ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ರಾಯಚೂರು ಜಿಲ್ಲಾ ಪಂಚಾಯತಿ ಸಹಾಯಕ ಲೆಕ್ಕಾಧಿಕಾರಿ ನರಸಿಂಹರಾವ ಗುಜ್ಜಾರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ನಗರದ ದೇವರ ಕಾಲೋನಿಯಲ್ಲಿರುವ ಅಧಿಕಾರಿ ಮನೆಯಲ್ಲಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ಮತ್ತು ಡಿವೈಎಸ್ಪಿ ಶೈಲಜಾ ನೇತೃತ್ವದ ತಂಡ ದಾಖಲೆಗಳ ಪರಿಶೀಲನೆಗೆ ಮುಂದಾಗಿದೆ.
ಈ ಸುದ್ದಿ ಓದಿದ್ದೀರಾ?: ರಾಯಚೂರು | ಆರು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ತಾತ್ಕಾಲಿಕವಾಗಿ ಸ್ಥಗಿತ
ಬ್ಯಾಂಕ್ ದಾಖಲೆಗಳು, ಆಸ್ತಿ ಸಂಬಂಧಿತ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಕಚೇರಿ ಸೇರಿದಂತೆ ಇತರೆ ಕಡೆಯೂ ಪರಿಶೀಲನೆ ನಡೆಸುವ ಸಾಧ್ಯತೆಯಿದೆ. ಸದ್ಯ ನರಸಿಂಹರಾವ ಗುಜ್ಜಾರ ನಗರದಲ್ಲಿ ಇಲ್ಲ ಎಂದು ಹೇಳಲಾಗುತ್ತಿದೆ. ಮತ್ತಷ್ಟು ಮಾಹಿತಿ ಇನ್ನಷ್ಟೇ ಬರಬೇಕಿದೆ.
