ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಎಟಿಎಂ ಕಳ್ಳತನಕ್ಕೆ ಯತ್ನಸಿದ ಆರೋಪಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ನಾಗರಾಜ್ ಎಂದು ಗುರುತಿಸಲಾಗಿದೆ. ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಎಟಿಎಂನೊಳಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿತ್ತು.
ಈ ಸುದ್ದಿ ಓದಿದ್ದೀರಾ? ಹಾಸನ | ಮದುವೆಗೆ ನಿರಾಕರಿಸಿದ ಪ್ರೇಯಸಿ; ವಿಷಸೇವಿಸಿ ಯುವಕ ಆತ್ಮಹತ್ಯೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಪುಟ್ಟಮಾದಯ್ಯ ಅವರು ಸ್ಥಳಕ್ಕೆ ಆಗಮಿಸಿ ವೀಕ್ಷಣೆ ನಡೆಸಿದ್ದು, ಶೀಘ್ರದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಕಾರಣರಾದ ಪೊಲೀಸರ ತಂಡಕ್ಕೆ ಬಹುಮಾನ ಘೋಷಿಸಿದ್ದಾರೆ.
