ಸ್ವಾತಂತ್ರ‍್ಯೋತ್ಸವದ ಅಂಗವಾಗಿ ನನ್ನ ಮಣ್ಣು ನನ್ನ ದೇಶ ಅಭಿಯಾನದ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ರಾಯಚೂರು ನಗರಸಭೆ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಕೆ ಆರ್ ದುರುಗೇಶ ಅವರು ಧ್ವಜಾರೋಹಣ ನೆರವೇರಿಸಿದರು.
ನಗರದ ನಗರಸಭೆ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ನಗರಸಭೆ ಒಗ್ಗೂಡಿ ನಡೆಸಿದ 76ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ನನ್ನ ಮಣ್ಣು ನನ್ನ ದೇಶ ಅಭಿಯಾನದ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಬಳಿಕ ಪೂಜೆ ಸಲ್ಲಿಸಿ ಸಂವಿಧಾನ ವಿಧಿ ಬೋಧಿಸಿದರು. ನನ್ನ ಮಣ್ಣು ನನ್ನ ದೇಶ ಅಭಿಯಾನದ ಅಂಗವಾಗಿ ಕೈಯಲ್ಲಿ ಮಣ್ಣು ಹಿಡಿದು ಪಂಚಪ್ರಾಣ ಪ್ರತಿಜ್ಞೆ ಮಾಡಿದರು.
ನನ್ನ ಮಣ್ಣು ನನ್ನ ದೇಶ ಅಭಿಯಾನದಲ್ಲಿ ಅಂಬೇಡ್ಕರ ಭಾವಚಿತ್ರ ಇಟ್ಟು ಪೂಜೆ ನೆರವೇರಿಸುವುದಾಗಿ ಜಿಲ್ಲಾಧಿಕಾರಿಗಳು ಹೋರಾಟಗಾರರಿಗೆ ನೀಡಿದ ಭರವಸೆಯಂತೆ ಇಂದು ನಗರಸಭೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ ಭಾವಚಿತ್ರ ಇಟ್ಟು ಪೂಜೆ ನೆರವೇರಿಸಲಾಯಿತು. ಈ ವೇಳೆ ಸ್ವಾತಂತ್ರ್ಯೋತ್ಸವದಂದು ಆದಂತ ಘಟನೆಗೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ ವಿಷಾಧ ವ್ಯಕ್ತಪಡಿಸಿದರು.
ಆಗಸ್ಟ್ 15 ರಂದು ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ರಾಯಚೂರು ನಗರಸಭೆ ಕಚೇರಿ ಆವರಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇಡದೆ ಅವಮಾನ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ ಪೌರಾಯುಕ್ತರನ್ನು ಅಮಾನತುಗೊಳಿಸುವಂತೆ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪುನಃ ಧ್ವಜಾರೋಹಣ ಮಾಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ |ಬ್ರಿಮ್ಸ್ ಹೊರಗುತ್ತಿಗೆಯಲ್ಲಿ ಲೂಟಿ; ಸಚಿವ ಖೂಬಾರನ್ನು ಸಂಪುಟದಿಂದ ವಜಾಕ್ಕೆ ಒತ್ತಾಯ
ಈ ವೇಳೆ ಮಾಜಿ ಸೈನಿಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪೌರಾಯಕ್ತ ಗುರುಸಿದ್ದಯ್ಯ ಹಿರೇಮಠ, ನಗರಸಭೆ ಹಿರಿಯ ಸದಸ್ಯ ಜಯಣ್ಣ, ನರಸಿಂಹಲು ಮಾಡಗಿರಿ ಮತ್ತು ವಿವಿಧ ಸಂಘಟನೆಗಳ ಮುಖಂಡರುಗಳಾದ ಎಸ್ ರಾಜು, ಹೇಮರಾಜ ಅಸ್ಕಿಹಾಳ, ಮಲ್ಲೇಶ ಕೊಲಿಮಿ, ವಿಶ್ವನಾಥ ಪಟ್ಟಿ, ಎಂ.ಈರಣ್ಣ, ರವಿ ದಾದಾಸ್ ಸೇರಿದಂತೆ ಭಾಗವಹಿಸಿದ್ದರು.