ರಾಯಚೂರು | ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಅನುದಾನ ದುರ್ಬಳಕೆ ಆರೋಪ; ಡಿವಿಪಿ ಖಂಡನೆ

Date:

Advertisements

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮಿಸಲಿಟ್ಟ 11,000 ಕೋಟಿ ಅನುದಾನವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರ ನಡೆ ಪರಿಶಿಷ್ಟರ ವಿರೋಧಿಯಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಎಸ್) ಆಕ್ರೋಶ ವ್ಯಕ್ತಪಡಿಸಿದೆ.

ರಾಯಚೂರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಡಿವಿಎಸ್‌ ಕಾರ್ಯಕರ್ತರು, “ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಅನುದಾನದಲ್ಲಿ 11 ಸಾವಿರ ಕೋಟಿ ರೂಪಾಯಿ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗೆ ಬಳಸುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು” ಎಂದು ಒತ್ತಾಯಿಸಿದ್ದಾರೆ.

ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿದ ಮೌನೇಶ್ ಜಾಲವಾಡಗಿ, “ಎಸ್‌ಸಿ/ಎಸ್‌ಟಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಿರಬೇಕಾಗಿದ್ದ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಬಳಸುತ್ತಿರುವುದನ್ನು ಖಂಡನೀಯ. ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು, ತಮ್ಮ ಗ್ಯಾರಂಟಿ ಯೋಜನೆಗಳಿಗೆ ಬಳಸುವುದು ಸರಿಯಲ್ಲ. ಎಸ್‌ಸಿ/ಎಸ್‌ಟಿ ಅನುದಾನವನ್ನು ಅದೇ ಸಮುದಾಯಗಳ ಅಭಿವೃದ್ಧಿಗೆ ಮಾತ್ರವೇ ಬಳಸಬೇಕು” ಎಂದು ಆಗ್ರಹಿಸಿದ್ದಾರೆ.

Advertisements

ಈ ವೇಳೆ ಸಂಘಟನೆಯ ಮುಖಂಡ ರವಿಕುಮಾರ್ ಗೋನವಾರ, ಮನಿಷಪ್ಪ, ಶಾಂತಪ್ಪ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X