ರಾಯಚೂರು | ಹಂಚಿಕೆಯಾಗಿರುವ ನಿವೇಶನಗಳಿಗೆ ಭೂಮಿ ಮಂಜೂರು ಮಾಡಲು ಡಿಸಿಗೆ ಮನವಿ

Date:

Advertisements

ನಿವೇಶನ ಹಂಚಿಕೆಯಾಗಿ ವರ್ಷಗಳೇ ಗತಿಸಿದರೂ ಮಂಜೂರಾದ ಭೂಮಿಯನ್ನು ಅಭಿವೃದ್ಧಿ ಮಾಡಿ ಹಂಚಿಕೆ ಮಾಡುವುದಕ್ಕೆ ಮೀನಾಮೇಷ ಎಣಿಸಲಾಗುತ್ತಿದೆ ಎಂದು ಆರೋಪಿಸಿ ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ಸಮಿತಿಯು ಜಿಲ್ಲಾಧಿಕಾರಿ ನಿತೀಶ್ ಕೆ ಅವರಿಗೆ ಮನವಿ ಸಲ್ಲಿಸಿತು.

“ಬಾಡಿಗೆದಾರರು, ಬೀದಿಬದಿ ವಾಸಿಸುವವರು, ಅಲೆಮಾರಿ ಜನಾಂಗದವರು ಹಾಗೂ ನಿವೇಶನ ರಹಿತರಿಗೆ ವಾಜಪೇಯಿ ನಗರ ನಿವೇಶನ ಯೋಜನೆಯಡಿಯಲ್ಲಿ 2016-17 ರಲ್ಲಿ ಸರ್ವೆ ನಂ: 581, 726/727 ಮತ್ತು 929/2 ರಲ್ಲಿ ನಿವೇಶನಕ್ಕಾಗಿ ಭೂಮಿ ಮಂಜೂರಾಗಿ ಹಕ್ಕು ಪತ್ರಗಳನ್ನು ಹಂಚಿಕೆ ಮಾಡಲಾಗಿತ್ತು. ಸುಮಾರು 9 ವರ್ಷಗಳು ಕಳೆದರೂ ಇದುವರೆಗೆ ಜಿಲ್ಲಾಡಳಿತ ಮತ್ತು ಮಹನಗರ ಪಾಲಿಕೆ ಮಂಜೂರಾದ ಭೂಮಿ ಅಭಿವೃದ್ಧಿಪಡಿಸಿ ನಿವೇಶನ ಹಂಚಿಕೆ ಮಾಡದೇ ನಿರ್ಲಕ್ಷ್ಯವಹಿಸಿವೆ” ಎಂದು ಆರೋಪಿಸಿದರು.

“ಈ ಹಿಂದೆ ಸ್ಲಂ ನಿವಾಸಿಗಳು ತಿಂಗಳವರೆಗೆ ಪ್ರತಿಭಟನೆ ನಡೆಸಿದ್ದರು. ಧರಣಿ ಸ್ಥಳಕ್ಕೆ ಅಂದಿನ ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ ಅವರು ಆಗಮಿಸಿ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆಯನ್ನು ಕರೆದು ಬಗೆಹರಿಸಲಾಗುವುದೆಂದು ಭರವಸೆ ನೀಡಿದ್ದರು. ಅಂದಿನಿಂದ ಇಂದಿನವರೆಗೂ ಆಶ್ವಾಸನೆ ಮಾತ್ರವೇ ಉಳಿದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ವಾಜಪೇಯಿ ನಿವೇಶನ ಯೋಜನೆಯಡಿಯಲ್ಲಿ ಹಕ್ಕು ಪಡೆದ ನಿವೇಶನ ರಹಿತರಿಗೆ ಹಕ್ಕುಪತ್ರಗಳನ್ನು ಶೀಘ್ರದಲ್ಲಿ ಒದಗಿಸಬೇಕು. ಕೆಲವು ಫಲಾನುಭವಿಗಳಿಗೆ ಇದುವರೆಗೂ ಹಕ್ಕುಪತ್ರ ಕೂಡ ನೀಡಿರುವುದಿಲ್ಲ. ಅವರಿಗೆ ಶೀಘ್ರದಲ್ಲೇ ಹಕ್ಕುಪತ್ರ ನೀಡಬೇಕು. ಜಿಲ್ಲಾಡಳಿತದಿಂದ ಸರ್ವೆ ನಂ:1403 ರಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಗೆ 6 ಎಕರೆ ಭೂಮಿ ಮಂಜೂರಾಗಿ 10 ವರ್ಷಗಳು ಗತಿಸಿದರೂ ಇದುವರೆಗೂ ಭೂಮಿ ಅಭಿವೃದ್ಧಿಪಡಿಸದೇ ಮತ್ತು ಚೆಕ್‌ ಬಂದಿ ಹಾಕದೆ ನಿರ್ಲಕ್ಷ್ಯವಹಿಸಲಾಗಿದೆ. ಕಾರಣ ಶೀಘ್ರದಲ್ಲಿ ಭೂಮಿ ಅಭಿವೃದ್ಧಿಪಡಿಸದೇ ಬಡವರಿಗಾಗಿ ನಿರ್ಗತಿಕರಿಗೆ ಮನೆಗಳ ಕ್ರಿಯಾ ಯೋಜನೆ ರೂಪಿಸಿ (DPR) ಅನುದಾನ ಮಂಜೂರು ಮಾಡಬೇಕು” ಎಂದು ಒತ್ತಾಯಸಿದರು.

“ನಗರದ ಸ್ಲಂ ಜನರು ಶೌಚಾಲಯಗಳ ವ್ಯವಸ್ಥೆ ಇಲ್ಲದೆ ಬಹಿರ್ದೆಸೆಗೆ ಹೋಗುತ್ತಿದ್ದಾರೆ. ಕಾರಣ ರಾಯಚೂರು ಮಹಾನಗರ ಪಾಲಿಕೆಗೆ ಮಂಜೂರಾದ ಅನುದಾನದಲ್ಲಿ 35 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಬರುವ ಸ್ಲಂಗಳಲ್ಲಿ ಹೈಟೆಕ್ ಶೌಚಾಲಯಗಳನ್ನು ನಿರ್ಮಿಸಬೇಕು ಮತ್ತು ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ನೀಗಿಸಲು ಪ್ರತಿ ಸ್ಲಂನಲ್ಲಿ ಬೋರ್‌ವೆಲ್‌ಗಳನ್ನು ಹಾಕಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಕ್ರೀಡೆಗಳಿಂದ ಮಾನಸಿಕ ನೆಮ್ಮದಿ ಸಿಗಲಿದೆ: ಡಿಸಿ ನಿತೀಶ್

ಈ ವೇಳೆ ನೂರ್‌ಜಾನ್, ಬಸವರಾಜ್, ರಾಜಶೇಖರ್, ಅನಿಲ್ ಕುಮಾರ್, ಮಾಧವರೆಡ್ಡಿ, ಮಹೇಶ, ಪವನ್,ಜೆ ರಾಜು, ಜನಾರ್ಧನ್ ಹಳ್ಳಿ ಬೆಂಚಿ ಇನ್ನಿತರರು ಇದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X