ರಾಯಚೂರು | ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಪ್ರಕರಣ; ಜೆಡಿಎಸ್ ಶಾಸಕಿ ಪುತ್ರನಿಗೆ ಬಂಧನದ ವಾರೆಂಟ್

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ ಅವರ ಪುತ್ರ ಸಂತೋಷ ಗೋಪಾಲಕೃಷ್ಣ ನಾಯಕ, ವಿಚಾರಣೆಗೆ ಕೋರ್ಟ್ ಹಾಜರಾಗದ ಹಿನ್ನೆಲೆಯಲ್ಲಿ ಬಂಧನಕ್ಕೆ ಜಿಲ್ಲಾ ಸತ್ರ ನ್ಯಾಯಾಲಯ ಇತ್ತೀಚೆಗೆ ವಾರೆಂಟ್ ಜಾರಿ ಮಾಡಿದೆ.

- Advertisement -

ಕಳೆದ ವರ್ಷ ಕೃಷ್ಣಾ ನದಿಯಿಂದ ಅಕ್ರಮವಾಗಿ ಮರಳು ಸಾಗಣೆ ಮಾಡುವ ವೇಳೆ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್ ಹನುಮಂತ ಎನ್ನುವವರು ಟ್ರ್ಯಾಕ್ಟರ್ ತಡೆದಿದ್ದರು. ಈ ಸಂಬಂಧ ಮಾತುಕತೆಗೆಂದು ಪ್ರವಾಸಿ ಮಂದಿರಕ್ಕೆ ಕರೆಸಿ ಶಾಸಕಿಯ ಪುತ್ರ ಸಂತೋಷ, ಶಾಸಕರ ಆಪ್ತ ಸಹಾಯಕರಾದ ರಫಿ, ಇಲಿಯಾಜ್ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಜಾತಿ ನಿಂದನೆ ಮಾಡಲಾಗಿದೆಯೆಂದು ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರಕರಣ ಕುರಿತು ಬಹುತೇಕರು ಜಾಮೀನು ಪಡೆದಿದ್ದರು. ಜಿಲ್ಲಾ ಕೋರ್ಟ್‌ನಲ್ಲಿ ವ್ಯಾಜ್ಯ ನಡೆಯುತ್ತಿದ್ದು, ವಿಚಾರಣೆಗೆ ಸಂತೋಷ ಗೈರಾದ ಹಿನ್ನೆಲೆಯಲ್ಲಿ ಬಂಧನ ಮಾಡಿ ವಿಚಾರಣೆಗೆ ಹಾಜರುಪಡಿಸುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ.

ಪ್ರಕರಣ ಸಂಬಂಧ ಸಂತೋಷನ ವಿರುದ್ಧ ಸೆಕ್ಷನ್ 143, 147, 323, 332, 353, 342, 504, 1490 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಮುಂದಿನ ವಿಚಾರಣೆ ನಡೆಯುವ ಜು.5ರಂದು ಆರೋಪಿಯನ್ನು ಹಾಜರುಪಡಿಸಲು ಸೂಚಿಸಿದೆ. ಕೋರ್ಟ್ ಬಂಧನ ಆದೇಶ ನೀಡಿದರೂ ಪೊಲೀಸರು ಸಂತೋಷನನ್ನು ಬಂಧಿಸಲು ಹಿಂದೇಟು ಹಾಕಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಈ ಸುದ್ದಿ ಓದಿದ್ದೀರಾ? ಬಂಟ್ವಾಳ | ಪಾಣೆಮಂಗಳೂರು ಹಳೆ ಸೇತುವೆ ಮೇಲೆ ಸಂಚಾರ ನಿಷೇಧ: ಆದೇಶ ಹೊರಡಿಸಿದ ತಹಶೀಲ್ದಾರ್

ಕೋರ್ಟ್‌ನಿಂದ ವಾರೆಂಟ್ ಜಾರಿಯಾದರೂ ಕ್ಯಾರೆ ಎನ್ನದ ಆರೋಪಿ, ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ‌ಯನ್ನು ಭೇಟಿಯಾಗಿ ಅವರೊಂದಿಗೆ ಫೋಟೋ‌ ಕೊಡುತ್ತ ಕಾಲ ಹರಣ ಮಾಡುತ್ತಿದ್ದಾರೆ.

ಪ್ರವಾಸಿ ಮಂದಿರದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಸಂತೋಷ, ಗೋಪಾಲಕೃಷ್ಣ ಸೇರಿ ಕೆಲವರ ವಿರುದ್ಧ ಕೇಸ್ ದಾಖಲಾಗಿತ್ತು. ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸಂತೋಷ ಬಂಧನ ವಾರೆಂಟ್ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆಂದು ಲಿಂಗಸೂಗೂರು ಡಿವೈಎಸ್‌ಪಿ ದತ್ತಾತ್ರೇಯ ಕರ್ನಾಡ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...