ರಾಯಚೂರು | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ರಾಯಚೂರು ಬಂದ್ ಯಶಸ್ವಿ

Date:

ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮಾದಿಗ ಸಮುದಾಯಗಳ ಒಕ್ಕೂಟದಿಂದ ಬುಧವಾರ ರಾಯಚೂರು ಬಂದ್‌ಗೆ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

- Advertisement -

ದಲಿತ ಪರ ಸಂಘಟನೆಗಳು ರಾಯಚೂರು ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಜಿಲ್ಲೆಯ ಮಾನ್ವಿ, ದೇವದುರ್ಗ, ಸಿಂಧನೂರು, ಲಿಂಗಸಗೂರು, ಸಿರವಾರ ಎಲ್ಲಾ ತಾಲ್ಲೂಕು ಸೇರಿದಂತೆ ರಾಯಚೂರಿನಲ್ಲಿ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಒಳ ಮೀಸಲಾತಿ ಹೋರಾಟ ಸಮಿತಿಯ ಮುಖಂಡ ಅಂಬಣ್ಣ ಆರೋಲಿಕರ್ ಮಾತನಾಡಿ, ʼಸುಪ್ರೀಂ ಕೋರ್ಟ್ ಒಳಮೀಸಲಾತಿ ಕುರಿತು ತೀರ್ಪು ನೀಡಿದೆ. ಆಯಾ ರಾಜ್ಯಗಳಿಗೆ ಜನಸಂಖ್ಯೆ ಅನುಗುಣವಾಗಿ ಜಾರಿಗೆ ಸೂಚಿಸಿದೆ, ಆದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2 ತಿಂಗಳು ಕಳೆದರೂ ಅದನ್ನು ಅನುಷ್ಠಾನಕ್ಕೆ ತರುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಸರಕಾರ ಅಧಿಕಾರಕ್ಕೆ ಬರುವ ಮುನ್ನ ಒಳಮೀಸಲಾತಿ ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಮುಖಂಡ ಎಂ.ವಿರೂಪಾಕ್ಷಿ ಮಾತನಾಡಿ, ʼಒಳ ಮೀಸಲಾತಿಗಾಗಿ ಅನೇಕ ವರ್ಷಗಳಿದ ಹೋರಾಟದ ಫಲವಾಗಿ ನ್ಯಾಯಾಲಯ ರಾಜ್ಯ ಸರ್ಕಾರಗಳಿಗೆ ಜಾರಿ ಮಾಡಲು ಅಧಿಕಾರ ನೀಡಿದೆ, ಆದರೂ ಸಿಎಂ ಸಿದ್ದರಾಮಯ್ಯ ರಾಜ್ಜ ಸರ್ಕಾರ ಅದನ್ನು ಜಾರಿಗೊಳಿಸಲು ಮೀನಮೇಷ ಎಣಿಸುತ್ತಿದೆʼ ಎಂದು ಖಂಡಿಸಿದರು.

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಬಾರದೆಂಬ ಉದ್ದೇಶದಿಂದ ಸಿದ್ದರಾಮಯ್ಯನವರ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಅದನ್ನು ಖಂಡಿಸಿ ನಾಳೆ ರಾಯಚೂರಿಗೆ ಆಗಮಿಸುತ್ತಿರುವ ಸಿಎಂ ಅವರಿಗೆ ಬಂದ್ ಮೂಲಕ ಸ್ವಾಗತ ಕೋರುತ್ತೇವೆ ನಾಳೆ ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿಯೇ ಒಳ ಮೀಸಲಾತಿ ಕುರಿತು ಸುಗ್ರಿವಾಜ್ಞೆ ಹೊರಡಿಸಬೇಕು, ನಿರ್ಲಕ್ಷ್ಯ ವಹಿಸಿದ್ದಲ್ಲಿ ಕಲ್ಯಾಣ ಕರ್ನಾಟಕ ಬಂದ್ ಜೊತೆಗೆ ಮುಂದಿನ ದಿನಗಳಲ್ಲಿ ಸಿಎಂ ಮನೆಗೆ ಮುತ್ತಿಗೆ ಹಾಕಲಾಗುತ್ತದೆʼ ಎಂದು ಎಚ್ಚರಿಸಿದರು.

ʼಒಳ ಮೀಸಲಾತಿಗಾಗಿ ರಾಯಚೂರು ಬಂದ್ ಕರೆ ಜಿಲ್ಲೆಗೆ ಸೀಮಿತಗೊಳಿಸದೆ ಮುಂದಿನ ದಿನಗಳಲ್ಲಿ ರಾಜ್ಯ ಬಂದ್‌ಗೆ ಕರೆ ಕೊಟ್ಟು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆʼ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉದ್ಯಮಿಗೆ ಬೆದರಿಕೆ | ಹೆಚ್‌ ಡಿ ಕುಮಾರಸ್ವಾಮಿ, ಎಂಎಲ್‌ಸಿ ರಮೇಶ್ ಗೌಡ ವಿರುದ್ಧ ಎಫ್​ಐಆರ್

ಪ್ರತಿಭಟನೆಯಲ್ಲಿ ಪ್ರಮುಖರಾದ ನರಸಿಂಹಲು ಮಾಡಗಿರಿ, ಜೆ.ಬಿ ರಾಜು, ಡಿಂಗ್ರಿ ನರಸಪ್ಪ, ನರೇಶ, ಈರಣ್ಣ ಬಂಡಾರಿ, ನರಸಪ್ಪ, ಬೀಮಣ್ಣ ಮಂಚಾಲಿ, ರಾಘವೇಂದ್ರ ಬೋರಡ್ಡಿ, ನರಸಿಂಹಲು, ಮೂಕಪ್ಪ, ರವಿ ಕುಮಾರ, ವಿಕ್ರಂ, ವೀರೇಶ, ಶಂಕರ್ ಸೇರಿದಂತೆ ವಿವಿಧ ಸಾಮಾಜಿಕ ಸಂಘಟಕರು ಬಂದ್‌ಗೆ ಬೆಂಬಲಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...