ರಾಯಚೂರು | ಗೆಜೆಟೆಡ್ ಪ್ರೋಬೇಷನರಿ ಹುದ್ದೆ ನೇಮಕಾತಿಯಲ್ಲಿ ವಯಸ್ಸಿನ ವಿನಾಯ್ತಿ ನೀಡಲಿ: ರಝಾಕ್ ಉಸ್ತಾದ್

Date:

ಗೆಜೆಟೆಡ್ ಪ್ರೋಬೇಷನರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ 371(ಜೆ) ಅಡಿಯಲ್ಲಿ ಬಹು ಆಯ್ಕೆಯನ್ನು ಕೋರಿರುವುದು ಹಾಗೂ ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಗೆಜೆಟೆಡ್ ಪ್ರೋಬೇಷನರ್ಸ್ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ವಯಸ್ಸಿನ ವಿನಾಯಿತಿ ನೀಡುವಂತೆ ಕೆಪಿಸಿಸಿ ಮಾಧ್ಯಮ ವಕ್ತಾರ ಡಾ.ರಝಾಕ್ ಉಸ್ತಾದ್ ಅವರು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.

- Advertisement -

ಕರ್ನಾಟಕ ಲೋಕಸೇವಾ ಆಯೋಗವು 384 ಗೆಜೆಟೆಡ್ ಪ್ರೊಬೇಷನರ್ಸ್‌(ಕೆಎಎಸ್) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಸದರಿ ಹುದ್ದೆಗಳ ಆನ್-ಲೈನ್ ಅರ್ಜಿಯಲ್ಲಿ ಕಲ್ಯಾಣ ಕನಾಟಕ ಪ್ರದೇಶದ ಸ್ಥಳೀಯ ಅಭ್ಯರ್ಥಿಗಳಿಂದ 371(ಜೆ) ಮೀಸಲಾತಿ ಕೋರುವ ಸಂದರ್ಭದಲ್ಲಿ ಸರ್ಕಾರದ ಅಧಿಸೂಚನೆಯಂತೆ ನಾಲ್ಕು ಆಯ್ಕೆಗಳನ್ನು ಕೇಳಬೇಕಾಗುತ್ತದೆ. ಆದರೆ ಲೋಕಸೇವಾ ಆಯೋಗವು ಮೂರು ಆಯ್ಕೆಯನ್ನು ಮಾತ್ರ ಕೇಳಿರುವುದರಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳು ಉತ್ತಮ ಆಯ್ಕೆಗಳಿಂದ ವಂಚಿತಗೊಳ್ಳುವ ಸಾಧ್ಯತೆ ಇದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ನಾಲ್ಕು ಆಯ್ಕೆಗಳನ್ನು ಕೇಳುವ ಬದಲಾಗಿ ಲೋಕಸೇವಾ ಆಯೋಗದ ಅರ್ಜಿಯಲ್ಲಿ ಮೂರು ಆಯ್ಕೆ ಮಾತ್ರ ಕೇಳುತ್ತಿರುವದರಿಂದ ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳು ಮೆರಿಟ್ ಆಧಾರಿತ ಹುದ್ದೆ ಹೊಂದುವಲ್ಲಿ ಸಮಸ್ಯೆಯಾಗುತ್ತಿದೆ, ಆದ್ದರಿಂದ, ನಾಲ್ಕನೇಯ ಆಯ್ಕೆಯನ್ನು ಸಹ ಅರ್ಜಿಯಲ್ಲಿ ಸೇರಿಸಬೇಕು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ, ಬೀದರ್‌ನಲ್ಲಿ ನೆಲೆಸಿರುವ ಮರಾಠಿಗರಿಗಾಗಿ ₹2 ಕೋಟಿ ಬಿಡುಗಡೆ ಮಾಡಿದ ಮಹಾರಾಷ್ಟ್ರ ಸರ್ಕಾರ

“ಲೋಕಸೇವಾ ಆಯೋಗವು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಹಾಗೂ ಲೆಕ್ಕಪತ್ರ ಇಲಾಖೆಯ ಗ್ರೂಪ್-ಎ ಮತ್ತು ಗ್ರೂಪ್-ಬಿ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳಾದ ಸಹಾಯಕ ನಿಯಂತ್ರಕರು ಹಾಗೂ ಲೆಕ್ಕಪರಿಶೋಧನಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದ್ದು, ಕರ್ನಾಟಕ ಸರ್ಕಾರವು ಇತ್ತೀಚೆಗೆ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇಮಕಾತಿಗೆ ಒಂದು ಬಾರಿ ಮಾತ್ರ ಮೂರು ವರ್ಷಗಳ ವಯಸ್ಸಿನ ವಿನಾಯತಿ ನೀಡಿದೆ. ಸದರಿ ವಿನಾಯತಿಯು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಹಾಗೂ ಲೆಕ್ಕಪತ್ರ ಇಲಾಖೆಯ ಗ್ರೂಪ್-ಎ ಮತ್ತು ಗ್ರೂಪ್-ಬಿ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳಾದ ಸಹಾಯಕ ನಿಯಂತ್ರಕರು ಹಾಗೂ ಲೆಕ್ಕಪರಿಶೋಧನಾಧಿಕಾರಿ ಹುದ್ದೆಗಳಿಗೂ ಅನ್ವಯಿಸುತ್ತದೆ. ಆದರೆ ಲೋಕಸೇವಾ ಆಯೋಗದ ಅಧಿಸೂಚನೆಯಲ್ಲಿ ಮೂರು ವರ್ಷಗಳ ವಯಸ್ಸಿನ ವಿನಾಯತಿಯನ್ನು ನೀಡದೇ ಇರುವುದರಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. ಕಾರಣ, ಈ ನೇಮಕಾತಿಯಲ್ಲಿಯೂ ಸರ್ಕಾರದ ಸುತ್ತೋಲೆಯಂತೆ ಮೂರು ವರ್ಷಗಳವರೆಗೆ ವಯಸ್ಸಿನ ವಿನಾಯತಿ ನೀಡಬೇ‌ಕು” ಎಂದು ಒತ್ತಾಯಿಸಿದ್ದಾರೆ.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...