ರಾಯಚೂರು | ಧ್ವಜಾರೋಹಣದಲ್ಲಿ ಅಂಬೇಡ್ಕರ್‌ ಭಾವಚಿತ್ರ ಇಡದೆ ಅವಮಾನ; ವಿಷಾಧಿಸಿದ ಪೌರಾಯುಕ್ತ

Date:

Advertisements

ಸ್ವಾತಂತ್ರ‍್ಯೋತ್ಸವದ ಅಂಗವಾಗಿ ನನ್ನ ಮಣ್ಣು ನನ್ನ ದೇಶ ಅಭಿಯಾನದ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ರಾಯಚೂರು ನಗರಸಭೆ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಕೆ ಆರ್ ದುರುಗೇಶ ಅವರು ಧ್ವಜಾರೋಹಣ ನೆರವೇರಿಸಿದರು.

ನಗರದ ನಗರಸಭೆ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ನಗರಸಭೆ ಒಗ್ಗೂಡಿ ನಡೆಸಿದ 76ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ನನ್ನ ಮಣ್ಣು ನನ್ನ ದೇಶ ಅಭಿಯಾನದ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಬಳಿಕ ಪೂಜೆ ಸಲ್ಲಿಸಿ ಸಂವಿಧಾನ ವಿಧಿ ಬೋಧಿಸಿದರು. ನನ್ನ ಮಣ್ಣು ನನ್ನ ದೇಶ ಅಭಿಯಾನದ ಅಂಗವಾಗಿ ಕೈಯಲ್ಲಿ ಮಣ್ಣು ಹಿಡಿದು ಪಂಚಪ್ರಾಣ ಪ್ರತಿಜ್ಞೆ ಮಾಡಿದರು.

ನನ್ನ ಮಣ್ಣು ನನ್ನ ದೇಶ ಅಭಿಯಾನದಲ್ಲಿ ಅಂಬೇಡ್ಕರ ಭಾವಚಿತ್ರ ಇಟ್ಟು ಪೂಜೆ ನೆರವೇರಿಸುವುದಾಗಿ ಜಿಲ್ಲಾಧಿಕಾರಿಗಳು ಹೋರಾಟಗಾರರಿಗೆ ನೀಡಿದ ಭರವಸೆಯಂತೆ ಇಂದು ನಗರಸಭೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ ಭಾವಚಿತ್ರ ಇಟ್ಟು ಪೂಜೆ ನೆರವೇರಿಸಲಾಯಿತು. ಈ ವೇಳೆ ಸ್ವಾತಂತ್ರ್ಯೋತ್ಸವದಂದು ಆದಂತ ಘಟನೆಗೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ ವಿಷಾಧ ವ್ಯಕ್ತಪಡಿಸಿದರು.

Advertisements

ಆಗಸ್ಟ್‌ 15 ರಂದು ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ರಾಯಚೂರು ನಗರಸಭೆ ಕಚೇರಿ ಆವರಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್‌ ಅವರ ಭಾವಚಿತ್ರ ಇಡದೆ ಅವಮಾನ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ ಪೌರಾಯುಕ್ತರನ್ನು ಅಮಾನತುಗೊಳಿಸುವಂತೆ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪುನಃ ಧ್ವಜಾರೋಹಣ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ |ಬ್ರಿಮ್ಸ್ ಹೊರಗುತ್ತಿಗೆಯಲ್ಲಿ ಲೂಟಿ; ಸಚಿವ ಖೂಬಾರನ್ನು ಸಂಪುಟದಿಂದ ವಜಾಕ್ಕೆ ಒತ್ತಾಯ

ಈ ವೇಳೆ ಮಾಜಿ ಸೈನಿಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪೌರಾಯಕ್ತ ಗುರುಸಿದ್ದಯ್ಯ ಹಿರೇಮಠ, ನಗರಸಭೆ ಹಿರಿಯ ಸದಸ್ಯ ಜಯಣ್ಣ, ನರಸಿಂಹಲು ಮಾಡಗಿರಿ ಮತ್ತು ವಿವಿಧ ಸಂಘಟನೆಗಳ ಮುಖಂಡರುಗಳಾದ ಎಸ್ ರಾಜು, ಹೇಮರಾಜ ಅಸ್ಕಿಹಾಳ, ಮಲ್ಲೇಶ ಕೊಲಿಮಿ, ವಿಶ್ವನಾಥ ಪಟ್ಟಿ, ಎಂ.ಈರಣ್ಣ, ರವಿ ದಾದಾಸ್ ಸೇರಿದಂತೆ ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕನ್ನಡ ಉಳಿಯಬೇಕಾದರೆ ಎಸ್‌ಇಪಿ ಜಾರಿಯಾಗಲಿ : ಪುರುಷೋತ್ತಮ ಬಿಳಿಮಲೆ

ʼಶಿಕ್ಷಣಕ್ಕೆ ಭದ್ರತೆ, ಜೀವನ, ಬದುಕು, ಅನ್ನ, ನೆಮ್ಮದಿ ಸೇರಿದಂತೆ ನಾನಾ ಅರ್ಥಗಳಿವೆ....

ರಾಯಚೂರು | ಬಾಣಂತಿ, ಮಗು ಸಾವು

ಹೆರಿಗೆಯ ವೇಳೆ ತೀವ್ರ ರಕ್ತಸ್ರಾವವಾಗಿ ತಾಯಿ ಮತ್ತು ಮಗು ಇಬ್ಬರೂ ಸಾವನ್ನಪ್ಪಿದ...

ಉಡುಪಿ | ಶಾಸಕರಿಂದ ಸೌಹಾರ್ದತೆಗೆ ದಕ್ಕೆ ತರುವ ಹೇಳಿಕೆ, ಕಾನೂನು ಕ್ರಮ ಕೈಗೊಳ್ಳಿ – ಎಸ್ ಡಿ ಪಿ ಐ

ಮೈಸೂರು ಸಂಸ್ಥಾನದ ಇತಿಹಾಸದ ಗಂಧಗಾಳಿ ತಿಳಿಯದ ಮತ್ತು ಸದಾ ಹಿಂದುತ್ವದ ಅಮಲಿನಲ್ಲಿರುವ...

ವಿಜಯಪುರ | ಸರ್ಕಾರ ದಲಿತರಿಗೆ ರಾಜಕೀಯದಲ್ಲೂ ಮೀಸಲಾತಿ ಕಲ್ಪಿಸಲಿ: ದಸಂಸ ಸಂಚಾಲಕ ಮಯೂರ

ಪರಿಶಿಷ್ಟ ಸಮುದಾಯಗಳಿಗೆ ಶೈಕ್ಷಣಿಕ, ಆರ್ಥಿಕ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ...

Download Eedina App Android / iOS

X