ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ಅಕ್ರಮವಾಗಿ ಹಣ ದುರುಪಯೋಗ ಮಾಡಿಕೊಂಡ ಆರೋಪದಡಿ ದೇವದುರ್ಗ ತಾಲೂಕಿನ ಮಸರಕಲ್ ವಲಯ ಮೇಲ್ವಿಚಾರಕಿಯನ್ನು ಅಮಾನತುಗೊಳಿಸಲಾಗಿದೆ.
ವಲಯ ಮೇಲ್ವಿಚಾರಕಿ ಕಮಲಾಕ್ಷಿ ಎಂಬುವವರನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ. ಕಮಲಾಕ್ಷಿ ಅವರ ವಿರುದ್ಧ ಆರೋಪಗಳ ವಿಚಾರಣೆಯನ್ನು ಬಾಕಿ ಇರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಈ ಸುದ್ಡಿ ಓದಿದ್ದೀರಾ? ರಾಯಚೂರು |ಚಿಂದಿ ಆಯಲು ಹೋಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವು
ಆಪಾದಿತರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು 1958 ರ ನಿಯಮ 58 ರನ್ವಯ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹರಿದ್ದು, ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.