ರಾಯಚೂರು | ಅಧಿಕಾರ ದುರ್ಬಳಕೆ; ಕೋಠಾ ಗ್ರಾಮ ಪಂಚಾಯಿತಿ ಸದಸ್ಯರ ವಿರುದ್ಧ ತನಿಖೆಗೆ ಆಗ್ರಹ

Date:

‌ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕೋಠಾ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು, ಅಕ್ರಮ ಎಸಗಿರುವವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆಯಿಂದ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕರಿಗೆ ಮನವಿ ಸಲ್ಲಿಸಿದರು.

- Advertisement -

“ಸದಸ್ಯರಾದ ದ್ಯಾವಮ್ಮ ಶೀಲವಂತ ಮತ್ತು ನಾಗಪ್ಪ ಅವರು ರಾಜೀವ್‌ ಗಾಂಧಿ ವಸತಿ ಯೋಜನೆಯಡಿಯಲ್ಲಿ ತಮ್ಮ ಹೆಸರಿನಲ್ಲಿ ಆಕ್ರಮವಾಗಿ ಮನೆಗಳನ್ನು ಕಟ್ಟಿಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಸದಸ್ಯರಿಂದಲೇ ಭಾರೀ ಅವ್ಯವಹಾರ ನಡೆದಿದ್ದು, ಸರ್ಕಾರದ ಹಣವನ್ನು ಲೂಟಿ ಮಾಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಸದರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೇದನಾಪೂರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ನಿಯಮಾವಳಿಗಳನ್ನು ಗಾಳಿಗೆ ತೂರಿ, ಯಾವುದೇ ಗ್ರಾಮಸಭೆಯನ್ನು ಕರೆಯದೆ ತಮ್ಮ ದಾಖಲೆಗಳನ್ನು ತಾವೇ ಸೃಷ್ಟಿಸಿಕೊಂಡು ಅಧಿಕಾರಲೋಪ ಎಸಗಿದ್ದಾರೆ” ಎಂದು ಆಗ್ರಹಿಸಿದರು.

“ಬಾಕಿ ಕೆಲವು ಸದಸ್ಯರು ಮನೆಗಳನ್ನು ಕಟ್ಟಿಕೊಳ್ಳದೇ ಬೇರೆ ಕಟ್ಟಡಗಳ ಮುಂದೆ ನಿಂತು ಫೋಟೋ ತೆಗೆದುಕೊಂಡು ಮನೆ ಕಟ್ಟಿರುವಂತೆ ತಿಳಿಸಿ ಹಣವನ್ನು ಲೂಟಿ ಮಾಡಿದ್ದಾರೆ. ತಾವುಗಳು ಕೂಡಲೇ ತನಿಖಾಧಿಕಾರಿಗಳನ್ನು ನೇಮಿಸಿ ತನಿಖೆ ಮಾಡಿ ತಪ್ಪಿತಸ್ಥರು ದುರುಪಯೋಗ ಮಾಡಿಕೊಂಡಿರುವ ಸರ್ಕಾರದ ಹಣವನ್ನು ವಸೂಲಿ ಮಾಡಿ ತಕ್ಷಣವೇ ಸದಸ್ಯತ್ವವನ್ನು ರದ್ದುಪಡಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಅಕ್ರಮ ಚಟುವಟಿಕೆ ತಾಣವಾದ ಇಂದಿರಾ ಕ್ಯಾಂಟಿನ್; ಅಧಿಕಾರಿಗಳ ನಿರ್ಲಕ್ಷ್ಯ

“ಕೋಠಾ ಗ್ರಾಮ ಪಂಚಾಯಿತಿ ಸದಸ್ಯರ ಅವ್ಯವಹಾರದಲ್ಲಿ ಶಾಮೀಲಾಗಿ, ನಿರ್ಲಕ್ಷ್ಯ ವಹಿಸಿದರೆ ಜಿಲ್ಲಾ ಕಚೇರಿ ಎದುರು ಬೃಹತ್ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಜಿಲ್ಲಾಧ್ಯಕ್ಷ ಕೊಂಡಪ್ಪ ಕೆ, ವೀರೇಶ್ ಜಲಗಾರ, ಎಂ ಎಸ್ ವೆಂಕಟೇಶ, ನರಸಿಂಹಲು ಕುರುಬದೊಡ್ಡಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...