ರಾಯಚೂರು | ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಅವ್ಯವಸ್ಥೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ; ಅರ್ಚನಾ ಸುಂಕಾರಿ ಒತ್ತಾಯ

Date:

ನಗರದಲ್ಲಿನ ವಿವಿಧ ವಿದ್ಯಾರ್ಥಿ ವಸತಿ ನಿಲಯಗಳು ಅವ್ಯವಸ್ಥೆಯಿಂದ ಕೂಡಿದ್ದು, ವಿದ್ಯಾರ್ಥಿಗಳು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಛಲವಾದಿ ಮಹಾಸಭಾ ಅಧ್ಯಕ್ಷೆ ಅರ್ಚನಾ ಸುಂಕಾರಿ ಕಳವಳ ವ್ಯಕ್ತಪಡಿಸಿದರು.

- Advertisement -

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಕೂಡಲೇ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು ಹಾಗೂ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳು ಮತ್ತು ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ವೃತ್ತಿ ಆಧಾರಿತ ವಸತಿ ನಿಲಯ ಸೇರಿದಂತೆ ಇತರೆ ವಿದ್ಯಾರ್ಥಿ ವಸತಿ ನಿಲಯಗಳಿಗೆ ಖುದ್ದಾಗಿ ಭೇಟಿ ನೀಡಿದ ಸಂದರ್ಭದಲ್ಲಿ, ವಾರ್ಡನ್‌ಗಳು ಹಾಗೂ ಅಡುಗೆ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ನೀಡಬೇಕಾದ ಆಹಾರವನ್ನು ಕದ್ದು ಮನೆಗೆ ತೆಗೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ವಸತಿ ನಿಲಯಗಳಲ್ಲಿ ತೀವ್ರ ಅಸ್ವಚ್ಛತೆ ಇರುವದು ಹಾಗೂ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ ಎಂದರು.

ಅನೇಕ ವಸತಿ ನಿಲಯಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯಗಳು ಸರಿಯಿಲ್ಲ, ವಿದ್ಯಾರ್ಥಿಗಳು ಮೇಲ್ವಿಚಾರಕ ಗಮನಕ್ಕೆ ತಂದರೂ ಯಾರು ಸ್ಪಂದಿಸುತ್ತಿಲ್ಲ. ಕೂಡಲೇ ಪರಿಶೀಲನೆ ನಡೆಸಿ ಸರಿಪಡಿಸಬೇಕು ಹಾಗೂ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದಲ್ಲಿ ವಿದ್ಯಾರ್ಥಿಗಳೊಂದಿಗೆ ಹೋರಾಟ ನಡೆಸುವುದಾಗಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಲಿಂಗಸೂಗೂರು | ಮರ್ಯಾದೆಗೇಡು ಹತ್ಯೆ; ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯ

ಈ ಸಂದರ್ಭದಲ್ಲಿ ಮೀನಾಕ್ಷಿ, ಲಕ್ಷ್ಮೀ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...