ರಾಯಚೂರು ಜಿಲ್ಲೆಯ ಲಿಂಗಸುಗೂರು ಪುರಸಭೆಯ ಅಧ್ಯಕ್ಷರಾಗಿ ಬಾಬುರೆಡ್ಡಿ ಮೂನ್ನುರು ಹಾಗೂ ಶರಣಮ್ಮ ಅಮರಪ್ಪ ಇವರು ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ಮಹಿಳೆಗೆ ಮೀಸಲಾತಿ ಪ್ರಕಟಿಸಲಾಗಿತ್ತು.
ಕಾಂಗ್ರೆಸ್ ಪಕ್ಷದ ವಾರ್ಡ್ ನಂಬರ್ 17ರ ಸದಸ್ಯ ಬಾಬುರೆಡ್ಡಿ ಮುನ್ನೂರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವಾರ್ಡ್ ನಂಬರ್ 19ರ ಶರಣಮ್ಮ ಗಂಡ ಅಮರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯಾದ ತಹಶೀಲ್ದಾರ್ ಶಂಶಾಲಂ ಅವರು ತಿಳಿಸಿದರು.
ಪುರಸಭೆ ಮುಂಭಾಗ ಹಾಗೂ ಗಡಿಯಾರ ಚೌಕ್ ವೃತ್ತದಲ್ಲಿ ಸಂಸದರಾದ ಜಿ ಕುಮಾರ್ ನಾಯಕ್ ಹಾಗೂ ಮಾಜಿ ಶಾಸಕ ಡಿಎಸ್ ಹುಲಗೇರಿ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಲಿಂಗಸುಗೂರು ಪುರಸಭೆಯ ಕಾಂಗ್ರೆಸ್ ನಾಲ್ವರು ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡದೆ ಕೆ ಆರ್ ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಪಕ್ಷಾಂತರ ಕಾಯ್ದೆಯಡಿಯಲ್ಲಿ ಜಿಲ್ಲಾಧಿಕಾರಿಗೆ ದೂರು ನೀಡಲಾಗಿತ್ತು.ಇದರಿಂದ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಮುಂದೂಡಲಾಗಿತ್ತು.
ಇದನ್ನು ಓದಿದ್ದೀರಾ? ರಾಯಚೂರು | ಕೆರೆಗಳಿಗೆ ರಾಸಾಯನಿಕ ಮಿಶ್ರಣ ಶಂಕೆ; ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ್, ಸಂಜೀವ್ ಕುಮಾರ್ ಕಂದಗಲ್, ವಿನಯ್ ಕುಮಾರ್ ಗಣಾಚಾರಿ, ಎಸ್ಆರ್ ರಸುಲ್ ದಾವುದ್ ಮುದಗಲ್ , ಶಿವಶಂಕರಗೌಡ ಉಪ್ಪಾರ್ ಸೇರಿ ನೂರಾರು ಕಾರ್ಯಕರ್ತರು ಇದ್ದರು.
