ರಾಯಚೂರು | ಕುಡಿಯುವ ನೀರಿಗೆ ಪರದಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

Date:

ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದು, ಹಲವು ಬಾರಿ ಹೋರಾಟ ನಡೆಸಿದರೂ ಪಂಚಾಯತಿ ಅಧಿಕಾರಿಗಳು ತಮಗೆ ಸಂಬಂಧವಿಲ್ಲದಂತೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರಾಯಚೂರಿನ ದೇವದುರ್ಗ ತಾಲೂಕು ಚಿಂಚೋಡಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.

- Advertisement -

ಗ್ರಾಮದಲ್ಲಿ ನೀರಿನ ಸಮಸ್ಯೆ ತಾರಕಕ್ಕೇರಿದ್ದು ಹಲವು ಬಾರಿ ಪಂಚಾಯತಿ ಗಮನಕ್ಕೆ ತಂದಿದ್ದರೂ ಇಂದು ನಾಳೆಯೆಂದು ಆಶ್ವಾಸನೆ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಇದರಿಂದ ಬೇಸತ್ತು ಗ್ರಾಮಸ್ಥರು ಪಂಚಾಯತ್‌ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಕೆಲ ಕಾಲ ಪರಿಸ್ಥಿತಿ ಬಿಗಡಾಯಿಸಿತ್ತು.

ಗ್ರಾಮದ ಪಕ್ಕದಲ್ಲಿ ಕೃಷ್ಣಾ ನದಿ ಹರಿದರೂ ಚಿಂಚೋಡಿ, ಬುಂಕಲದೊಡ್ಡಿ, ಲಿಂಗದಹಳ್ಳಿ, ಯರಗುಡ್ಡ ಗ್ರಾಮದ ಜನರಿಗೆ ನೀರು ಸಿಗುತ್ತಿಲ್ಲ. ಅಲ್ಲಿ ಇಲ್ಲಿ ಬೋರ್‌ವೆಲ್ ನೀರು ತಂದು ಕುಡಿಯುವುದಾಗಿದೆ. ಶುದ್ಧ ಕುಡಿಯುವ ನೀರಿಲ್ಲದೆ ಹಲವಾರು ಜನ ರೋಗಗಳಿಗೆ ತುತ್ತಾಗಿದ್ದಾರೆ ಎಂದು ‌ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು.

ಮಧ್ಯಾಹ್ನ ವೇಳೆ ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದ ತಾಲೂಕು ಪಂಚಾಯತಿ ಅಧಿಕಾರಿಗಳು ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ?:ರಾಯಚೂರು | ರಕ್ತದಾನಕ್ಕಿಂತ ಶ್ರೇಷ್ಠದಾನ ಇನ್ನೊಂದಿಲ್ಲ: ಲಾಲ್ ಪೀರ್

ಈ ವೇಳೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ, ಶಬ್ಬೀರ್ ಜಾಲಹಳ್ಳಿ, ತಾಲೂಕು ಅಧ್ಯಕ್ಷ ಹನುಮಂತ ಗುರಿಕಾರ, ಬುಂಕಲದೊಡ್ಡಿ ಗ್ರಾಮ ಘಟಕ ಅಧ್ಯಕ್ಷ ಹನುಮಂತ ಬುಂಕಲದೊಡ್ಡಿ, ಬಸವರಾಜ ಲಿಂಗದಹಳ್ಳಿ, ಚಂದ್ರು ಲಿಂಗದಹಳ್ಳಿ, ಗ್ರಾಮಸ್ಥರು ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...