ರಾಯಚೂರು | ಹಾಸ್ಟೆಲ್‌ ವಾರ್ಡನ್‌ ಅಮಾನತಿಗೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಆಗ್ರಹ

Date:

Advertisements

ಸರ್ಕಾರಿ ಪ್ರೌಢಶಾಲೆ ವಸತಿನಿಲಯದಲ್ಲಿ ಸರಿಯಾದ ಊಟದ ವ್ಯವಸ್ಥೆ, ಶುದ್ಧ ಕುಡಿತುವ ನೀರಿನ ಘಟಕ ಸೇರಿದಂತೆ ಇತರೆ ಮೂಲ ಸೌಕರ್ಯ ಒದಗಿಸದ ಹಾಸ್ಟೆಲ್‌ ವಾರ್ಡನ್‌ ಭೀಮರಾಯ ಅವರನ್ನು ಅಮಾನತುಗೊಳಿಸಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

“ಹಾಸ್ಟೆಲ್‌ನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸೌಲಭ್ಯ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಬೋರ್‌ವೆಲ್‌ ನೀರನ್ನೇ ಕುಡಿಯುತ್ತಿದ್ದಾರೆ. ಬೋರವೆಲ್ ನೀರು ಗಡಸಾಗಿದ್ದು, ಅದನ್ನೇ ಸೇವಿಸುವುದರಿಂದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಾಧ್ಯತೆಗಳಿವೆ. ಅಷ್ಟೇ ಅಲ್ಲದೆ ಆ ನೀರು ಕುಡಿಯಲು ಯೋಗ್ಯವಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ವಸತಿ ನಿಲಯದಲ್ಲಿ ಮಲಗುವ ಹಾಸಿಗೆಗಳು ಹರಿದೋಗಿದ್ದು, ವಸತಿ ನಿಲಯದ ವಾತಾವರಣ ತುಂಬಾ ಹಾಳಾಗಿದೆ. ನಿಲಯದ ಸುತ್ತಮುತ್ತಲೂ ದುರ್ವಾಸನೆ ಬರುತ್ತಿದೆ. ಈ ಕುರಿತ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳು ಹೇಳಲು ಹೋದರೆ, ವಾರ್ಡನ್‌ ಭೀಮರಾಯ ವಿದ್ಯಾರ್ಥಿಗಳಿಗೆ ಧಮಕಿ ಹಾಕಿ ಬಾಯಿಗೆ ಬಂದಂತೆ ಬೈಯ್ಯುತ್ತಾರೆಂದು ಗಮನಕ್ಕೆ ಬಂದಿದೆ” ಎಂದು ಆರೋಪಿಸಿದರು.

Advertisements

“ಸರ್ಕಾರದಿಂದ ಸಿಗುವ ಸೌಲಭ್ಯಗಳಾದ ಪುಸ್ತಕಗಳು, ನೋಟ್ ಬುಕ್‌ಗಳು ಸೇರಿದಂತೆ ಇನ್ನಿತರ ಸಾಮಾಗ್ರಿಗಳನ್ನು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಹಂಚಿಕೆ ಮಾಡುತ್ತಿಲ್ಲ. ಅಲ್ಲದೆ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದು, ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ರಾತ್ರಿಯ ಸಮಯದಲ್ಲಿ ಓದುತ್ತಿದ್ದಾರೋ, ಇಲ್ಲವೋ ಎಂಬುದರ ಬಗ್ಗೆಯೂ ಪರಿಶೀಲನೆ ಮಾಡುವುದಿಲ್ಲ. ವಿದ್ಯಾರ್ಥಿಗಳು ಬೇರೆ ಯಾವ ಕಡೆ ಹೋಗಿದ್ದಾರೆ ಎಂಬುದರ ಬಗ್ಗೆಯೂ ಕೇಳುವುದಿಲ್ಲ. ವಸತಿ ನಿಲಯದ ವಿದ್ಯಾರ್ಥಿಗಳ ಬಗ್ಗೆ ಬೇಜವಬ್ದಾರಿತ ವಹಿಸುತ್ತಿದ್ದಾರೆ. ಜತೆಗೆ ಸರಿಯಾದ ಸಮಯಕ್ಕೆ ವಸತಿ ನಿಲಯಕ್ಕೆ ಬರುವುದಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಠಿಣ ಕ್ರಮಕ್ಕೆ ಆಗ್ರಹ

ಎಲ್ಲ ಸಮಸ್ಯೆಗಳ ಹಿನ್ನೆಲೆಯಲ್ಲಿ ವಾರ್ಡನ್‌ ಭೀಮರಾಯ ಅವರನ್ನು ಕರೆಯಿಸಿ, ವಿಚಾರಣೆ ಮಾಡಿ, ಕೂಡಲೇ ಅವರನ್ನು ಅಮಾನತುಗೊಳಿಸಬೇಕು. ಒಂದು ವೇಳೆ ವಿಳಂಬವಾದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ತಾಲೂಕು ಕಚೇರಿ ಎದುರು ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಟ್ಟಪ್ಪ ಗೌಡೂರು, ಬಸವರಾಜ ಜಾಲಹಳ್ಳಿ, ಬಾಳಪ್ಪ ಬಾವಿಮನಿ, ಜಮಾತಿಪ್ಪ ಜೋಳದಜೆ, ಭೀಮಶಪ್ಪ ಭಂಡಾರಿ ಗುಂಟ್ವಾಳ, ದುರುಗಪ್ಪ ಸಮುದ್ರ, ಯಲ್ಲಪ್ಪ ಕರಿಗುಡ್ಡ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X