ರಾಯಚೂರು| ಕೈಗಾರಿಕೆ ಭೂಮಿಯನ್ನು ಮಾರಾಟ ಮಾಡಿದ ಕಂಪನಿ; ಕ್ರಿಮಿನಲ್ ಕೇಸ್ ದಾಖಲಿಸಲು ಆಗ್ರಹ

Date:

Advertisements

ರಾಯಚೂರು ಜಿಲ್ಲೆಯಲ್ಲಿ ಉಕ್ಕು ಮತ್ತು ವಿದ್ಯುತ್ ಉತ್ಪಾದನೆಗೆ ಸುರಾನಾ ಇಂಡಸ್ಟ್ರಿಗೆ ನೀಡಿದ್ದ ಕೈಗಾರಿಕಾ ಭೂಮಿಯನ್ನು ಮಾರಾಟ ಮಾಡಿ ವಂಚನೆ ಮಾಡಿರುವ ಕಂಪನಿ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಸಿಪಿಐ(ಎಂಎಲ್) ರೆಡ್‌ಸ್ಟಾರ್ ಪಾಲಿಟ್ ಬ್ಯುರೋ ಸದಸ್ಯ ಆರ್.ಮಾನಸಯ್ಯ ಆಗ್ರಹಿಸಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಕೆಐಎಡಿಬಿಯಿಂದ ಮಂಜೂರಾದ 131.55 ಎಕರೆ ಭೂಮಿಯನ್ನು ಅನೇಕ ವಿನಾಯ್ತಿ ನೀಡಿ ಕಾರ್ಖಾನೆ ಸ್ಥಾಪಿಸುವ ಉದ್ದೇಶದಿಂದ ನೀಡಲಾಗಿತ್ತು. ಆದರೆ ಸುರಾನಾ ಇಂಡಸ್ಟೀಸ್ ಯಾವ ಉದ್ದೇಶಕ್ಕಾಗಿ ಭೂಮಿ ಪಡೆದಿತ್ತೋ ಅದನ್ನು ಬಳಸದೇ, ರೋಗಗ್ರಸ್ಥ ಕೈಗಾರಿಕೆಯಾಗಿ ಪ್ರಮಾಣ ಪತ್ರ ಪಡೆಯಲು ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ನಾಗರಾಜ ಅವಧಿಯಲ್ಲಿ ಅರ್ಜಿ ಸಲ್ಲಿಸಿತ್ತು. ಭೂಮಿ, ನೀರು, ಅನೇಕ ವಿನಾಯ್ತಿ ಪಡೆದರೂ ರೋಗಗ್ರಸ್ಥ ಎಂದು ಘೋಷಿಸಿಲು ಜಿಲ್ಲಾಧಿಕಾರಿಗಳು ನಿರ್ಧರಿಸಿದ್ದರು. ಆದರೀಗ ಕೈಗಾರಿಕೆ ಸಂಪೂರ್ಣ ಮುಚ್ಚಿದ್ದಲ್ಲದೇ ಕೈಗಾರಿಕೆಗೆ ನೀಡಲಾಗಿದ್ದ ಭೂಮಿಯನ್ನೇ ಅಡವಿಟ್ಟು ಮಾರಾಟಮಾಡಲಾಗಿದೆ. ಕೋಟ್ಯಾಂತರ ಮೌಲ್ಯದ ಆಸ್ತಿ ಮಾರಾಟವಾದರೂ ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿಯೂ ಮಾತನಾಡುತ್ತಿಲ್ಲ. ಕೈಗಾರಿಕೆ ಮುಚ್ಚುವ ಮುನ್ನ ಸಾರ್ವಜನಿಕ ಸಭೆ ನಡೆಸಿ, ಇಲ್ಲಾ ಏಕ ಗವಾಕ್ಷಿ ಸಭೆಯಲ್ಲಿಯಾದರೂ ಚರ್ಚಿಸಿ ನಿರ್ಧರಿಸಬೇಕು. ಯಾವುದೇ ಪ್ರಕ್ರಿಯೆ ನಡೆಸದೇ ವಂಚಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುರಾನಾ ಕಂಪನಿ ಸಾರ್ವಜನಿಕ ಪ್ರಕಟಣೆ ನೀಡಿ ಆಸ್ತಿಯನ್ನು ಮಾರಾಟ ಮಾಡಿದೆ. 12 ಬ್ಯಾಂಕ್‌ಗಳಿಂದ ಪಡೆದಿದ್ದ ಸಾಲ ಮರುಪಾವತಿ ಮಾಡದೇ ವಂಚಿಸಿರುವದರಿಂದ ಸಿಬಿಐ ತನಿಖೆ ನಡೆದಿದೆ. ಕೈಗಾರಿಕೆ ಹೆಸರಿನಲ್ಲಿ 1301 ಕೋಟಿ ರೂ ಸಾಲ ಪಡೆದು ಕೈಗಾರಿಕೆ ಮುಚ್ಚಲಾಗಿದೆ. ಭೂ ಸುಧಾರಣಾ ಕಾಯ್ದೆಯಂತೆ ಯಾವ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಂಡು ಭೂಮಿಯನ್ನು ಅನ್ಯವಾಗಿ ಬಳಸಬಾರದು ಎಂಬ ನಿಯಮವನ್ನು ಸಹ ಪಾಲಿಸಿಲ್ಲ. ನಕಲಿ ದಾಖಲೆ ಸೃಷ್ಟಿಸಿ ವಂಚಿಸಿರುವುದು ಸಹ ಬಹಿರಂಗವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಣ್ಣ ನೀರಾವರಿ ಸಚಿವರು ಸೇರಿದಂತೆ ಜಿಲ್ಲೆಯ ಶಾಸಕರುಗಳು ಸುರಾನಾ ಕಂಪನಿಗೆ ನೀಡಿದ ಜಮೀನು ಮಾರಾಟ ಮಾಡಿರುವ ಕುರಿತು ಜನತೆಗೆ ಉತ್ತರ ನೀಡಬೇಕೆಂದರು.

“ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿ ರೂ ಹೂಡಿಕೆಯಾಗಿದೆ ಎಂದು ಹೇಳುತ್ತಿರುವ ಸರ್ಕಾರ ಹಿಂದೆ ನಡೆದಿರುವ ಹೂಡಿಕೆದಾರರ ಫಲಶೃತಿ ಬಹಿರಂಗಪಡಿಸದೇ ಇರಲು ಮುಚ್ಚಿ ಹೋಗುವ ಕಂಪನಿಗಳಿಗೆ ರೈತರ ಭೂಮಿ, ನೀರು ನೀಡಿರುವುದೇ ಕಾರಣವಾಗಿದೆ. ರಿಯಲ್ ಎಸ್ಟೇಟ್ ದಂಧೆಯನ್ನು ಸರ್ಕಾರವೇ ಪೋಷಿಸಿದಂತಾಗಿದೆ. ಕೈಗಾರಿಕೆ ಭೂಮಿ, ಕಾರ್ಮಿಕರ ನಿವೇಶನದ ಹೆಸರಿನಲ್ಲಿ ರೈತರಿಂದ ಭೂಮಿ ಪಡೆದು ವಂಚಿಸಲಾಗಿದೆ. ಕೂಡಲೇ ಎಲ್ಲಾ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಏಕಗವಾಕ್ಷಿ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ. ಯಾವುದೇ ಸ್ಪಂದನೆ ದೊರೆಯದೇ ಇದ್ದರೆ ಹೋರಾಟ ಅನಿವಾರ್ಯವಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ವಿವೇಚನಾ ನಿಧಿಯ ಅನುದಾನ ಸಮರ್ಪಕ ಬಳಕೆಯಾಗಬೇಕು: ರಾಘವೇಂದ್ರ ಕುಷ್ಟಗಿ

ಈ ಸಂದರ್ಭದಲ್ಲಿ ಜಿ.ಅಮರೇಶ, ಗಂಗಾಧರ, ಶೇಖ್ ಹುಸೇನ್ ಇದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X