ರಾಯಚೂರು | ತೆಲಂಗಾಣದ ಲಿಂಗತ್ವ ಅಲ್ಪಸಂಖ್ಯಾತರಿಂದ ದೌರ್ಜನ್ಯ; ಕ್ರಮಕ್ಕೆ ಆಗ್ರಹ

Date:

ತೆಲಂಗಾಣದಿಂದ ಬರುವ ಲಿಂಗತ್ವ ಅಲ್ಪಸಂಖ್ಯಾತರು ಸ್ಥಳೀಯರ ಮೇಲೆ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕುತ್ತಿರುವುದನ್ನು ತಡೆಯಲು ಸರ್ಕಾರ ಕ್ರಮ ವಹಿಸುವಂತೆ ಆಪ್ತಮಿತ್ರ ನಗರ ಮತ್ತು ಗ್ರಾಮೀಣ ಅಭಿವೃದ್ದಿ ಸೇವಾ ಸಂಸ್ಥೆ ಅಧ್ಯಕ್ಷೆ ಪ್ರಗತಿ ಆಗ್ರಹಿಸಿದರು.

- Advertisement -

ರಾಯಚೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸ್ಥಳೀಯ ಹುಲಿಗೆಮ್ಮ ಎಂಬುವವರು ತೆಲಂಗಾಣದ ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ಸೇರಿಕೊಂಡು ಗುಂಪು ರಚಿಸಿಕೊಂಡಿದ್ದಾರೆ. ಒಮ್ಮೆ 40-50 ಮಂದಿ ಬಂದು ಜಿಲ್ಲೆಯಲ್ಲಿ ಭಿಕ್ಷಾಟನೆ ಮಾಡುತ್ತಾರೆ. ಸ್ಥಳೀಯರಿಗೆ ಕಿರುಕುಳ ನೀಡಿ, ದೌರ್ಜನ್ಯ ಎಸಗಿ, ಕಲೆಕ್ಷನ್‌ಗೆ ಬರದಂತೆ ತಡೆಯುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಮೂರು ದಿನಗಳಿಂದ ಪೋನ್ ಕರೆ ಮಾಡಿ ತೆಲಂಗಾಣ ಗುಂಪಿಗೆ ಸೇರುವಂತೆ ಒತ್ತಾಯಿಸುತ್ತಿದ್ದಾರೆ. ಪ್ರಶ್ನಿಸಿದರೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಡಿವೈಎಸ್‌ಪಿಗೆ ದೂರು ನೀಡಲಾಗಿದೆ” ಎಂದು ತಿಳಿಸಿದರು.

“ಪೊಲೀಸರು ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಸಿಂಧನೂರು, ಅನಂತಪುರ ಸೇರಿದಂತೆ ಅನೇಕ ಕಡೆ ಗಲಾಟೆ ಮಾಡಿಕೊಂಡಿದ್ದು, ಭಿಕ್ಷಾಟನೆ ಮಾಡಿ ಬದುಕುತ್ತಿರುವ ಸ್ಥಳೀಯರಿಗೆ ಭಯದ ವಾತಾವರಣ ನಿರ್ಮಾಣವಾಗಿದೆ. ಸಮಾಜದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಉದ್ಯೋಗ ಸೇರಿದಂತೆ ಇತರೆ ಕೆಲಸಗಳನ್ನು ನೀಡುತ್ತಿಲ್ಲ. ಕುಟುಂಬದಿಂದ ದೂರವಾಗಿ, ಸಮಾಜದಿಂದ ತಿರಸ್ಕಾರಕ್ಕೆ ಒಳಗಾಗಿ ಬದುಕುತ್ತಿರುವ ಲಿಂಗತ್ವ ಅಲ್ಪಸಂಖ್ಯಾತರು ಕೆಲವರಿಂದ ಇಲ್ಲದ ಆರೋಪಕ್ಕೆ ತುತ್ತಾಗುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ರಾಯಲಸೀಮಾ ಸೇರಿ ಆಂಧ್ರಪ್ರದೇಶಕ್ಕೆ ಹೋಗಿ ನಮ್ಮವರು ಭಿಕ್ಷಾಟನೆ ಮಾಡಿದರೂ ಬೆದರಿಸುತ್ತಿದ್ದಾರೆ. ಅಲ್ಲಿಯವರು ಇಲ್ಲಿ ಬಂದು ನಮ್ಮವರನ್ನೇ ಹೆದರಿಸುತ್ತಿದ್ದಾರೆ. ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಣಿಪುರ ಮಹಿಳೆಯರ ಮೇಲೆ ದೌರ್ಜನ್ಯ; ವಿದ್ಯಾರ್ಥಿಗಳ ಖಂಡನೆ

ಲಕ್ಷ್ಮಣ ಮಾತನಾಡಿ, ಮಂಗಳಮುಖಿಯರಿಗೆ ಬಿಕ್ಷಾಟನೆ ಬಿಟ್ಟು ಬೇರೆ ಯಾವ ಕೆಲಸಗಳು ನೀಡುತ್ತಿಲ್ಲ. ಸಮಾಜ, ಕುಟುಂಬದಿಂದ ತಿರಸ್ಕಾರಕ್ಕೆ ಒಳಗಾಗಿದ್ದಾರೆ. ಅವರನ್ನು ಭಿಕ್ಷೆ ಬೇಡಿ ಬದುಕಲೂ ಸಹ ಬಿಡದೇ ಇರುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಕ್ಷಣೆ ನೀಡಬೇಕು” ಎಂದರು.

ಈ ಸಂದರ್ಭದಲ್ಲಿ ಕಾಜಲ್, ಶಿರಿಷಾ, ಸೀಮಾ, ವಂದನಾ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...