ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ, ಅಂಗನವಾಡಿ ಕಾರ್ಯಕರ್ತೆ ಗಂಭೀರ ಗಾಯಗೊಂಡ ಘಟನೆ ಅರಕೇರಾ ತಾಲ್ಲೂಕು ಆಲದರ್ತಿ ಗ್ರಾಮದಲ್ಲಿ ನಡೆದಿದೆ.
ಅಂಗನವಾಡಿ ಕಾರ್ಯಕರ್ತೆ ಗಂಭೀರ ಗಾಯಗೊಂಡ ಮಹಾದೇವಮ್ಮ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ 11 ಗಂಟೆ ಸುಮಾರು ಅಂಗನವಾಡಿಯಲ್ಲಿ ತರಗತಿಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕಿ ಮೇಲೆ ಏಕಾಏಕಿ ಮೇಲ್ಛಾವಣಿ ಕುಸಿದು ಬಿದ್ದು ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸಾವಿನ ಬಳಿಕವೂ ಸಂಕಷ್ಟ: ನದಿದಾಟಿ ಅಂತ್ಯಕ್ರಿಯೆಗೆ ಗ್ರಾಮಸ್ಥರ ಪರದಾಟ
ಅದೃಷ್ಟವಶಾತ್, ಶಾಲೆಯೊಳಗಿನ ಮಕ್ಕಳು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಸಿದ ಬಿದ್ದ ಪರಿಣಾಮವಾಗಿ ಅಂಗನವಾಡಿ ಕಾರ್ಯಕರ್ತೆ ಅವರಿಗೆ ತೀವ್ರ ತಲೆಗೆ ಪೆಟ್ಟು ಬಿದ್ದ ಕಾರಣಕ್ಕೆ ಸ್ಥಳೀಯರ ಮುಖಾಂತರ ದೇವದುರ್ಗ ತಾಲೂಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಂಗನವಾಡಿ ಕಟ್ಟಡವು ಹೊಸ ಕಟ್ಟಡವಾಗಿದೆ. ಈ ರೀತಿ ಕುಸಿದು ಬಿದ್ದಿರುವುದು ಕಾಮಗಾರಿ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದರು.
