ಹಳೆ ದ್ವೇಷದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳು ಹೊಡೆದಾಡಿಕೊಂಡು ಓರ್ವ ಕೊಲೆಯಾದ ಘಟನೆ ರಾಯಚೂರು ತಾಲೂಕು ಮಿರ್ಜಾಪುರ ಗ್ರಾಮದಲ್ಲಿ ನಡೆದಿದೆ.
ಭೀಮೇಶ್ ನಾಯಕ (38) ಕೊಲೆಯಾದ ಯುವಕ. ಹಳೆ ವೈಷಮ್ಯದ ಹಿನ್ನಲೆಯಲ್ಲಿ ಎರಡು ಕುಟುಂಬಗಳ ಮಧ್ಯೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಎಂಟು ಜನರಿಗೆ ಗಂಭೀರ ಗಾಯವಾಗಿದೆ. ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಿರ್ಜಾಪುರ ಗ್ರಾಮದಲ್ಲಿ ಕರಿಯಮ್ಮ ಎಂಬುವವರ ಶವ ಸಂಸ್ಕಾರಕ್ಕೆ ಬಂದಾಗ ಹಳೆ ವೈಷಮ್ಯ ಜಗಳವಾಗಿ ಪ್ರಾರಂಭವಾಗಿದೆ ಎಂದು ತಿಳಿದುಬಂದಿದೆ. ರಾಮಲ್ಲಮ್ಮ , ಅಲಾರಿ ನಾಯಕ , ದುಳಯ್ಯ , ಗಂಭೀರ ಗಾಯಗೊಂಡು ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ.
ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಪ್ಯಾಲೆಸ್ತೀನ್ ಧ್ವಜ ಹಿಡಿದು ಓಡಾಡಿದ ಆರೋಪ: ಆರು ಮಂದಿ ಅಪ್ರಾಪ್ತರು ಪೊಲೀಸ್ ವಶಕ್ಕೆ
ಘಟನೆಯಿಂದ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಸಂಬಂಧ 22 ಜನರ ಮೇಲೆ ಪ್ರಕರಣ ದಾಖಲಾಗಿ, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಜಿಲ್ಲೆಯ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
