ವಿದ್ಯುತ್ ತಂತಿ ತೆಗೆಯಲು ಹೋಗಿ ಮೃತಪಟ್ಟ ಲೈನ್‌ಮ್ಯಾನ್ ವಿರೂಪಾಕ್ಷಪ್ಪ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ರಾಯಚೂರು ಜಿಲ್ಲೆಯ ದೇವದುರ್ಗ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.
“ದೇವದುರ್ಗ ತಾಲೂಕಿನ ಬಂಡೆಗುಡ್ಡ ತಾಂಡಾದ ಹತ್ತಿರ ಆಲದಮರ ಬಳಿ ವಿದ್ಯುತ್ ತಂತಿ ತೆಗೆಯಲು ಹೋಗಿ, ವಿದ್ಯುತ್ ಕಂಬಕ್ಕೆ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸಂಪರ್ಕದಿಂದ ಲೈನ್‌ಮ್ಯಾನ್ ವಿರೂಪಾಕ್ಷಪ್ಪ ಮೃತಪಟ್ಟಿದ್ದರು. ಜೆಸ್ಕಾಂ ಅಧಿಕಾರಿಗಳ ಬೇಜವಬ್ದಾರಿತನದಿಂದ ಈ ಅವಘಡ ಸಂಭವಿಸಿದೆ. ಹಾಗಾಗಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
“ಲೈನ್‌ಮ್ಯಾನ್ ಮೃತಪಟ್ಟ ವೇಳೆ ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರೆಮ್ಮ ಜಿ ನಾಯಕ್ ಅವರು ನೋಡಲು ಹೋದಾಗ ಅವಾಚ್ಯ ಶಬ್ದಗಳಿಂದ ಬೈದಿರುವ ಬಿಜೆಪಿ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು. ಜೊತೆಗೆ ಮೃತ ಲೈನ್‌ಮ್ಯಾನ್ ಕುಟುಂಬಕ್ಕೆ ಪರಿಹಾರ ಒದಗಿಸಬೇಕು. ಇಲ್ಲವಾದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ತೀವ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಗದಗ | ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಎಸ್‌ಎಫ್‌ಐ ಮನವಿ
ಮಲ್ಲಪ್ಪ ಗೌಡೂರು, ಬಸವರಾಜ ಜಾಲಹಳ್ಳಿ, ಮರೆಪ್ಪ ಬಾಗೂರು, ಮಹಾದೇವಪ್ಪ, ಬಾಳಪ್ಪ ಬಾವಿಮನಿ, ಯಲ್ಲಪ್ಪ ಸೇರಿದಂತೆ ಇತರರು ಇದ್ದರು.