ರಾಯಚೂರು | ರೈಲ್ವೆ ನಿಲ್ದಾಣದ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ

Date:

ರಾಯಚೂರು ರೈಲ್ವೆ ನಿಲ್ದಾಣದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಮಧ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅರುಣಕುಮಾರ ಜೈನ್‌ಗೆ ದಕ್ಷಿಣ ಮಧ್ಯ ರೈಲ್ವೆಯ ಸಲಹಾ ಸಮಿತಿಯ ಮಾಜಿ ಸದಸ್ಯ ಬಾಬುರಾವ್ ಮನವಿ ಸಲ್ಲಿಸಿದರು.

“ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿಯಲ್ಲಿ ರಾಯಚೂರು ರೈಲು ನಿಲ್ದಾಣದ ಹೊಸ ಕಟ್ಟಡ ನಿರ್ಮಾಣ ಪ್ರಾರಂಭಿಸುವುದು, ಸಿಂಧನೂರಿನಿಂದ ರಾಯಚೂರಿಗೆ ಹೊಸ ರೈಲು ಮಾರ್ಗದ ಬಾಕಿ ಕಾಮಗಾರಿಯನ್ನು ತ್ವರಿತಗೊಳಿಸುವುದು, ಗದಗದಿಂದ ವಾಡಿವರೆಗಿನ ಹೊಸ ರೈಲು ಮಾರ್ಗದ ಬಾಕಿ ಕಾಮಗಾರಿಯನ್ನು ತೀವ್ರಗೊಳಿಸಬೇಕು” ಎಂದು ಅವರು ಒತ್ತಾಯಿಸಿದರು.

ರಾಯಚೂರಿನಿಂದ ಯರಮರಸ್‌ಗೆ ಗುಡ್ ಶೆಡ್ ಸ್ಥಳಾಂತರ, ಸೋಲಾಪುರ-ಗುಂತಕಲ್ ಪ್ಯಾಸೆಂಜರ್ ಮರುಸ್ಥಾಪನೆ, ವಿಶಾಖಪಟ್ಟಣಂ-ಮಹೆಬೂಬ್‌ನಗರ ರೈಲನ್ನು ರಾಯಚೂರುವರೆಗೆ ವಿಸ್ತರಿಸುವ ಪ್ರಸ್ತಾವನೆ, ಮಚಲಿ ಪಟ್ಟಣಂ-ಮಂತ್ರಾಲಯ ವಿಶೇಷ ಟ್ರೈ-ಸಾಪ್ತಾಹಿಕ ಎಕ್ಸ್ಪ್ರೆಸ್ ಆರಂಭ, ಕಾಕಿನಾಡ-ರಾಯಚೂರು ವಿಶೇಷ ಟ್ರೈ-ಸಾಪ್ತಾಹಿಕ ಎಕ್ಸ್ಪ್ರೆಸ್ ಮರುಸ್ಥಾಪನೆ, ಬೆಳಗಾವಿ-ಮಂಗಳೂರು ಎಕ್ಸ್ಪ್ರೆಸ್ ಮರುಸ್ಥಾಪನೆ, ರಾಯಚೂರಿನಲ್ಲಿ ಯಶವಂತಪುರ ಎಸಿ ದುರಂತೋ ಎಕ್ಸ್ಪ್ರೆಸ್ ನಿಲುಗಡೆ, ರಾಯಚೂರಿನಲ್ಲಿ ಗೋರಖ್‌ಪುರ-ಯಶವಂತಪುರ ಎಕ್ಸ್ಪ್ರೆಸ್‌ಗೆ ನಿಲುಗಡೆ, ಯಶವಂತಪುರ-ಬಿಕಾನೇರ್ ಎಕ್ಸ್ಪ್ರೆಸ್ ಅನ್ನು ರಾಯಚೂರು ಮೂಲಕ ತಿರುಗಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

- Advertisement -

ಇದನ್ನೂ ಓದಿ: ರಾಯಚೂರು | ಹದಿಹರೆಯದ ಮಕ್ಕಳ ಸಮಸ್ಯೆ-ಪರಿಹಾರಕ್ಕೆ ಜಾಗೃತಿ ಕೇಂದ್ರ ಆರಂಭ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಂಚಲಾಪುರ ರಸ್ತೆ ರಾಯಚೂರು ರೈಲ್ವೆ ಗೇಟ್‌ನಲ್ಲಿ ಅಂಡರ್ ಪಾಸ್ ಸೇತುವೆ ನಿರ್ಮಾಣ, ಪ್ಲಾಟ್‌ಫಾರ್ಮ್ನಲ್ಲಿ ಆಹಾರ ಟ್ಯಾಂಕ್ ಪ್ಲಾಟ್‌ಫಾರ್ಮ್ನಲ್ಲಿ ಎಸ್ಕಲೇಟರ್‌ಗಳು, ಪ್ರಸ್ತುತದಲ್ಲಿ ಹೆಚ್ಚುವರಿ ಪ್ಲಾಟ್‌ಫಾರ್ಮ್ ಅಗತ್ಯವಿದೆ ಎಂದ ಅವರು, ನಗರದ ರೈಲ್ವೆ ನಿಲ್ದಾಣಕ್ಕೆ ಮೇಲಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಸಾದ್, ನಾಗೇಶ್ವರ ರಾವ್, ಬಸವರಾಜ್ ಅಸ್ಕಿಹಾಳ, ಹೇಮಂತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...