ಬೈಕ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನ ದೇಹ ಛಿದ್ರವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕು ಸಿಕಲ್ ಕ್ರಾಸ್ ಬಳಿ ನಡೆದಿದೆ.
ತಾಲ್ಲೂಕಿನ ಬೈಲ್ ಮರ್ಚೆಡ್ ಗ್ರಾಮದ ನಿವಾಸಿ ಲಕ್ಷ್ಮಣ(28) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಗ್ರಾಮದಿಂದ ಮಾನ್ವಿ ಕಡೆಗೆ ರಭಸವಾಗಿ ಹೋಗುತ್ತಿದ್ದ. ಓವರ್ ಟೇಕ್ ಮಾಡಲು ಮುಂದಾಗಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಲಾರಿಯ ಚಕ್ರದ ಕೆಳಗೆ ಬೈಕ್ ಸಿಲುಕಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಸುದ್ದಿ ಓದಿದ್ದೀರಾ?: ರಾಯಚೂರು | ದೇವದುರ್ಗ ಶಾಸಕಿ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ
ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಮಾನ್ವಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾಹನಗಳನ್ನು ಜಪ್ತಿ ಮಾಡಿ ಶವವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.
