ರಾಯಚೂರು | ಅಂಬೇಡ್ಕರ್ ವೃತ್ತ ಕಾಮಗಾರಿ ಸ್ಥಗಿತ; ದಲಿತ ಹೋರಾಟಗಾರರ ಆಕ್ಷೇಪ

Date:

Advertisements

ರಾಯಚೂರಿನ ದೇವದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯದಿಂದ ಕಳೆದ 2 ವರ್ಷಗಳಿಂದ ಅಂಬೇಡ್ಕರ್ ವೃತ್ತ ದುರಸ್ತಿ ಕಾಮಗಾರಿ ಸ್ಥಗಿತಗೊಂಡಿರುವುದಕ್ಕೆ ದಲಿತಪರ ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗುತ್ತಿಗೆದಾರರ ಉದಾಸೀನದಿಂದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಲೋಕೋಪಯೋಗಿ ಇಲಾಖೆಯವರು ಪುರಸಭೆ ಮೇಲೆ.. ಪುರಸಭೆಯವರು ತಾಲೂಕಾಡಳಿತದ ಮೇಲೆ ಆರೋಪದ ನೆಪ ಹೇಳಿ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಹಲವು ಜಯಂತಿಗಳ ಪೂರ್ವಭಾವಿ ಸಭೆ, ಕೆಡಿಪಿ ಸಭೆಯಲ್ಲಿ ಪ್ರಸ್ತಾಪಿಸಿ ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಿದ್ದರೂ ಕಾಮಗಾರಿ ಮುಂದುವರೆಯುತ್ತಿಲ್ಲ ಎಂದು ಅಸಮಾಧಾನಗೊಂಡಿದ್ದಾರೆ.

1000094967



ಎರಡು ವರ್ಷಗಳ ಹಿಂದೆ ಲಾರಿಯೊಂದು ಅಂಬೇಡ್ಕರ್ ವೃತ್ತಕ್ಕೆ ಡಿಕ್ಕಿಯಾಗಿ ಕೆಳಗಿನ ಮೆಟ್ಟಿಲು ಮತ್ತು ಗ್ರಿಲ್‌ ಮುರಿದು ಹೋಗಿದ್ದವು. ಅದರ ದುರಸ್ತಿಗಾಗಿ ಇಂದು ನಾಳೆ ಎಂದು ಎರಡು ವರ್ಷಗಳು ಕಳೆದಿವೆ. ಬರೀ ಅಂಬೇಡ್ಕರ್ ಮೂರ್ತಿಗೆ ಕಾಮಗಾರಿ ಎರಡು ವರ್ಷಗಳು ಕಳೆದಿವೆ ಎಂದರೆ ಬೇರೆ ಕೆಲಸ ಹೇಗೆ ಎಂಬುದು ಸಾಅರ್ವಜನಿಕರ ಪ್ರಶ್ನೆಯಾಗಿದೆ.

ಈ ಬಗ್ಗೆ ದಲಿತ ಹೋರಾಟಗಾರ ಹನುಮಂತ ಮನ್ನಾಪುರು ಮಾತನಾಡಿ, “₹12 ಲಕ್ಷ ಅನುದಾನ ಮಂಜೂರಾದರೂ ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸದ ಲೋಕೋಪಯೋಗಿ ಇಲಾಖೆ ಎಇಇ ಮತ್ತು ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಅವರನ್ನು ಅಮಾನತು ಮಾಡಿ ಏಪ್ರಿಲ್ 14ರೊಳಗೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ಮುಂದುವರಿದರೆ ಮಾ.21ರಂದು ರಸ್ತೆ ಬಂದ್ ಮಾಡಿ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

1000094970


“ಎರಡು ವರ್ಷಗಳಿಂದ ಅಂಬೇಡ್ಕರ್ ಫೋಟೋ ಇಟ್ಟು ಸರಳವಾಗಿ ಜಯಂತಿ ಆಚರಿಸಲಾಗುತ್ತಿದೆ. ಈ ಬಾರಿ ಕಾಮಗಾರಿ ಪೂರ್ಣಗೊಂಡು ಆಚರಣೆಗೆ ಅನುಕೂಲ ಮಾಡಿಕೊಡಬೇಕು” ಎಂದರು.

Advertisements

ಇದನ್ನೂ ಓದಿ: ರಾಯಚೂರು | ಪಿಡಿಓ, ಅಧಿಕಾರ ದುರ್ಬಳಕೆ ಆರೋಪ: ಕೂಲಿ ಕಾರ್ಮಿಕರು ಧರಣಿ

ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ ಅವರು ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X