ರಾಯಚೂರು | ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ವೇತನ ನಿಗದಿಗೆ ಆಗ್ರಹ; ಜ.7ರಿಂದ ಅನಿರ್ದಿಷ್ಟಾವಧಿ ಧರಣಿ

Date:

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ವೇತನ ನಿಗದಿ ಪಡಿಸುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಜನವರಿ 7ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದೇವೆ ಎಂದು ಸಂಘದ ರಾಜ್ಯಾಧ್ಯಕ್ಷ ಸೋಮಶೇಖರ ಯಾದಗಿರಿ ಹೇಳಿದರು.

- Advertisement -

ರಾಯಚೂರು ನಗರದ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಕಳೆದೆ ಫೆಬ್ರವರಿ 13 ಮತ್ತು 14ರಂದು ಪ್ರತಿಭಟನೆ ನಡೆಸಿದಾಗ ಧರಣಿ ಸ್ಥಳಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಶೀಘ್ರದಲ್ಲಿ ಸಭೆ ಕರೆದು ನಿರ್ಧರಿಸುವುದಾಗಿ ಭರವಸೆ ನೀಡಿದ್ದರು. ಇದೀಗ ಒಂದು ವರ್ಷ ಕಳೆದಿದ್ದು, ಹಲವು ಸುತ್ತಿನ ಸಭೆಗಳಾದರೂ ನಿರ್ದಿಷ್ಟ ವೇತನ ನೀಡುವ ಭರವಸೆಗೆ ಖಚಿತವಾಗಿ ಉತ್ತರ ನೀಡಿಲ್ಲ. ಹಾಗಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಲಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಎಲ್ಲ ಶಾಸಕರು, ಸಚಿವರಿಗೆ ಪ್ರತ್ಯೇಕ ಮನವಿ ನೀಡಿ ಅಧಿವೇಶನದಲ್ಲಿ ಚರ್ಚಿಸುವಂತೆ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ ನಿಗದಿಪಡಿಸುತ್ತಿಲ್ಲ. ಬದಲಾಗಿ ಮೊಬೈಲ್‌ಗಳನ್ನು ಆಶಾ ಕಾರ್ಯಕರ್ತೆಯರೇ ಖರೀದಿ ಮಾಡಿ ಆರೋಗ್ಯ ಸೇವೆಗಳನ್ನು ಒದಗಿಸಬೇಕೆಂದು ಹೇಳುತ್ತಿದೆ. ಸರ್ಕಾರ ದಿವಾಳಿಯಾಗಿದೆಯೋ, ಏನೋ ಗೊತ್ತಿಲ್ಲ. ಹತ್ತಾರು ಕೆಲಸಗಳನ್ನು ಆಶಾ ಕಾರ್ಯಕರ್ತೆಯರಿಂದಲೇ ಪಡೆಯುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನಿಷ್ಟ ವೇತನವನ್ನೂ ನೀಡುತ್ತಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬಾಬಾ ಸಾಹೇಬ್ ಡಾ. ಬಿ‌ ಆರ್ ಅಂಬೇಡ್ಕರ್ ಸೇನೆ ಸಂಘಟನೆಗೆ ಜಿಲ್ಲಾಧ್ಯಕ್ಷರ ನೇಮಕ

“ಪಶ್ಚಿಮ ಬಂಗಾಳ ಮಾದರಿಯಲ್ಲಿ ₹5 ಲಕ್ಷ ಸೇವಾ ನಿವೃತ್ತಿ ಯೋಜನೆ ಜಾರಿಗೊಳಿಸಬೇಕಿದೆ. ರಾಜ್ಯದಲ್ಲಿ ಸೇವಾ ನಿವೃತ್ತಿಗೊಂಡ ಆಶಾ ಕಾರ್ಯಕರ್ತೆಯರಿಗೆ ₹20,000 ಮಾತ್ರ ನೀಡಲಾಗುತ್ತಿದೆ. ಉದ್ಯೋಗ ಭದ್ರತೆಯಿಲ್ಲದೇ ಅತಿಹೆಚ್ಚು ಕೆಲಸ ಮಾಡಿ ಕಡಿಮೆ ವೇತನ ಪಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಆಶಾ ಕಾರ್ಯಕರ್ತೆಯರು ಬೆಂಗಳೂರಿಗೆ ಆಗಮಿಸಲಿದ್ದಾರೆ” ಎಂದರು.

ಈ ಸಂದರ್ಭದಲ್ಲಿ ಎನ್ ಎಸ್ ವೀರೇಶ, ಮಹೇಶ ಚಿಕಲಪರ್ವಿ, ಈರಮ್ಮ, ರಾಧಾ, ಶ್ರೀದೇವಿ, ಮಲ್ಲಮ್ಮ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...