ರಾಯಚೂರು | ಕೇಂದ್ರ ಬಜೆಟ್ ನಲ್ಲಿ ಅಂಗನವಾಡಿ ನೌಕರರಿಗೆ ಅನ್ಯಾಯ; ಬಜೆಟ್ ಪ್ರತಿ ದಹಿಸಿ ಪ್ರತಿಭಟನೆ

Date:

ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‍ನಲ್ಲಿ ಅಂಗನವಾಡಿ ನೌಕರರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶಿಸಿ ಅಂಗನವಾಡಿ ನೌಕರರ ಸಂಘ(ಸಿಐಟಿಯು) ವತಿಯಿಂದ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನಾನಿರತ ಅಂಗನವಾಡಿ ನೌಕರರು ಕೇಂದ್ರ ಸಚಿವೆ ಅನ್ನಪೂರ್ಣ ಹಾಗೂ ರಾಜ್ಯ ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿ ಬಜೆಟ್ ಪ್ರತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬಜೆಟ್ ಗೂ ಮೊದಲು ಅಂಗನವಾಡಿ ನೌಕರರು ಹೋರಾಟ ಮಾಡಿದಾಗ ಹೋರಾಟಗಾರರ ಜೊತೆ ಮಾತುಕತೆ ನಡೆಸಿದ ಕುಮಾರಸ್ವಾಮಿ ಅವರು ಗೌರವಧನ ಹೆಚ್ಚಳ ಮಾಡಿಸಲು ಭರವಸೆ ನೀಡಿದ್ದರು. ‌ಆದರೆ ಈಗ ಕೇಂದ್ರ‌ಸರ್ಕಾರದ ಮೇಲೆ ಒತ್ತಡ ಹಾಕಲು ವಿಫಲರಾಗಿದ್ದಾರೆ. ಅಂಗನವಾಡಿ, ಬಿಸಿಯೂಟ ಕಾರ್ಮಿಕರಿಗೆ ಒಂದು ರೂಪಾಯಿ ಹೆಚ್ಚಳ ಮಾಡಿಲ್ಲ, ಬಜೆಟ್‍ನಲ್ಲಿ ಸ್ಕೀಮ್ ನೌಕರರ ಖಾಯಂ ವಿಚಾರವಾಗಲಿ ಮತ್ತು ಒಂದೇ ಒಂದು ರೂಪಾಯಿ ವೇತನ ಹೆಚ್ಚಳ ಮಾಡದೇ ವಚನಭ್ರಷ್ಟ ಸರ್ಕಾರವಾಗಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಕೊಟ್ಟಮಾತಿನಂತೆ ಗೌರವಧನ ಹೆಚ್ಚಳ ಮಾಡಬೇಕು. ಸ್ಕೀಮ್ ನೌಕರರನ್ನು ಖಾಯಂ ಮಾಡಬೇಕು ಅಲ್ಲಿಯವರೆಗೆ ಬೆಲೆ ಏರಿಕೆ ತಕ್ಕಂತೆ ಕನಿಷ್ಠ ವೇತನ 31000 ಸಾವಿರ ಘೋಷಣೆ ಮಾಡಬೇಕು. ಸ್ಕೀಂ ನೌಕರರ ಅನೇಕ ಬೇಡಿಕೆ ಈಡೇರಿಸಲು ಒತ್ತಾಯಿಸಿ ಫೆ.12ರಂದು‌ ಅಖಿಲ ಭಾರತ ಮುಷ್ಕರ ಆಯೋಜಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ‌ಬಿಸಿ ಮುಟ್ಟಿಸುತ್ತೇವೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜೆಸ್ಕಾಂ ಉಗ್ರಾಣಕ್ಕೆ ನುಗ್ಗಿ ಕಳುವು ಯತ್ನ; ಓರ್ವ ಮಹಿಳೆ ಬಂಧನ

ಪ್ರತಿಭಟನೆಯಲ್ಲಿ ಅಂಗನವಾಡಿ ನೌಕರರ ಸಂಘದ‌ ಜಿಲ್ಲಾ ಘಟಕದ ಅಧ್ಯಕ್ಷೆ ಹೆಚ್.ಪದ್ಮಾ, ಗೋಕಾರಮ್ಮ, ರಹೀಮತ್ ಬೇಗಂ, ಶಾಂತಮ್ಮ, ವರಲಕ್ಷ್ಮೀ, ಇಂದಿರಾ, ಕೆ.ಜಿ ಮಲ್ಲಿಕಾ, ಶರಣಮ್ಮ, ಆಸ್ಮಾಬೇಗಂ, ಚಂದ್ರಕಲಾ, ಶಾಮಲಾ ಸೇರಿದಂತೆ ನೌಕರರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...