧ ಬ್ಯಾಂಕ್ ಖಾತೆಗಳಲ್ಲಿ ಜಮಾ ಆಗಿದ್ದ ₹18 ಲಕ್ಷವನ್ನು ವಶಪಡಿಸಿಕೊಂಡು ಸಂತ್ರಸ್ತರಿಗೆ ಹಿಂತಿರುಗಿಸಿದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಮಾಧ್ಯಮ ಗೋಷ್ಠಿಯಲ್ಲಿ ಮಾಹಿತಿ ನೀಡಿದರು.

WhatsApp Image 2025 10 14 at 3.53.44 PM

ಇದನ್ನೂ ಓದಿ: ರಾಯಚೂರು | ಕಾರು-ಬೈಕ್ ಮುಖಾಮುಖಿ: ಬೈಕ್ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಾಯ

ತನಿಖೆಯಲ್ಲಿ, ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಬತುರುಸ್ಮಾನ್ ಎಂಬಾತ ಕತೆಯ ಮುಖ್ಯ ಸುಳಿವುಧಾರಿಯೆಂದು ತಿಳಿದುಬಂದಿದೆ. ಆತ ತನ್ನ ಸಂಬಂಧಿಕರ ವಿವಿಧ ಬ್ಯಾಂಕ್ ಖಾತೆಗಳನ್ನು ಬಳಸಿಕೊಂಡು ಹಣ ದುರುಪಯೋಗ ಮಾಡಿಕೊಂಡಿದ್ದ. ಆದರೆ ಆತ ಈಗಾಗಲೇ ಮೃತಪಟ್ಟಿರುವುದರಿಂದ, ಆತನ ವಿರುದ್ಧ ಅಬೆಟೆಡ್ ಚಾರ್ಜ್‌ಶೀಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಎಸ್‌ಪಿ ಪುಟ್ಟಮಾದಯ್ಯ ಸ್ಪಷ್ಟಪಡಿಸಿದರು.

ಈ ಪ್ರಕರಣದ ತನಿಖೆಯಲ್ಲಿ ಸೈಬರ್‌ ಕ್ರೈಮ್ ಠಾಣೆಯ ಡಿಐಎಸ್ಪಿ ವೆಂಕಟೇಶ ಹೊಗಿಬಂಡಿ ಹಾಗೂ ಸಹಾಯಕ ತನಿಖಾಧಿಕಾರಿ ರಾಜಪ್ಪ ಮತ್ತು ಅವರ ತಂಡ ಮಹತ್ವದ ಪಾತ್ರವಹಿಸಿದ್ದು, ಅವರ ಸೇವೆಯನ್ನು ಎಸ್‌ಪಿ ಅಭಿನಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...