ರಾಯಚೂರು | ಆ.29-30: ಧ್ಯಾನ್‌ಚಂದ್ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ

Date:

ಹಾಕಿ ಮಾಂತ್ರಿಕ ಧ್ಯಾನ್‌ಚಂದ್ ಅವರ 119ನೇ ಹುಟ್ಟುಹಬ್ಬ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆ.29 ಮತ್ತು 30 ರಂದು ಹಾಕಿ ರಾಯಚೂರು(ಕರ್ನಾಟಕ) ಸಂಸ್ಥೆಯಿಂದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಜಯಪ್ರಕಾಶ್ ರೆಡ್ಡಿ ಹೇಳಿದರು.

- Advertisement -

ರಾಯಚೂರಿನ ಪ್ರೆಸ್‌ ಕ್ಲಬ್‌ನಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಿಂದ ಪುರುಷರು ಮತ್ತು ಮಹಿಳೆಯರ 24 ತಂಡಗಳು ಪಂದ್ಯಾವಳಿಯಲ್ಲಿ ಭಾಗಿಯಾಗಲಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

12 ಪುರುಷ ಹಾಗೂ 8 ಮಹಿಳಾ ತಂಡಗಳು ಭಾಗವಹಿಸಲಿವೆ. ಹಾಕಿ ಪಂದ್ಯಕ್ಕೆ ಸಮರ್ಪಕ ಪ್ರೋತ್ಸಾಹ ದೊರೆಯುತ್ತಿಲ್ಲ. ಹಾಕಿ ಕ್ರೀಡಾಪಟುಗಳಿಗೆ ವಸತಿ ನಿಲಯವಿದ್ದು, ಕ್ರೀಡಾಂಗಣವೇ ಇಲ್ಲ. ಮಕ್ಕಳು ಹಾಕಿ ಆಟಗಳಲ್ಲಿ ಭಾಗವಹಿಸುತ್ತಿಲ್ಲ. ಜಿಲ್ಲೆಯಲ್ಲಿ ಕ್ರೀಡೆಗೆ ಪ್ರೋತ್ಸಾಹಿಸುವಂತಹ ಕೆಲಸ ಆಗಬೇಕೆಂದು ತಿಳಿಸಿದರು.

ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡು ದಿನಗಳ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಪ್ರತಿ ಪಂದ್ಯದಲ್ಲಿ 5 ಜನ ಕ್ರೀಡಾಪಟುಗಳು ಭಾಗಿ 20 ನಿಮಿಷ ಅವಧಿಯಲ್ಲಿ ಪ್ರದರ್ಶನ ನೀಡಲಿದ್ದಾರೆ.

ವಿಜೇತ ತಂಡಗಳಿಗೆ ಎನ್.ಈಶ್ವರ ಪ್ರಸಾದ ಸ್ಮರಣಾರ್ಥ ಪ್ರಥಮ ತಂಡಕ್ಕೆ 10 ಸಾವಿರ ರೂ, ದ್ವಿತೀಯ ಸ್ಥಾನಕ್ಕೆ 5 ಸಾವಿರ ರೂ ನಗದ ಬಹುಮಾನ ಹಾಗೂ ಮಲ್ಲಿಕಾರ್ಜುನ ಸ್ಮರಣಾರ್ಥವೂ ಹೆಸರಲ್ಲಿ ಬಹುಮಾನಗಳನ್ನು ವಿತರಿಸಲಾಗುತ್ತದೆ. ಕ್ರೀಡಾಕೂಟವನ್ನು ಶಾಸಕ ಡಾ.ಶಿವರಾಜ ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಾರ್ಕಳ ಯುವತಿಯ ಅತ್ಯಾಚಾರ | 3ನೇ ಆರೋಪಿ ಬಿಜೆಪಿ ಕಾರ್ಯಕರ್ತ : ಕಾಂಗ್ರೆಸ್‌ನಿಂದ ಫೋಟೋ ಬಿಡುಗಡೆ

ಮುಖ್ಯ ಅತಿಥಿಗಳಾಗಿ ಆರ್‌ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ರವಿ ಪಾಟೀಲ್ ಫೌಂಡೇಷನ್ ಅಧ್ಯಕ್ಷ ರವಿ ಪಾಟೀಲ್ , ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್, ಸಂಸದ ಜಿ.ಕುಮಾರನಾಯಕ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕ್ಲಬ್ ಕಾರ್ಯದರ್ಶಿ ಹನುಮಂತಪ್ಪ ನಾಯಕ, ಎನ್.ಶಶಿಕಲಾ, ಈಶ್ವರ್ ಪ್ರಸಾದ, ರಂಗನಾಥ ನಾಯಕ, ಅರ್ಜುನ ನಾಯಕ, ಮಹಮ್ಮದ್ ಇಸ್ಮಾಯಿಲ್, ಮೃತ್ಯುಂಜಯ, ಭಗತ್‌ಸಿಂಗ್ ಉಪಸ್ಥಿತರಿದ್ದರು.

mdrafi
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...