ರಾಯಚೂರು | ನಕಲಿ ನೋಟು ಚಲಾವಣೆಗೆ ಯತ್ನ; ಇಬ್ಬರ ಬಂಧನ

Date:

ಬಿರಿಯಾನಿ ಸೇವಿಸಿ 500 ರೂ ಮುಖ ಬೆಲೆಯ ನಕಲಿ ನೋಟು ಚಲಾವಣೆ ಮಾಡಲು ಮುಂದಾದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರಾಯಚೂರು ನಗರದ ಮಾರುಕಟ್ಟೆ ಯಾರ್ಡ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿಗಳಾದ ಮಂಜುನಾಥ ಹಾಗೂ ರಮೇಶ ಎಂಬುವವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

- Advertisement -

ನಗರದ ಬಿರಿಯಾನಿ ಹೋಟೆಲ್‍ನಲ್ಲಿ ಚಿಕನ್ ಬಿರಿಯಾನಿ ತಿಂದು 500 ರೂ ಬಿಲ್ ಪಾವತಿಸಿದ್ದರು. ಸ್ವಲ್ಪ ಹೊತ್ತಿನ ಬಳಿಕ ಅನುಮಾನ ಬಂದು ಹೋಟೆಲ್ ಮಾಲಿಕ ನೋಟು ಚೆಕ್ ಮಾಡಿದಾಗ ಅಸಲಿಯತ್ತು ಬಯಲಾಗಿದೆ. ನೋಟಿನಲ್ಲಿ ʼಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾʼ ಅಂತ ನಮೂದಿಸಿದ್ದ ಮನೋರಂಜನೆಗಾಗಿ ಬಳಸುವ ನಕಲಿ ನೋಟನ್ನ ಆರೋಪಿಗಳು ಬಿಲ್ ಪಾವತಿಗೆ ಬಳಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
1000094409

ಘಟನೆ ಸಂಬಂಧ ಹೋಟೆಲ್ ಮಾಲಿಕ ದೂರು ನೀಡಿದ್ದು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಖೋಟಾ ನೋಟು ಚಲಾವಣೆಯ ಪ್ರಕರಣ ಈಚೆಗಷ್ಟೇ ದಾಖಲಾಗಿದ್ದು, ಬೆನ್ನಲ್ಲೇ ಮತ್ತೊಂದು ಪ್ರಕರಣ ಬಯಲಾಗಿರುವುದು ಪೊಲೀಸರಿಗೆ ನಿದ್ದೆಗೆಡಿಸಿದೆ.

ಇದನ್ನೂ ಓದಿ: ರಾಯಚೂರು | ಪಿಡಿಓ, ಅಧಿಕಾರ ದುರ್ಬಳಕೆ ಆರೋಪ: ಕೂಲಿ ಕಾರ್ಮಿಕರು ಧರಣಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...