ರಾಯಚೂರು | ತೆಲಂಗಾಣಕ್ಕೆ ಭತ್ತ ಸಾಗಾಟ ನಿರ್ಬಂಧ; ರಾಜ್ಯ ರೈತ ಸಂಘ ಖಂಡನೆ

Date:

ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಾಟ ನಿರ್ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಯಚೂರು ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ನಿತಿಶ್ ಕೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ ಅವರಿಗೆ ಮನವಿ ಸಲ್ಲಿಸಿದರು.

- Advertisement -

ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಿಂದ ಭತ್ತದ ವ್ಯಾಪಾರಿಗಳು ತೆಲಂಗಾಣ ರಾಜ್ಯಕ್ಕೆ ಹೋಗುವಾಗ ಶಕ್ತಿನಗರ ಚೆಕ್‌ಪೋಸ್ಟ್ ನಲ್ಲಿ ಹಾಗೂ ಯಾದಗಿರಿ ಜಿಲ್ಲೆಯ ಜಲಾಲ್‌ಪೂರ ಚೆಕ್ ಪೋಸ್ಟ್ ನಲ್ಲಿ ಭತ್ತ ಲಾರಿಗಳನ್ನು ತಡೆದು ನಿಲ್ಲಿಸುತ್ತಿದ್ದಾರೆ. ಈಗಾಗಲೇ ಎರಡು ದಿನಗಳ ಹಿಂದೆ ಸುಮಾರು 5ರಿಂದ 6 ಲಾರಿಗಳನ್ನು ನಿಲ್ಲಿಸಿ ಕೃಷ್ಣ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ ಹಿನ್ನೆಲೆಯಲ್ಲಿ ರೈತರಿಗೆ ಭತ್ತದ ಸಾಗಾಣಿಕೆಗೆ ಸಮಸ್ಯೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...
IMG 20241216 WA0009

ಪ್ರತಿದಿನ ತೆಲಂಗಾಣ ರಾಜ್ಯದಿಂದ ರಾಯಚೂರು ಮಾರುಕಟ್ಟೆಗೆ 30ರಿಂದ 40 ಸಾವಿರ ಭತ್ತವೂ ಯಾವುದೇ ನಿರ್ಬಂಧವಿಲ್ಲ ಆವಕವಾಗುತ್ತಿವೆ. ಇದರಿಂದ ಸ್ಥಳೀಯ ಮಾರುಕಟ್ಟೆಯ ಭತ್ತದ ದರ ಕಡಿಮೆಯಾಗಿ ರೈತರಿಗೆ ನಷ್ಟವಾಗುತ್ತಿದೆ ಎಂದು ಸಮಸ್ಯೆ ವಿವರಿಸಿದರು.ಕಾರಣ ತೆಲಂಗಾಣ ರಾಜ್ಯಕ್ಕೆ ಭತ್ತ ಸಾಗಿಸಲು ಹಾಕಿರುವ ನಿರ್ಬಂಧನೆಯನ್ನು ತೆರವುಗೊಳಿಸಬೇಕು, ಈ ಬಗ್ಗೆ ವಿಳಂಬ ನೀತಿ ಅನುಸರಿಸಿದರೆ, ಕೃಷ್ಣ ಸೇತುವೆ ಮೇಲೆ ರಸ್ತೆ ತಡೆ ಚಳುವಳಿ ನಡೆಸಲಾಗುವುದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮುಂದುವರೆದ ಬಾಣಂತಿಯರ ಸಾವು; ಕಲಬುರಗಿಯಲ್ಲಿ ಮತ್ತೊಬ್ಬ ಬಾಣಂತಿ ಬಲಿ

ಸಂಘದ ರಾಜ್ಯ ಗೌರಾಧ್ಯಕ್ಷ ಚಾಮರಸ ಮಾಲಿಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಪ್ರಭಾಕರ ಪಾಟೀಲ, ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ, ಪದಾಧಿಕಾರಿಗಳಾದ ಮಲ್ಲಣ್ಣ ಗೌಡೂರು, ಮಲ್ಲಿಕಾರ್ಜುನರಾವ್, ವ್ಯಾಪಾರಿ ವೆಂಕಟೇಶ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...