ರಾಯಚೂರು | ಕುಡಿಯುವ ನೀರಿನ ಕೊರತೆ ನೀಗಿಸಲು ಕ್ರಮ: ಪೌರಾಡಳಿತ ಸಚಿವ

Date:

ರಾಯಚೂರು ಮತ್ತು ಸಿಂಧನೂರು ನಗರಸಭೆ ಸೇರಿದಂತೆ ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ನೀರಿನ ಸಮಸ್ಯೆ ಪರಿಹರಿಸಲು ಶೀಘ್ರದಲ್ಲಿ ಪೌರಾಡಳಿತ, ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಒಳಗೊಂಡಂತೆ ಎಲ್ಲ ಅಧಿಕಾರಿಗಳ ಸಭೆ ಆಯೋಜನೆ ಮಾಡುತ್ತೇವೆ ಎಂದು ಪೌರಾಡಳಿತ ಸಚಿವ ರಹೀಂಖಾನ್ ಹೇಳಿದ್ದಾರೆ.

ರಾಯಚೂರಿನಲ್ಲಿ ನಗರ ಸ್ಥಳೀಯ ಸಂಸ್ಥೆಗಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ಜಿಲ್ಲೆ ಯಾವುದೇ ನಗರ, ಪಟ್ಟಣಗಳಲ್ಲಿ ನಿತ್ಯವೂ ನೀರು ಪೂರೈಕೆ ಮಾಡುತ್ತಿಲ್ಲ. ಲಭ್ಯವಿರುವ ನೀರಿನ ಆಧಾರದ ಮೇಲೆ ಬೇಸಿಗೆ ದಿನಗಳು ಗಂಭೀರವಾಗುವ ಮುನ್ಸೂಚನೆಗಳಿದ್ದು ಎಲ್ಲ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಬೇಕು” ಎಂದು ಸೂಚಿಸಿದರು.

“ಹಟ್ಟಿ ಪಟ್ಟಣ ಪಂಚಾಯ್ತಿಯಿಂದ ಜಲ ಜೀವನ ಮಿಷನ್ ಕಾಮಗಾರಿ ವ್ಯಾಪ್ತಿಗೆ ಒಳಪಟ್ಟಿದ್ದು, ಬಹುಗ್ರಾಮ ಯೋಜನೆಯಡಿ ಯೋಜನೆ ರೂಪಿಸಲಾಗಿದೆ. ಆದರೂ ನೀರು ಪೂರೈಕೆ ಸಾಧ್ಯವಾಗಿಲ್ಲ. ಕೂಡಲೇ ಸಮಸ್ಯೆಯಾತ್ಮಕ ವಾರ್ಡಗಳಿಗೆ ಟ್ಯಾಂಕರ್ ಮೂಲಕ ನೀರುಪೂರೈಸುವಂತೆ ಸೂಚಸಿದರು. ಕವಿತಾಳ ಗ್ರಾಮದಲ್ಲಿ ಎರಡು ದಿನಕ್ಕೊಮ್ಮೆ ನೀರು ಹರಿಸಲಾಗುತ್ತಿದೆ. ೧೬ ವಾರ್ಡಗಳಿಗೆ ೨ ತಿಂಗಳಿಗೆ ಆಗುವಷ್ಟು ನೀರು ಸಂಗ್ರಹವಿದೆ ಎಂದು ಮುಖ್ಯಾಧಿಕಾರಿಗಳು ತಿಳಿಸಿದರು. ಲಿಂಗಸೂಗೂರು ಪುರಸಭೆಯಲ್ಲ ಎನ್‌ಆರ್‌ಬಿಸಿ ನೀರಿನ ಮೇಲೆ ಅವಲಂಬಿತವಾಗಿದೆ ೨ ತಿಂಗಳಿಗೆ ಆಗುವಷ್ಟು ನೀರು ಸಂಗ್ರಹವಿದ್ದು, ಮೂರು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಮಾನವಿ ಪುರಸಭೆಯಿಂದ ೩ ದಿನಕೊಮ್ಮೆ ನೀರು ಸರಬರಾಜುಮಾಡಲಾಗುತ್ತಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ ಮಾತನಾಡಿ, “ಕಳೆದ ಏಳು ವರ್ಷಗಳಿಂದ ಟ್ಯಾಂಕ್ ನಿರ್ಮಾಣ ಮಾಡಲಾಗುತ್ತಿದೆ. 85 ಕೋಟಿ ರೂ. ವೆಚ್ಚ ಮಾಡಲಾಗಿದ್ದರೂ ಕುಡಿಯುವ ನೀರು ಹಾಗೂ ಒಳಚರಂಡಿ ಮಂಡಳಿ ಕಾಮಗಾರಿ ಅಪೂರ್ಣವಾಗಿ ಉಳಿಸಿದೆ” ಎಂದ ಬೇಸರ ವ್ಯಕ್ತಪಡಿಸಿದರು.

“ಕಾಮಗಾರಿ ನಿರ್ಲಕ್ಷ್ಯಕ್ಕೆ ಕಾರಣವಾದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಬೇಕು” ಎಂದು ಪೌರಾಡಳಿತ ಸಚಿವರು ಸೂಚಿಸಿದರು.

“ರಾಯಚೂರು ನಗರಸಭೆಯಿಂದ ಎರಡು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. 340 ಬೊರವೆಲ್‌ಗಳಿದ್ದು ದುರಸ್ತಿಗೆ ಕ್ರಿಯಾಯೋಜನೆ ಸಲ್ಲಿಸಲಾಗಿದೆ. ಎಂದು ಪೌರಾಯುಕ್ತ ಗುರುಸಿದ್ದಯ್ಯ ಹೀರೆಮಠ ಹೇಳಿದರು.

“24 ಗಂಟೆ ಕುಡಿಯುವ ನೀರಿನ ಯೋಜನೆ ಅಪೂರ್ಣವಾಗಿ ನಿಂತಿದೆ. ಗುತ್ತಿಗೆದಾರರು ಕೋರ್ಟ್‌ಗೆ ಹೋಗಿದ್ದಾರೆ. ಇನ್ನೂ ಆರು ಟ್ಯಾಂಕ್‌ಗಳಿಗೆ ನೀರು ಸಂಪರ್ಕ ನೀಡಲಾಗಿದೆ” ಎಂದು ಅವರು ತಿಳಿಸಿದರು.

“ಚಿಕ್ಕಸೂಗೂರು ಮತ್ತು ರಾಂಪೂರು ಜಲಾಶಯದಿಂದ ನೀರು ಪೂರೈಕೆ ಸಮಸ್ಯೆಯಾಗದಂತೆ ಮೋಟಾರ್, ಟಿಸಿ ಖರೀದಿಸಲು 5 ಕೋಟಿ ರೂ. ಅನುದಾನವನ್ನು ಕೆಕೆಆರ್‌ಡಿಬಿಯಿಂದ ಅನುದಾನ ಒದಗಿಸಲಾಗಿದೆ” ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ತಿಳಿಸಿದರು.

ಸಭೆಯಲ್ಲಿ ಮಾನವಿ ಶಾಸಕ ಹಂಪಯ್ಯನಾಯಕ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹಾಗೂ ಯೋಜನಾಧಿಕಾರಿ ಜಗಧೀಶ ಸೇರಿದಂತೆ ನಗರ ಸ್ಥಳೀಯ ಸಂಸ್ಥೇಗಳ ಮುಖ್ಯಾಧಿಕಾರಿಗಳು, ಸಿಬ್ಬಂದಿಗಳಿದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪರಿಸರ ಉಳಿಸುವ ವಾಗ್ದಾನ ಪಕ್ಷಗಳ ಪ್ರಣಾಳಿಕೆ ಸೇರಲಿ: ಡಾ. ವಾಸು

ಆರೋಗ್ಯ ರಕ್ಷಣೆ ವ್ಯಕ್ತಿಗತವಾಗಿ ಉಳಿದಿಲ್ಲ. ಹಾಗಾಗಿ ವಾಯುಗುಣ ವೈಪರೀತ್ಯ ಮತ್ತು ಆರೋಗ್ಯದ...

ದಾವಣಗೆರೆ | ಅಸ್ಪೃಶ್ಯತಾ ನಿವಾರಣಾ ಜಾಗೃತಿ ಕಲಾ ಜಾಥಾ

ಎಲ್ಲ ಸಮುದಾಯಗಳ ಮಾನವರು ಒಂದೇ. ನಾವೆಲ್ಲ ಕೂಡಿ ಸಹೋದರತ್ವ ಭಾವನೆಯಿಂದ ಬದುಕಬೇಕೆಂಬ...

ಮಂಗಳೂರು | ಕರಾವಳಿಯ ಇತಿಹಾಸವನ್ನು ಕಟ್ಟಿದವರು ಮಿಷನರಿಗಳು; ಪ್ರೊ. ಪುರುಷೋತ್ತಮ ಬಿಳಿಮಲೆ

ಕರಾವಳಿಯ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿ.ಎ ಸಾಲೆತ್ತೂರು, ಗೋವಿಂದ ಪೈ...

ತುಮಕೂರು | ಕೆರೆ ಒತ್ತುವರಿ ತೆರವು ಮಾಡಿ ಕೆರೆಯಾಗಿಯೇ ಉಳಿಸಿ: ಬೈಚೇನಹಳ್ಳಿ ಗ್ರಾಮಸ್ಥರ ಮನವಿ

ಕೆರೆಯ ಜಾಗವನ್ನು ಮಣ್ಣು ತುಂಬಿಸಿಕೊಂಡು ಒತ್ತುವರಿ ಮಾಡುವ ಕೆಲಸವನ್ನು ಕೆಲವರು ಮಾಡುತ್ತಿದ್ದು,...