ರಾಯಚೂರು | ಪಾನ್‌ ಅಂಗಡಿಯಲ್ಲಿ ಗುಟ್ಕಾ, ಸಿಗರೇಟ್ ಮಾರಾಟ ಮಾಡದೆ ಆದರ್ಶವಾದ ಮಹಿಳೆ : ಮದ್ಯಪಾನ ಸಂಯಮ ಮಂಡಳಿ ಶ್ಲಾಘನೆ

Date:

ರಾಯಚೂರು ಜಿಲ್ಲೆ ಸುಲ್ತಾನ್‌ಪುರ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ತನ್ನ ಪತಿಯೊಂದಿಗೆ ಪಾನ್ ಅಂಗಡಿ ನಡೆಸುತ್ತಿರುವ ವಿಜಯಲಕ್ಷ್ಮಿರಾ ಅವರು, ಗುಟ್ಕಾ, ಸಿಗರೇಟ್ ಮಾರಾಟದಿಂದ ದೂರವಿರುವ ಮೂಲಕ ಪ್ರಾಮಾಣಿಕತೆ ಮತ್ತು ನೈತಿಕತೆಯ ಆದರ್ಶವಾಗಿ ಮಿಂಚಿದ್ದಾರೆ. ಅವರ ಈ ಸಮಾಜಮುಖಿ ವ್ಯವಹಾರದ ಕಾರ್ಯತಂತ್ರವನ್ನು ಗೌರವಿಸಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲಾದಪುರ ಅವರು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿದರು.

- Advertisement -

ಗುಟಕಾ ಮತ್ತು ಸಿಗರೇಟ್ ವಿತರಕರು ಹಲವು ಬಾರಿ ವಿಜಯಲಕ್ಷ್ಮಿ ಅವರನ್ನು ಮಾರಾಟ ಮಾಡಲು ಹೇಳಿದರು ಅವರು ತಮ್ಮ ನೈತಿಕ ನಿಲುವಿನಿಂದ ಒಂದಿಂಚೂ ಹಿಂದೆ ಸರಿಯಲಿಲ್ಲ. ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಶರಣಪ್ಪ ಸಲಾದಪುರ, “ಗುಟಕಾ ಮತ್ತು ಸಿಗರೇಟ್‌ನಿಂದ ಆರೋಗ್ಯಕ್ಕೆ ತೀವ್ರ ಹಾನಿಯಾಗುತ್ತದೆ. ವಿಜಯಲಕ್ಷ್ಮಿ ಅವರು ಇಂತಹ ಉತ್ಪನ್ನಗಳನ್ನು ಮಾರಾಟ ಮಾಡದೆ, ಆದರ್ಶ ಜೀವನ ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಗಳು ಸಮಾಜದಲ್ಲಿ ವಿರಳವಾಗಿ ಸಿಗುತ್ತಾರೆ,” ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ರಾಯಚೂರು | ₹58 ಲಕ್ಷ ಸೈಬರ್ ವಂಚನೆ ಪ್ರಕರಣ; ₹18.29 ಲಕ್ಷ ರಿಕವರಿ

ವಿಜಯಲಕ್ಷ್ಮಿ ಅವರ ಸನ್ಮಾನವು ಆರೋಗ್ಯವಂತ ಮತ್ತು ಸ್ವಸ್ಥ ಸಮಾಜದ ಕಲ್ಪನೆಗೆ ಉತ್ತೇಜನ ನೀಡುವ ಗುರಿಯನ್ನು ಹೊಂದಿದೆ. “ಅನೇಕರು ಸಮಾಜಕ್ಕೆ ಸಣ್ಣ ಅಥವಾ ದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತಿದ್ದಾರೆ. ಆದರೆ ಅವರ ಸೇವೆಯನ್ನು ಗುರುತಿಸಿದಾಗ, ಅದು ಇತರರಿಗೆ ಪ್ರೇರಣೆಯಾಗುತ್ತದೆ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...