ರಾಯಚೂರು | ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ: ಸಚಿವ ಬೋಸರಾಜು

Date:

ನಗರದಲ್ಲಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಬೋಸರಾಜು ಹೇಳಿದರು.

- Advertisement -

ರಾಂಪೂರು ಬಳಿ 10 ಎಕರೆ ವ್ಯಾಪ್ತಿಯಲ್ಲಿರುವ ಕೆರೆಯನ್ನು ಅಭಿವೃದ್ಧಿಪಡಿಸಲು ಮತ್ತು ಗುರುತ್ವಾಕರ್ಷಣೆ (ಗ್ರಾವಿಟಿ) ಮೂಲಕ ಕೆರೆ ತುಂಬಿಸಲು ಕ್ರಮವಹಿಸಲಾಗುವುದು ಎಂದರು. ಸಚಿವರು ನಗರ ಶಾಸಕ ಡಾ. ಶಿವರಾಜ ಪಾಟೀಲ್‌ ಅವರೊಂದಿಗೆ ರಾಂಪೂರು ಕೆರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

“ನಗರದಲ್ಲಿ ಜನಸಂಖ್ಯೆಗನುಗುಣವಾಗಿ ಅಗತ್ಯಕ್ಕೆ ತಕ್ಕಂತೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ರಾಂಪೂರು ಕೆರೆ ಅಭಿವೃದ್ಧಿಯಾಗುವುದರಿಂದ ಮಂತ್ರಾಲಯ ರಸ್ತೆ, ಆಶಾಪುರ ರಸ್ತೆ ಸೇರಿದಂತೆ ಕೆರೆ ವ್ಯಾಪ್ತಿಗೆ ಬರುವ 13 ವಾರ್ಡ್‌ಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರನ್ನು ಸರಬರಾಜು ಮಾಡಬಹುದು. ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕೆರೆ ಅಭಿವೃದ್ಧಿಗಾಗಿ 30 ಕೋಟಿ ರೂ. ಅನುದಾನವಿದ್ದು, ಆರ್‌ಡಿಎದಿಂದ 5 ಕೋಟಿ ರೂಗಳನ್ನು ಕೆರೆ ಅಭಿವೃದ್ಧಿಗೆ ಬಳಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಕೆರೆ ಅಭಿವೃದ್ಧಿಗೆ ಬೇಕಾದ ಸಿದ್ಧತೆಗಳನ್ನು ಕೈಗೊಳ್ಳಬೇಕು” ಎಂದು ಸೂಚಿಸಿದರು.

“ರಾಂಪೂರು ಕೆರೆ ಮಾತ್ರವಲ್ಲದೇ ದೇವಸುಗೂರಿನ ಜಾಕವೆಲ್ ಬಳಿ ಮತ್ತಷ್ಟು ಭೂಮಿ ಸ್ವಾಧೀನಪಡಿಸಿಕೊಂಡು ಕೆರೆ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಚರ್ಚಿಸಲಾಗುವುದು. ಜನರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು. ವಿದ್ಯುತ್ ಇಲ್ಲವೆಂದು ಸರಬರಾಜು ಮಾಡದೇ ಸುಮ್ಮನೇ ಕುಳಿತುಕೊಳ್ಳುವುದಲ್ಲ. ಕುಡಿಯುವ ನೀರಿನ ಪೂರೈಕೆಯಲ್ಲಿ ಬೇಜವಾಬ್ದಾರಿತನ ಸರಿಯಲ್ಲ” ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ?: ರಾಯಚೂರು | ಹಂಚಿಕೆಯಾಗಿರುವ ನಿವೇಶನಗಳಿಗೆ ಭೂಮಿ ಮಂಜೂರು ಮಾಡಲು ಡಿಸಿಗೆ ಮನವಿ

“ವಿದ್ಯುತ್‌ ಪೂರೈಕೆಯಿದ್ದರೂ ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸಲಾಗುತ್ತಿಲ್ಲ ಎನ್ನುವ ದೂರುಗಳು ಸ್ವೀಕಾರವಾಗಿರುವ ಹಿನ್ನೆಲೆ ಅಧಿಕಾರಿಗಳು ಬೇಜವಾಬ್ದಾರಿಯನ್ನು ಬದಿಗೊತ್ತಿ ಜನರಿಗೆ ನೀರು ಪೂರೈಸಬೇಕು. ನಗರದಲ್ಲಿ 18 ನೀರಿನ ಟ್ಯಾಂಕ್ ನಿರ್ಮಿಸಿ ನೀರಿಲ್ಲದೇ ಸುಮ್ಮನೇ ಬಿಡಲಾಗಿದೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯತನವೇ ಕಾರಣ. ಮೊದಲು ಇದನ್ನು ಸರಿಪಡಿಸಿ” ಎಂದು ತಾಕೀತು ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...