ರಾಯಚೂರು | ವಕ್ಫ್‌ ಮಂಡಳಿ ಚುನಾವಣೆಯಲ್ಲಿ ಬೆದರಿಕೆ ಆರೋಪ: ಸ್ಪಷ್ಟನೆ ನೀಡಿದ ಮುತವಲ್ಲಿಗಳು

Date:

Advertisements

ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿ ಸದಸ್ಯರ ಚುನಾವಣೆಗೆ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಮೇರೆಗೆ ಅಭ್ಯರ್ಥಿಗಳಾದ ಅನ್ವರ ಭಾಷಾ ಮತ್ತು ಸರವರ್ ಬೇಗ್ ಅವರಿಗೆ ಚುನಾವಣಾ ಅಧಿಕಾರಿ ಶೋಕಾಸ್ ನೋಟಿಸ್ ಜಾರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲೆಯ 16 ಮತದಾರರೂ ಆಗಿರುವ ಮುತವಲ್ಲಿಗಳು ರಾಯಚೂರಿನ ಸಹಾಯಕ ಆಯುಕ್ತರಿಗೆ ತಮ್ಮ ಹೇಳಿಕೆ ದಾಖಲಿಸಿ ನಮಗೆ ಯಾರು ಬೆದರಿಕೆ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಜಿಲ್ಲೆಯ ವಕ್ಫ್‌ ಸಲಹಾ ಸಮಿತಿಯ ಅಧ್ಯಕ್ಷ ಮೌಲಾನಾ ಫರೀದ್ ಖಾನ್ ಅವರು ಮತದಾರರಾದ ಮುತವಲ್ಲಿಗಳಿಗೆ ಕರೆ ಮಾಡಿ ಅನ್ವರ್ ಭಾಷಾ ಮತ್ತು ಸರವರ್ ಬೇಗ್ ಅವರಿಗೆ ಮತದಾನ ಮಾಡಬೇಕು ಎಂದು ಹೆದರಿಸುತ್ತಿದ್ದಾರೆ ಎಂದು ಮುಖಂಡ ಹಾರಿಸ್ ಸಿದ್ದೀಖಿ ಅವರು ಚುನಾವಣಾಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾಸ್ ಅವರಿಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಇಬ್ಬರು ಅಭ್ಯರ್ಥಿಗೆ ನೋಟಿಸ್ ನೀಡಲಾಗಿತ್ತು ಹಾಗೂ 24 ಗಂಟೆಯೊಳಗೆ ಸ್ಪಷ್ಠನೆ ನೀಡದಿದ್ದಲ್ಲಿ ಶಿಸ್ತು ಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

Advertisements

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ 16 ಮುತವಲ್ಲಿಗಳು(ಮತದಾರರು) ರಾಯಚೂರು ಸಹಾಯಕ ಆಯುಕ್ತ ಗಜಾನನ ಬಾಳೆ ಅವರ ಮೂಲಕ ಚುನಾವಣಾ ಅಧಿಕಾರಿಗೆ ತಮ್ಮ ಹೇಳಿಕೆ ನೀಡಿದ್ದು, “ನಮಗೆ ವಕ್ಫ್ ಬೋರ್ಡ್ ಸಲಹಾ ಸಮಿತಿಯ ಜಿಲ್ಲಾಧ್ಯಕ್ಷ ಫರೀದ್ ಖಾನ್ ಯಾವುದೇ ಬೆದರಿಕೆ ಹಾಕಿಲ್ಲ. ದೂರುದಾರ ಹ್ಯಾರಿಸ್ ಸಿದ್ದೀಕಿ ಅವರಿಗೂ ವಕ್ಫ್ ಬೋರ್ಡ್ ಚುನಾವಣೆಗೆ ಹಾಗೂ ನಮಗೆ ಸಂಬಂಧವಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಕುಂದಾಪುರ | ರಿವರ್ಸ್‌ ಬರುತ್ತಿದ್ದ ಇನ್ನೋವಾ ಕಾರಿಗೆ ಮೀನಿನ ಲಾರಿ ಡಿಕ್ಕಿ: ಚಾಲಕನ ಸಹಿತ 8 ಮಂದಿ ಗಂಭೀರ

ಸ್ಪಷ್ಟನೆ ನೀಡಿದ 16 ಜನ ಮುತವಲ್ಲಿಗಳ ಪೈಕಿ ಡಾ.ಮೋಯಿನ್‌, ಮಹಮ್ಮದ್ ಅಲಿ‌ ಗುತ್ತೆದಾರ ಸಿರವಾರ ಹಾಗೂ ಮಹಮ್ಮದ್ ರಫಿ ಖುದ್ದಾಗಿ ಸಹಾಯಕ ಆಯುಕ್ತರಿಗೆ ಸ್ಪಷ್ಟನೆ ನೀಡಿದರೆ ಉಳಿದವರು ದೂರವಾಣಿ ಮೂಲಕ ಹೇಳಿಕೆ ನೀಡಿದ್ದಾರೆ.

ವಕ್ಫ್‌ ಬೋರ್ಡ್ ಚುನಾವಣೆ ಪಾರದರ್ಶಕವಾಗಿ ನಡೆಯಲಿ ಎಂಬ ನಿಟ್ಟಿನಲ್ಲಿ ದೂರು ನೀಡಲಾಗಿದೆ ಎಂದು ದೂರುದಾರ ಹ್ಯಾರಿಸ್ ಸಿದ್ದೀಕಿ ತಮ್ಮ ದೂರಿನಲ್ಲಿ ತಿಳಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X