ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಲಿಂಗಸುಗೂರು ತಾಲ್ಲೂಕಿನ ನಾಗಲಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಯೋತಿ ಬಾಯಿ ಅವರನ್ನು ಅಮಾನತು ಮಾಡಲಾಗಿದೆ.
ಜ್ಯೋತಿ ಬಾಯಿ ಅವರು ಪಂಚತಂತ್ರ 2.0 ಮೂಲಕ ಪಂಚಾಯಿತಿ ಸಿಬ್ಬಂದಿ ಹಾಗೂ ತಮ್ಮ ಹಾಜರಿ ಹಾಕಿಲ್ಲ. ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದ್ದಾರೆ. ಆದ ಕಾರಣ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಪಾಂಡ್ವೆ ಅವರು ಅಮಾನತು ಮಾಡಿ ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಮೀರಾಪುರ ರಸ್ತೆ ದುರಸ್ತಿ ವಿಳಂಬ; ಗ್ರಾಮಸ್ಥರಿಗೆ ದಿನವೂ 8 ಕಿಮೀ ಕಾಲ್ನಡಿಗೆಯೇ ಗತಿ