ರಾಯಚೂರು | ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಎಐಸಿಸಿಟಿಯು ಪ್ರತಿಭಟನೆ

Date:

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ರಸ್ತೆ ಬದಿಗಳಲ್ಲಿ ಡಬ್ಬಾ ಅಂಗಡಿ, ಶೆಡ್‌ಗಳನ್ನು ತೆರವುಗೊಳಿಸಿದ್ದರಿಂದ ಸಾವಿರಾರು ಸಣ್ಣಪುಟ್ಟ ವ್ಯಾಪಾರಸ್ಥರು ನಿರಾಶ್ರಿತರಾಗಿದ್ದು, ಅವರಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಜಿಲ್ಲಾ ಘಟಕ ನಿನ್ನೆ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂದೆ 200ಕ್ಕೂ ಅಧಿಕ ಬೀದಿ ಬದಿ ವ್ಯಾಪಾರಸ್ಥರು ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಉದ್ದೇಶಿಸಿ ಎಐಸಿಸಿಟಿಯು ಜಿಲ್ಲಾಧ್ಯಕ್ಷ ನಾಗರಾಜ ಪೂಜಾರ್ ಮಾತನಾಡಿ, “ಬೀದಿಬದಿ ವ್ಯಾಪಾರ ಮಾಡಿಕೊಂಡು ಕಳೆದ ಹತ್ತಾರು ವರ್ಷಗಳಿಂದ ಜೀವನ ಸಾಗಿಸುತ್ತಿದ್ದೆವು. ಏಕಾಏಕಿ ಕಾರ್ಯಾಚರಣೆ ನಡೆಸಿ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ದೈನಂದಿನ ಜೀವನ ನಡೆಸಲು ಕಷ್ಟಕರವಾಗಿದೆ. ಆದಾಯದಿಂದ ಕುಟುಂಬ ನಿರ್ವಹಣೆ ಮಾಡುತ್ತಿದ್ದ ನಮಗೆ ಬರಸಿಡಿಲು ಬಡಿದಂತಾಗಿದೆ. ತೆರವುಗೊಳಿಸಿದ ದಿನದಿಂದ ಇಲ್ಲಿಯವರೆಗೂ ಕೈಯಲ್ಲಿ ಕೆಲಸವಿಲ್ಲದೇ, ಜೀವನ ನಿರ್ವಹಣೆಗೆ ಆದಾಯವಿಲ್ಲದೇ ಮುಂದೇನು ಎಂಬ ಆತಂಕದಲ್ಲಿ ಜೀವನ ನಡೆಸುತ್ತಿದ್ದೇವೆ” ಎಂದು ಅಳಲು ತೋಡಿಕೊಂಡರು.

ಬೀದಿಬದಿ ವ್ಯಾಪಾರಸ್ಥೆ ರೇಖಾ ಅಡವಿ ಮಾತನಾಡಿ, “ನಗರದ ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಜಿಲ್ಲಾ, ತಾಲೂಕು ಹಾಗೂ ನಗರಸಭೆ ಆಡಳಿತ ಮುನ್ನೆಚ್ಚರಿಕೆ ವಹಿಸದೇ ಬೇಜವಾಬ್ದಾರಿಯಿಂದ ವರ್ತಿಸಿದ್ದೇ ಇದಕ್ಕೆ ಕಾರಣ. ಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಂಡಿರುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಪ್ರಭಾವಿಗಳ ಕಟ್ಟಡ, ಮಳಿಗೆಗಳನ್ನು ತೆರವುಗೊಳಿಸುವಲ್ಲಿ ಆದೇಶ ಪಾಲಿಸದೇ ಇರುವುದು ಯಾಕೆ? ಹಾಗಾದರೆ ಬೀದಿ ಬದಿ ವ್ಯಾಪಾರಸ್ಥರಿಗೆ ಒಂದು ನ್ಯಾಯ, ಪ್ರಭಾವಿಗಳಿಗೆ ಒಂದು ನ್ಯಾಯವೇ?” ಎಂದು ಪ್ರಶ್ನಿಸಿದರು.

“ಬೀದಿ ಬದಿ ವ್ಯಾಪಾರಸ್ಥರನ್ನು ತೆರವುಗೊಳಿಸುವ ಮುನ್ನ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ಹಲವು ಮಾರ್ಗದರ್ಶಿಗಳನ್ನು ನೀಡಿದೆ. ಆದರೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಅಧಿಕಾರಿಗಳು ಅವುಗಳನ್ನು ಪಾಲಿಸಿಲ್ಲ. ಇದರಿಂದ ರಸ್ತೆ ಬದಿ ವ್ಯಾಪಾರವನ್ನೇ ಜೀವನ ನಿರ್ವಹಣೆಗೆ ಆಧರಿಸಿದ್ದ ಕುಟುಂಬಗಳು ಬೀದಿಪಾಲಾಗಿವೆ. ಸರ್ಕಾರ ಮತ್ತು ಜಿಲ್ಲಾಡಳಿತ ಬಡವರ ಹೊಟ್ಟೆಯ ಮೇಲೆ ಹೊಡೆಯದೇ ಈ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕು. ಇಲ್ಲದೇ ಹೋದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ” ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದರು.

- Advertisement -

ಈ ಸುದ್ದಿ ಓದಿದ್ದೀರಾ?: ರಾಯಚೂರು | ಟೋಲ್ ಗೇಟ್ ನಿರ್ಮಿಸಿ ವಸೂಲಿಗೆ ಮುಂದಾದರೆ ಕಾನೂನು ಹೋರಾಟ: ಶಾಸಕಿ ಕರೆಮ್ಮ ನಾಯಕ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಪ್ರತಿಭಟನೆಯಲ್ಲಿ ಅಜೀಜ್ ಜಾಗೀರ್ದಾರ್, ರವಿಚಂದ್ರನ್, ಎಐಸಿಸಿಟಿಯು ಮುಖಂಡ ಖಾಸಿಂ ಸಾಬ್ ಕಾರ್ಪೋರೇಟರ್, ಸಾದಿಕ್ ಹುಸೇನ್, ಲಾಲ್ ಸಾಬ್, ರಸೂಲ್ ಸಾಬ್, ರಹೀಮ್ ಸಾಬ್, ಮೆಹಬೂಬ್, ಸಾದಿಕ್ ಮೈಕೀನಿಕ್, ಯಾಕುಬ್, ಹುಸೇನ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಇಳಕಲ್ ಪಟ್ಟಣಕ್ಕೆ 24 ಗಂಟೆ ಕುಡಿಯುವ ನೀರಿನ ಯೋಜನೆಗೆ ಚಾಲನೆ

ಇಳಕಲ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ...

ದಕ್ಷಿಣ ಕನ್ನಡ | ಹೆದ್ದಾರಿಯ ಅಪಘಾತ ಸ್ಥಳಗಳಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಲು ಎಸ್.ಪಿ ಸೂಚನೆ

ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರಂತರ ಅಪಘಾತಕ್ಕೆ ಕಾರಣವಾಗುವ ಸ್ಥಳಗಳ...

ಹಾವೇರಿ | ಸಚಿವರ ಮನೆ ಸುತ್ತು ನಿಷೇಧಾಜ್ಞೆ; ಬಂಕಾಪುರ ಟೋಲ್ ಬಂದ್ ಮಾಡಿ ರೈತರು ಆಕ್ರೋಶ

ಕಬ್ಬಿನ ದರ ನಿಗದಿಯಲ್ಲಿ ಹಾವೇರಿ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿಬೇಕು. ಪ್ರತಿ...

ಮುಂಡಗೋಡ | ಚಳಗೇರಿಯಲ್ಲಿ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ; 103 ಮಂದಿಗೆ ಚಿಕಿತ್ಸೆ

ಚಳಗೇರಿ ಗ್ರಾಮದಲ್ಲಿ ಸರ್ಕಾರಿ ಆಯುರ್ವೇದ ಆಸ್ಪತ್ರೆ, ಗ್ರಾಮ ಅಭಿವೃದ್ಧಿ ಸಮಿತಿ ಚಳಗೇರಿ...