ರಾಯಚೂರು | ಆಕ್ರಮವಾಗಿ ಸೇಂದಿ ಮಾರಾಟ; ಆರೋಪಿಗಳು ಪೊಲೀಸರ ವಶ

Date:

ತೆಲಂಗಾಣದಿಂದ ರಾಯಚೂರು ನಗರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಎಚ್ ಪೌಡರ್ ಮಿಶ್ರಿತ ಸೇಂದಿಯನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ನಗರದಲ್ಲಿ ಭಾನುವಾರ ಬೆಳಗಿನ ಜಾವ ನಡೆದಿದೆ.

- Advertisement -

ಸೇಂದಿ ಸಾಗಾಣಿಕೆ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳ ತಂಡ ಹಾಗೂ ಆರ್‌ಪಿಎಫ್ ಅಧಿಕಾರಿಗಳು 250 ಲೀಟರ್‌ಗೂ ಅಧಿಕ ಪ್ರಮಾಣದ ಕ್ಲೋರಲ್ ಹೈಡ್ರೆಡ್ ವಿಷಪೂರಿತ ರಾಸಾಯನಿಕ ಮಿಶ್ರಣ ಮಾಡಿ ಕಲಬೆರಿಕೆ ಸೇಂದಿ ತಯಾರಿಸಿ ಮಾರಾಟಕ್ಕಾಗಿ ಬಂದಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ತೆಲಂಗಾಣದ ಕೃಷ್ಣ ಗ್ರಾಮದಿಂದ ರೈಲಿನ ಮೂಲಕ ರಾಯಚೂರಿಗೆ ಆಗಮಿಸಿ ನಗರದ ವಿವಿಧ ಬಡಾವಣೆಯಲ್ಲಿ ಸೇಂದಿ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ರೈಲ್ವೆ ನಿಲ್ದಾಣದಲ್ಲಿ ದಾಳಿ ನಡೆಸಿದ್ದರು. ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧೀಸಿ, ಅಬಕಾರಿ ಕಾಯ್ದೆ ಉಲ್ಲಂಘನೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಲೋಕಾಯುಕ್ತದಲ್ಲಿ ಸರ್ಕಾರಿ ಅಧಿಕಾರಿಗಳ ಆಸ್ತಿ ವಿವರ ಸಿಗುವಂತಾಗಲಿ: ನಿರುಪಾದಿ ಕೆ ಗೋಮರ್ಸಿ

ದಾಳಿಯಲ್ಲಿ ಅಬಕಾರಿ ನಿರೀಕ್ಷಕರಾದ ಶೈಲಜಾ, ಹನುಮಂತ ಗುತ್ತೆದಾರ, ಸಣ್ಣಮಾರುತಿ, ಆರ್‌ಪಿಎಫ್ ಅಧಿಕಾರಿ ಮಹ್ಮದ್ ರಫೀ, ಸಿಬ್ಬಂದಿಗಳಾದ ಶಿವಾನಂದ, ಮಸ್ತಾನ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...