ರಾಯಚೂರು | ಮಾಜಿ ಶಾಸಕನ ಬೆಂಬಲಿಗರಿಂದ ದೌರ್ಜನ್ಯ; ದಯಾಮರಣ ಕೋರಿ ಧರಣಿ ಕುಳಿತ ಕುಟುಂಬ

Date:

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಬೆಂಬಲಿಗರಿಂದ ಜಮೀನು‌ ಒತ್ತುವರಿ ಮಾಡಿ ನಿತ್ಯ ದೌರ್ಜನ್ಯ ಎಸಗಲಾಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಪೊಲೀಸರು ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೇಸತ್ತು ದೌರ್ಜನ್ಯಕ್ಕೊಳಗಾದ ಕುಟುಂಬ ದಯಾಮರಣ ಕೋರಿ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಮಧ್ಯರಾತ್ರಿ ಧರಣಿ ನಡೆಸಿತು.

ಜಿಲ್ಲೆಯ ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮದ ಹನುಮಂತ ಎಂಬುವವರ ಕುಟುಂಬ ದಯಾಮರಣ ಕೋರಿ ಧರಣಿ ಕುಳಿತಿದೆ. ಇವರಿಗೆ ಸೇರಿದ ನಿವೇಶನದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರತಾಪಗೌಡ ಬೆಂಬಲಿಗ ದುರ್ಗಾಪ್ರಸಾದ್‌ ಎಂಬಾತ ದಬ್ಬಾಳಿಕೆ ಮಾಡಿ ನಿವೇಶನದಲ್ಲಿ ಕಸ ಹಾಕಿ ಒತ್ತುವರಿ ಮಾಡಿದ್ದಾನೆ. ಇದನ್ನು ತೆರವುಗೊಳಿಸಲು ಮನವಿ ಮಾಡಿದರೆ ಬೆದರಿಕೆ ಹಾಕುತ್ತಿದ್ದಾನೆ. ಈ ಕುರಿತು ಕವಿತಾಳ ಪೊಲೀಸ್ ಠಾಣೆಗೆ ದೂರು ನೀಡಿದರೂ ರಾಜಕೀಯ ಪ್ರೇರಿತರಾಗಿ ಅಧಿಕಾರಿಗಳು ರಕ್ಷಣೆ ನೀಡುತ್ತಿಲ್ಲ ಎಂದು ಕುಟುಂಬಸ್ಥರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡರು.

ಆರೋಪಿಗಳ ದೌರ್ಜನ್ಯ, ಜೀವ ಬೆದರಿಕೆಯಿಂದ‌ ಬೇಸತ್ತಿದ್ದು, ರಕ್ಷಣೆ ನೀಡಿ ನ್ಯಾಯ ಒದಗಿಸಬೇಕು ಇಲ್ಲದಿದ್ದರೆ ನಮಗೆ ಸಾಯಲು ಅವಕಾಶ ನೀಡಬೇಕು ಎಂದು ಹನುಮಂತ ತೋರಣದಿನ್ನಿ ಪತ್ನಿ ಮತ್ತು ಮಕ್ಕಳೊಂದಿಗೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಬಳಿಕ ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿ ನೊಂದ ಕುಟುಂಬಸ್ಥರ ಮನ ಒಲಿಸಲು ಪ್ರಯತ್ನಿಸಿದರು. ಅದರೂ ರಾತ್ರಿಯಿಡೀ ಧರಣಿ ನಡೆಸಲಾಯಿತು. ‌ಜಿಲ್ಲಾಧಿಕಾರಿ ಅವರ ಮನವಿ ಆಲಿಸಿ ಸಮಸ್ಯೆ ಪರಿಹಾರಕ್ಕೆ ಆಶ್ವಾಸನೆ ನೀಡಿದ್ದಾರೆ ಎಂದು ಹೇಳಲಾಗಿದೆ.

- Advertisement -

ಈ ಸುದ್ದಿ ಓದಿದ್ದೀರಾ?: ರಾಯಚೂರು | ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಎಐಸಿಸಿಟಿಯು ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಸ್ಕಿ ಕ್ಷೇತ್ರ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾಗಿದ್ದು, ಪ್ರಸ್ತುತ ಕಾಂಗ್ರೆಸ್‌ನ ಬಸವನಗೌಡ ತುರ್ವಿಹಾಳ ಅವರು ಶಾಸಕರಾಗಿದ್ದಾರೆ. ಅವರು ಪರಿಶಿಷ್ಟರ ಸಮಸ್ಯೆ ಆಲಿಸುತ್ತಿಲ್ಲ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...