- ಬೆಂಕಿ ನಂದಿಸಿದ ಅಗ್ನಿಶಾಮಕ ದಳ
- ಅಪಾರ ಪ್ರಮಾಣದ ವಸ್ತುಗಳು ನಾಶ
ರಾಯಚೂರಿನ ವಡ್ಲೂರು ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಉಗ್ರಾಣದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ.
ಶನಿವಾರ ಬೆಳಗ್ಗೆ ಲ್ಯಾಬೋರೇಟರಿ ಉಗ್ರಾಣದಲ್ಲಿ ಕಾಣಿಸಿಕೊಂಡ ಬೆಂಕಿ ಕೆನ್ನಾಲಿಗೆ ಇಡಿ ಉಗ್ರಾಣವೇ ಹೊತ್ತಿ ಉರಿದಿದೆ. ಇದರಿಂದಾಗಿ ಕಾರ್ಖಾನೆ ಸುತ್ತಲೂ ದಟ್ಟವಾದ ಹೊಗೆ ಕಾಣಿಸಿಕೊಂಡು ಅಕ್ಕಪಕ್ಕದ ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಸಿತ್ತು.
ಮೊದಲು ಒಂದು ಕೆಮಿಕಲ್ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿಯೂ ಪಕ್ಕದ ಕಾರ್ಖಾನೆಗೂ ಪಸರಿಸಲಾರಂಭಿಸಿತ್ತು. ಆ ವೇಳೆಗೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು 5 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಈ ಸುದ್ದಿ ಓದಿದ್ದೀರಾ? : ಧರ್ಮಸ್ಥಳದಲ್ಲಿ ಡಿಕೆಶಿ ಹೆಲಿಕಾಪ್ಟರ್ ತಪಾಸಣೆ : ಚುನಾವಣಾಧಿಕಾರಿ ಜೊತೆ ಪೈಲೆಟ್ ವಾಗ್ವಾದ
ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಪರಿಣಾಮ ಅಪಾರ ಪ್ರಮಾಣದ ವಸ್ತಗಳು ಭಸ್ಮವಾಗಿವೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆ ನಡೆದ ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವ ಕಾರಣಕ್ಕಾಗಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.